- ತುಮ್ಕೋಸ್ ಸಭಾಂಗಣದಲ್ಲಿ ಅಂತರ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ
ಚನ್ನಗಿರಿ: ದೇಶದ ಪ್ರಗತಿಯಲ್ಲಿ ಕಾರ್ಮಿಕರ ಪಾಲು ದೊಡ್ಡಿದೆ. ಕಾರ್ಮಿಕರೇ ಇಲ್ಲದಿದ್ದರೆ ಹಲವಾರು ಕೆಲಸ, ಕಾರ್ಯಗಳಿಗೆ ಹಿನ್ನಡೆಯಾಗಲಿದೆ ಎಂದು ಸ್ಥಳೀಯ ಜೆಎಂಎಫ್‌ಸಿ ನ್ಯಾಯಾಲಯದ ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಮಹಾಲಕ್ಷ್ಮೀ ಜಿ. ಹೇಳಿದರು.
ಶುಕ್ರವಾರ ಇಲ್ಲಿನ ತುಮ್ಕೋಸ್ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕು ಕಾರ್ಮಿಕ ಇಲಾಖೆ ಆಶ್ರಯದಲ್ಲಿ ಅಂತರ ರಾಷ್ಟ್ರೀಯ ಕಾರ್ಮಿಕ ದಿನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ಕಾರ್ಮಿಕರು ಶ್ರಮಜೀವಿಗಳು, ದೈಹಿಕವಾಗಿ ಕೆಲಸ ಮಾಡುವವರಾಗಿದ್ದಾರೆ. ಎಲ್ಲ ಕ್ಷೇತ್ರಗಳಲ್ಲಿಯೂ ಕಾರ್ಮಿಕರ ಅವಶ್ಯಕತೆ ಇದೆ. ಕಾರ್ಮಿಕ ಇಲ್ಲದಿದ್ದರೆ ಹಲವಾರು ಕೆಲಸಗಳು ಸ್ಥಗಿತಗೊಳ್ಳಲಿವೆ. ಶ್ರಮಿಕ ವರ್ಗದವರಿಂದ ಮಾತ್ರ ದೇಶದ ಆರ್ಥಿಕತೆ ಸದೃಢವಾಗಿರಲು ಸಾಧ್ಯ ಎಂದರು.
ಅತಿಥಿ ಉಪನ್ಯಾಸವನ್ನು ವಕೀಲ ಬಸವರಾಜ ಪೂಜಾರ್ ಕಾರ್ಮಿಕರ ಸಮಸ್ಯೆಗಳು ಮತ್ತು ಹೋರಾಟದ ಬಗ್ಗೆ ತಿಳಿಸಿದರು. ಮುಖ್ಯ ಅತಿಥಿಗಳಾಗಿ ಕಾರ್ಮಿಕ ಇಲಾಖೆ ಅಧಿಕಾರಿ ರಾಜಣ್ಣ, ತುಮ್ ಕೋಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮಧು, ಆರ್.ಬಾಬುಜಾನ್, ಎಂ.ಎಸ್.ಜಗದೀಶ್, ಬಸವರಾಜ್ ಪೂಜಾರ್ ಸೇರಿದಂತೆ ಮೊದಲಾದವರು ಹಾಜರಿದ್ದರು.
- - --9ಕೆಸಿಎನ್‌ಜಿ1.ಜೆಪಿಜಿ:
ಚನ್ನಗಿರಿ ತುಮ್ಕೋಸ್ ಸಭಾಂಗಣದಲ್ಲಿ ನಡೆದ ಅಂತರ ರಾಷ್ಟ್ರೀಯ ಕಾರ್ಮಿಕ ದಿನ ಸಮಾರಂಭವನ್ನು ನ್ಯಾಯಾಧೀಶರಾದ ಮಹಾಲಕ್ಷ್ಮೀ ಉದ್ಘಾಟಿಸಿದರು.