ದೇಶದ ಅಭಿವೃದ್ಧಿಗೆ ಕಾರ್ಮಿಕರ ಕೊಡುಗೆ ಅಪಾರ: ನ್ಯಾಯಾಧೀಶ ಆರ್.ಎಸ್.ಜೀತು

KannadaprabhaNewsNetwork |  
Published : May 16, 2026, 12:45 AM IST
 ನರಸಿಂಹರಾಜಪುರ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮವನ್ನು ಸಿವಿಲ್ ನ್ಯಾಯಾಧೀಶ ಆರ್.ಎಸ್.ಜೀತು ಉದ್ಘಾಟಿಸಿದರು. ತಹಶೀಲ್ದಾರ್ ಡಾ.ನೂರಲ್ ಹುದಾ, ವಕೀಲ  ಎಚ್.ಎಂ.ಬಸವರಾಜ್ ಉಪಸ್ಥಿತರಿದ್ದರು. | Kannada Prabha

ಸಾರಾಂಶ

ನರಸಿಂಹರಾಜಪುರದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರ ಕೊಡುಗೆ ಅಪರೂಪವಾಗಿದೆ ಎಂದು ಸಿವಿಲ್ ನ್ಯಾಯಾಧೀಶ ಆರ್.ಎಸ್.ಜೀತು ಅಭಿಪ್ರಾಯಪಟ್ಟರು.

ಪಟ್ಟಣ ಪಂಚಾಯಿತಿಯಲ್ಲಿ ಅಂತಾರಾಷ್ಟ್ರೀಯ ಕಾರ್ಮಿಕ ದಿನಾಚರಣೆ

ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ

ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರ ಕೊಡುಗೆ ಅಪರೂಪವಾಗಿದೆ ಎಂದು ಸಿವಿಲ್ ನ್ಯಾಯಾಧೀಶ ಆರ್.ಎಸ್.ಜೀತು ಅಭಿಪ್ರಾಯಪಟ್ಟರು.ಬುಧವಾರ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಸಹಾಯಕ ಅಭಿಯೋಜನಾ ಇಲಾಖೆ ಮತ್ತು ಪಟ್ಟಣ ಪಂಚಾಯಿತಿ ಆಶ್ರಯದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಕಾರ್ಮಿಕ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಸ್ವಾತಂತ್ರ್ಯ ಬಂದಾಗಿನಿಂದ ಕಾರ್ಮಿಕರ ಹಿತ ಕಾಪಾಡುವ ನಿಟ್ಟಿನಲ್ಲಿ ಕನಿಷ್ಠ ಕೂಲಿ ಕಾಯ್ದೆ, ಸಮಾನ ಕೆಲಸಕ್ಕೆ ಸಮಾನ ವೇತನ, ಕಾರ್ಮಿಕರ ದೌರ್ಜನ್ಯ ತಡೆಗಟ್ಟುವ, ಕಾರ್ಮಿಕರು ಕೆಲಸ ಮಾಡುವ ಸ್ಥಳಗಳಲ್ಲಿ ಮೂಲ ಸೌಲಭ್ಯ ಒದಗಿಸುವ, ಮಹಿಳಾ ಕಾರ್ಮಿಕರಿಗೆ ಹೆರಿಗೆ ರಜೆ ಸೌಲಭ್ಯ, ಮಗುವಿನ ಆರೈಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಹಲವು ಕಾನೂನುಗಳನ್ನು ಸರ್ಕಾರ ಜಾರಿಗೆ ತರಲಾಗಿದೆ. ಕಾರ್ಮಿಕರ ರಕ್ಷಣೆಯೇ ಈ ಕಾನೂನುಗಳ ಪ್ರಮುಖ ಉದ್ದೇಶ. ಮೈಸೂರು ಸಂಸ್ಥಾನದ ದಿವಾನರಾಗಿದ್ದ ಸರ್.ಎಂ.ವಿಶ್ವೇಶ್ವರಯ್ಯ ಕೈಗಾರೀಕರಣ ಇಲ್ಲವೇ ವಿನಾಶ ಎಂಬ ಹೇಳಿಕೆ ನೀಡುವ ಮೂಲಕ ಹಲವು ಕೈಗಾರಿಕೆ, ಬ್ಯಾಂಕುಗಳನ್ನು ಸ್ಥಾಪಿಸಿ ದೇಶದ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿಕೊಟ್ಟರು. ಭಾರತ ಸ್ವಾತಂತ್ರ್ಯ ಪಡೆದ ನಂತರ ಮೊದಲನೇ ಪಂಚವಾರ್ಷಿಕ ಯೋಜನೆಯಲ್ಲಿ ಕೃಷಿಗೆ ಆದ್ಯತೆ ನೀಡಲಾಯಿತು ಎಂದರು.

