ಬಿಹಾರ ಚುನಾವಣೆ ಗೆಲುವು: ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ

KannadaprabhaNewsNetwork |  
Published : Nov 15, 2025, 03:15 AM IST
6 | Kannada Prabha

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಹಾರ ಸಿಎಂ ನಿತೀಶ್‌ ಕುಮಾರ್‌ ಅವರ ಡಬಲ್ ಎಂಜಿನ್‌ ಸರ್ಕಾರಕ್ಕೆ ಮತದಾರರು ಗೆಲುವಿನ ಮುದ್ರೆ ಒತ್ತಿದ್ದಾರೆ.

ಕನ್ನಡಪ್ರಭ ವಾರ್ತೆ ಮೈಸೂರುಬಿಹಾರ ಚುನಾವಣೆಯಲ್ಲಿ ಎನ್.ಡಿಎ ಒಕ್ಕೂಟ ಪ್ರಚಂಡ ಗೆಲವು ಸಾಧಿಸಿದ ಹಿನ್ನೆಲೆ ನಗರದ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.ನಗರದ ಬಿಜೆಪಿ ಕಚೇರಿ ಆವರಣದಲ್ಲಿ ಶುಕ್ರವಾರ ಮಧ್ಯಾಹ್ನ ಬಿಜೆಪಿ ನಗರ ಮತ್ತು ಗ್ರಾಮಾಂತರ ಘಟಕದಿಂದ ನಡೆದ ಸಂಭ್ರಮಾಚರಣೆಯಲ್ಲಿ ಭಾಗಿಯಾದ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಶಾಸಕ ಟಿ.ಎಸ್‌. ಶ್ರೀವತ್ಸ ಅವರ ನೇತೃತ್ವದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.ಈ ವೇಳೆ ಮಾತನಾಡಿದ ಶಾಸಕ ಟಿ.ಎಸ್‌. ಶ್ರೀವತ್ಸ, ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಹಾರ ಸಿಎಂ ನಿತೀಶ್‌ ಕುಮಾರ್‌ ಅವರ ಡಬಲ್ ಎಂಜಿನ್‌ ಸರ್ಕಾರಕ್ಕೆ ಮತದಾರರು ಗೆಲುವಿನ ಮುದ್ರೆ ಒತ್ತಿದ್ದಾರೆ. ನಿತೀಶ್‌ ಕುಮಾರ್‌ 20 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಗಮನಿಸಿ ಅಲ್ಲಿನ ಮತದಾರರು ಎನ್‌.ಡಿ.ಎಗೆ ಬೆಂಬಲ ನೀಡಿದ್ದಾರೆ ಎಂದರು.ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮತ್ತು ಅವರ ಪಕ್ಷ ಮತಗಳ್ಳತನ ನಡೆಯುತ್ತಿದೆ ಎಂದು ಬೊಬ್ಬೆ ಹೊಡೆಯುತ್ತಿದ್ದರೂ, ಚುನಾವಣಾ ಆಯೋಗ ಇದರಲ್ಲಿ ಶಾಮೀಲಾಗಿದೆ ಎಂದು ಆರೋಪಿಸಿದರು.ಜತೆಗೆ ಚುನಾವಣೆ ಪ್ರಚಾರದ ವೇಳೆ ಪ್ರಧಾನಿ ಮೋದಿ ಅವರ ತಾಯಿಯ ಬಗ್ಗೆ ಕೇವಲವಾಗಿ ಮಾತನಾಡಿದ್ದರು. ಇದರಿಂದ ಕೆಲರಳಿದ ಮತದಾರರು ಎನ್.ಡಿ.ಎ ಪರ ನಿಂತಿದ್ದಾರೆ ಎಂದು ಅವರು ತಿಳಿಸಿದರು.ಬಿಹಾರದಲ್ಲಿ ಹಿಂದೆಂದಿಗಿಂತಲೂ ಭರ್ಜರಿ ಗೆಲವು ದಾಖಲಿಸಿದ್ದು, ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಸಲಾದ ಅಪಪ್ರಚಾರ ಫಲಿಸಿಲ್ಲ. ಅಪಪ್ರಚಾರಕ್ಕೆ ಸರಿಯಾದ ಉತ್ತರವನ್ನು ದೇಶದ ಜನ ನೀಡಿದ್ದಾರೆ, ಮುಂದೆಯೂ ನೀಡುತ್ತಾರೆ. ಚುನಾವಣಾ ಆಯೋಗ ಮತ ಕಳ್ಳತನ ಬಗ್ಗೆ ದೂರು ನೀಡಲು ತಿಳಿಸಿದ್ದರೂ, ರಾಹುಲ್‌ ಗಾಂಧಿ ದೂರು ನೀಡಲು ಹೆದರಿದ್ದಾರೆ. ದೇಶದೆಲ್ಲೆಡೆ ಹಿಟ್ ಆ್ಯಂಡ್ ರನ್ ಮಾತ್ರವೇ ಮಾಡಿದ್ದಾರೆ ಎಂದು ಅವರು ಆರೋಪಿಸಿದರು.ಬಿಜೆಪಿ ನಗರಾಧ್ಯಕ್ಷ ಎಲ್‌. ನಾಗೇಂದ್ರ ಮಾತನಾಡಿ, ಬಿಹಾರದಲ್ಲಿ ಎನ್‌.ಡಿ.ಎ ಹಿಂದೆಂದಿಗಿಂತಲೂ ಹೆಚ್ಚು ಸ್ಥಾನಲ್ಲಿ ಗೆಲ್ಲುವ ಮೂಲಕ ಕಾಂಗ್ರೆಸ್‌ ಅಪಪ್ರಚಾರಕ್ಕೆ ಉತ್ತರ ನೀಡಿದೆ. ಪ್ರಧಾನಿ ಮೋದಿ, ನಾಯಕ ಅಮಿತ್‌ ಶಾ ಮತ್ತು ಜೆ.ಪಿ. ನಡ್ಡಾ ಅವರ ನಾಯಕತ್ವದಲ್ಲಿ ಒಳ್ಳೆಯ ಫಲಿತಾಂಶ ಲಭ್ಯವಾಗಿದೆ. ಕರ್ನಾಟಕದಲ್ಲಿ ಮುಂದೆ ನಡೆಯುವ ಚುನಾವಣೆಯಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎನ್‌. ಸುಬ್ಬಣ್ಣ, ಮುಖಂಡರಾದ ಕಿರಣ್‌ ಗೌಡ, ಜೋಗಿ ಮಂಜು, ಸಂತೋಷ್‌ ಕುಮಾರ್‌ ಮೊದಲಾದವರು ಪಾಲ್ಗೊಂಡಿದ್ದರು.

PREV

Recommended Stories

ಹಗಲಿನಲ್ಲೇ ಗುಣಮಟ್ಟದ ವಿದ್ಯುತ್ ಪೂರೈಕೆ
ಬಿಹಾರದಲ್ಲಿ ಜಯಭೇರಿದ ಎನ್‌ಡಿಎ: ಸಂಭ್ರಮೋತ್ಸವ