ಕಾರ್ಯಕರ್ತರೇ ಸ್ಥಳೀಯ ಚುನಾವಣೆ ಎದುರಿಸಲು ಸಿದ್ಧರಾಗಿ

KannadaprabhaNewsNetwork |  
Published : Mar 26, 2025, 01:31 AM IST
25 ಟಿವಿಕೆ 2 – ತುರುವೇಕೆರೆಯಲ್ಲಿ ಸಹಕಾರ ಸಚಿವ ಕೆ.ಎನ್.ರಾಜಣ್ಣನವರನ್ನು ತಾಲೂಕು ಕಾಂಗ್ರೆಸ್ ವತಿಯಿಂದ ಗೌರವಿಸಲಾಯಿತು. | Kannada Prabha

ಸಾರಾಂಶ

ಇನ್ನು ಕೆಲ ತಿಂಗಳಲ್ಲೇ ಬರಲಿರುವ ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯನ್ನು ಎದುರಿಸಲು ಸಿದ್ಧರಾಗಿ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದರು.

ಕನ್ನಡಪ್ರಭವಾರ್ತೆ ತುರುವೇಕೆರೆ

ಇನ್ನು ಕೆಲ ತಿಂಗಳಲ್ಲೇ ಬರಲಿರುವ ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಯನ್ನು ಎದುರಿಸಲು ಸಿದ್ಧರಾಗಿ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದರು.ಪಟ್ಟಣದ ಮಾಯಸಂದ್ರ ರಸ್ತೆಯಲ್ಲಿರುವ ವಿಧಾನ ಪರಿಷತ್ ನ ಮಾಜಿ ಸದಸ್ಯ ಬೆಮಲ್ ಕಾಂತರಾಜ್ ರವರ ಕಛೇರಿಯಲ್ಲಿ ಸೋಮವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಕಾಂಗ್ರೆಸ್ ಪಕ್ಷ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳು ಜನರ ಮನಸ್ಸನ್ನು ಸೂರೆಗೊಂಡಿದೆ. ಕಾಂಗ್ರೆಸ್ ಬಡವರ ಪರವಾದ ಪಕ್ಷ ಎಂಬ ಮಾತು ಎಲ್ಲೆಡೆ ಇದೆ. ಈಗಾಗಲೇ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ನಲ್ಲಿ ಪುನಃ ಗ್ಯಾರಂಟಿಗಳನ್ನು ಮುಂದುವರೆಸಿದ್ದಾರೆ. ಇವೆಲ್ಲವೂ ಕಾಂಗ್ರೆಸ್ ಪಕ್ಷಕ್ಕೆ ಪೂರಕವಾಗಿದೆ. ಮುಂಬರುವ ಯಾವುದೇ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜನರ ಆಶೀರ್ವಾದ ಗಳಿಸಲಿದೆ ಎಂಬುದರಲ್ಲಿ ಸಂದೇಹವೇ ಇಲ್ಲ ಎಂದು ಕೆ.ಎನ್.ರಾಜಣ್ಣ ಹೇಳಿದರು. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಸಧೃಢವಾಗಿದೆ. ಹಾಗೆಯೇ ತುರುವೇಕೆರೆ ವಿಧಾನಸಭಾ ಕ್ಷೇತ್ರದಲ್ಲೂ ಸಹ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸಬೇಕಿದೆ. ಎಲ್ಲ ಮುಖಂಡರೂ ಒಂದಾಗಿ ಪಕ್ಷ ನಿಷ್ಠೆ ತೋರಿದಲ್ಲಿ ಕಾಂಗ್ರೆಸ್ ಇಲ್ಲೂ ಗೆಲುವು ಸಾಧಿಸುವುದರಲ್ಲಿ ಅನುಮಾನವೇ ಇಲ್ಲ. ಎಲ್ಲರೂ ಒಗ್ಗಟ್ಟಿನಿಂದ ಪಕ್ಷವನ್ನು ಗಟ್ಟಿಗೊಳಿಸಿ ಎಂದು ಕಾರ್ಯಕರ್ತರು ಮತ್ತು ಮುಖಂಡರಿಗೆ ಕಿವಿಮಾತು ಹೇಳಿದರು. ವಿಧಾನ ಪರಿಷತ್ ನ ಮಾಜಿ ಸದಸ್ಯ ಬೆಮಲ್ ಕಾಂತರಾಜ್ ಮಾತನಾಡಿ ಕಾಂಗ್ರೆಸ್ ಪಕ್ಷ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಂದ ಕೋಟ್ಯಾಂತರ ಬಡವರ ಮನೆಗಳು ಬೆಳಗಿವೆ. ಹಸಿವಿನಿಂದ ಯಾರೊಬ್ಬರೂ ಇಲ್ಲ ಎನ್ನುವ ಮಟ್ಟಕ್ಕೆ ಭರವಸೆ ಮೂಡಿದೆ. ಕಾಂಗ್ರೆಸ್ ಎಂದೆಂದೂ ಬಡವರ ಪರವಿರುವುದರಿಂದ ಬಡವರು ಸೇರಿದಂತೆ ಎಲ್ಲಾ ಸಮುದಾಯದ ಜನರು ಕಾಂಗ್ರೆಸ್ ಗೆ ಬೆಂಬಲ ನೀಡುವರು ಎಂದು ಹೇಳಿದರು. ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಸ್ಪರ್ಧಿಸಲು ಉತ್ಸುಕರಾಗಿರುವವರು ತಮ್ಮ ಪಕ್ಷದ ಕಾರ್ಯಕರ್ತರೊಂದಿಗೆ ಸದಾ ಕಾಲ ಸಂಪರ್ಕದಲ್ಲಿರಬೇಕು. ಅಲ್ಲದೇ ಸರ್ಕಾರದ ಗ್ಯಾರಂಟಿ ಯೋಜನೆಯಿಂದ ವಂಚಿತರಾಗಿರುವವರಿಗೆ ಸರ್ಕಾರದ ಸೌಲಭ್ಯವನ್ನು ಒದಗಿಸಲು ಪ್ರಾಮಾಣಿಕವಾಗಿ ಶ್ರಮಿಸಬೇಕೆಂದು ಕರೆ ನೀಡಿದರು.ಈ ವೇಳೆ ಸಹಕಾರ ಸಚಿವ ಕೆ.ಎನ್.ರಾಜಣ್ಣನವರನ್ನು ತಾಲೂಕು ಕಾಂಗ್ರೆಸ್ ವತಿಯಿಂದ ಗೌರವಿಸಲಾಯಿತು. ಈ ಸಂಧರ್ಭದಲ್ಲಿ ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ಗುಡ್ಡೇನಹಳ್ಳಿ ಪ್ರಸನ್ನ ಕುಮಾರ್, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೇವರಾಜು, ಸಿ.ಎಸ್.ಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೋಳಾಲ ನಾಗರಾಜು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಎನ್. ಆರ್.ಜಯರಾಮ್, ಶ್ರೀನಿವಾಸ್, ಎಪಿಎಂಸಿ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಗೋಣಿತುಮಕೂರು ಲಕ್ಷ್ಮೀಕಾಂತ್ ಸೇರಿದಂತೆ ಹಲವಾರು ಮಂದಿ ಇದ್ದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...