ಅಂತಾರಾಷ್ಟ್ರೀಯ ಕಾರ್ಮಿಕ ದಿನದ ಕುರಿತು ವಕೀಲ ಎಚ್.ಎಂ.ಬಸವರಾಜ್ ಉಪನ್ಯಾಸ ನೀಡಿ, ಕಾರ್ಮಿಕರ ಹಿತರಕ್ಷಣೆಗೆ 18ನೇ ಶತಮಾನದಿಂದಲೂ ಕಾನೂನು ಜಾರಿಗೆ ತರಲಾಗಿದೆ. ಕಾರ್ಮಿಕರನ್ನು ದುಡಿಸಿಕೊಳ್ಳುವ ಜತೆಗೆ ಅವರನ್ನು ಮನುಷ್ಯರಂತೆ ಕಾಣುವುದು. ಗಂಡು, ಹೆಣ್ಣು ಎಂಬ ತಾರತಮ್ಯ ಮಾಡದೆ ಸಮಾನ ವೇತನ, ದಿನಕ್ಕೆ ಕನಿಷ್ಠ 8 ಗಂಟೆಗಳ ಕೆಲಸ, ಕಾರ್ಮಿಕ ಸಂಘಟನೆ ಒಕ್ಕೂಟಗಳಿಗೆ ರಕ್ಷಣೆ ನೀಡುವುದು, ಮಾಲೀಕ ಮತ್ತು ಕಾರ್ಮಿಕರ ನಡುವೆ ಸಂಬಂಧ ಉತ್ತಮ ಪಡಿಸುವುದು. ಬಾಲಕಾರ್ಮಿಕ ಪದ್ದತಿ ಸಂಪೂರ್ಣ ನಿರ್ಮೂಲನೆ ಮಾಡುವುದು, ಶ್ರಮಕ್ಕೆ ಗೌರವ ಕೊಡುವುದು ಕಾರ್ಮಿಕ ರಕ್ಷಣೆಯ ಕಾನೂನುಗಳ ಉದ್ದೇಶವಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಪಪಂ ಆಡಳಿತಾಧಿಕಾರಿ ತಹಸೀಲ್ದಾರ್ ನೂರುಲ್ ಹುದಾ ಮಾತನಾಡಿ, ಸಂವಿಧಾನದ ಪ್ರಕಾರ ಪ್ರತಿ ಯೊಬ್ಬರಿಗೂ ಗೌರವದಿಂದ ಬದುಕುವ, ದುಡಿಮೆ ಮಾಡುವ ಹಕ್ಕಿದೆ. ಅಸಂಘಟಿತ ವಲಯದ ಕಾರ್ಮಿಕರಿಗೆ ಕನಿಷ್ಠ ಕೂಲಿ ಕಾಯ್ದೆ, ಸಮಾನಕೆಲಸಕ್ಕೆ ಸಮಾನ ವೇತನದ ಬಗ್ಗೆ ಅರಿವು ಮೂಡಿಸಬೇಕಾಗಿದೆ. ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ, ರಾಷ್ಟ್ರಗೀತೆ ಬರೆದ ರವೀಂದ್ರನಾಥ ಠಾಕೋರ್ ಸಹ ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರ ಶ್ರಮದ ಮಹತ್ವದ ಬಗ್ಗೆ ವಿವರಿಸಿದ್ದಾರೆ ಎಂದರು.

ಪಟ್ಟಣ ಪಂಚಾಯಿತಿ ಲೆಕ್ಕಾಧಿಕಾರಿ ಉಷಾ, ಮಮತಾ ನಾಗರಾಜ್ ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ಪೌರ ಕಾರ್ಮಿಕರು ಭಾಗಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಮಾಜದಲ್ಲಿನ ಅಂಕು-ಡೊಂಕು ತಿದ್ದುವ ಮಠಗಳು
ಟ್ರ್ಯಾಕ್ಟರ್ ಪಲ್ಟಿ: ಒಂದೇ ಕುಟುಂಬದ 7 ಸಾವು