ಕನ್ನಡಪ್ರಭ ವಾರ್ತೆ ಬಾಗೇಪಲ್ಲಿ
ವಿಶ್ವ ಕಾರ್ಮಿಕರ ದಿನಾಚರಣೆ ಅಂಗವಾಗಿ ಸಿಐಟಿಯು, ಕೂಲಿ ಕಾರ್ಮಿಕರ ಸಂಘ, ಕರ್ನಾಟಕ ಪ್ರಾಂತ ರೈತ ಸಂಘ ಸಿಪಿಎಂ ಸೇರಿದಂತೆ ವಿವಿಧ ಸಂಘಟನೆಗಳವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾರ್ಮಿಕರ ಹಕ್ಕುಗಳಿಗೆ ಧಕ್ಕೆಕಾರ್ಮಿಕರ ಪರವಾಗಿ ಕಾಳಜಿವಹಿಸುವ ಬದಲಿಗೆ ಶ್ರೀಮಂತರ, ಕಾರ್ಪೊರೇಟಗಳ ಪರವಾಗಿ ನಮ್ಮನ್ನಾಳುವ ಸರ್ಕಾರಗಳು ಆಡಳಿತ ನಡೆಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ನಂತರ ಕಾರ್ಮಿಕರ ಹಕ್ಕುಗಳ ಕಾಯ್ದೆಗಳಿಗೆ ತಿದ್ದುಪಡಿ ಮಾಡುವ ಮೂಲಕ ದುಡಿಯುವ ಕಾರ್ಮಿಕ ವರ್ಗದವರಿಗೆ ಸಿಗಬೇಕಾಗಿರುವ ಹಕ್ಕುಗಳನ್ನು ಕಸಿದುಕೊಂಡ ಪರಿಣಾಮ ಕಾರ್ಮಿಕರು ಸೌಲಭ್ಯಗಳಿಂದ ವಂಚಿತರಾಗಿದ್ದಾರೆ ಎಂದು ಆರೋಪಿಸಿದರು.
ಇದಕ್ಕೂ ಮುನ್ನ ಸಿಪಿಎಂ ಪಕ್ಷದ ಕಚೇರಿ ಸುಂದರಯ್ಯ ಭವನದಿಂದ ಕೆಪಿಆರ್‌ಎಸ್. ಪ್ರಾಂತ ರೈತ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಮುಖಂಡರು ಪಟ್ಟಣದ ಮುಖ್ಯ ರಸ್ತೆಯಲ್ಲಿ ಮೆರವಣಿಗೆ ನಡೆಸಿದರು.