ಕಾರ್ಮಿಕರು ತಮ್ಮ ಹಕ್ಕು ಪಡೆದುಕೊಳ್ಳಲು ಸಂಘಟಿತರಾಗಿ

KannadaprabhaNewsNetwork | Published : Jan 2, 2024 2:15 AM

ಸಾರಾಂಶ

ಕಾರ್ಮಿಕರ ಸಂಘಟಿತರಾಗುವ ಮೂಲಕ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಬೇಕು ಕಾರ್ಮಿಕರ ಐಕ್ಯತೆಯನ್ನು ಮುರಿಯವ ಕೆಲಸಗಳು ನಡೆಯುತ್ತಿದ್ದು ದೇಶದ ಐಕ್ಯತೆಗಾಗಿ ಕಾರ್ಮಿಕರು ಅಲೋಚಿಸುವ ಗುಣವನ್ನು ಮೈಗೂಡಿಸಿಕೊಳ್ಳಬೇಕು ಎಂದು ಐಎನ್‌ಟಿಯುಸಿ ಕಾರ್ಮಿಕ ಸಂಘದ ಜಿಲ್ಲಾಧ್ಯಕ್ಷರ ಗೋವಿಂದರಾಜು ತಿಳಿಸಿದರು.

ಕಾರ್ಮಿಕರಿಗೆ ಒಂದು ದಿನದ ಅರಿವಿನ ಕಾರ್ಯಕ್ರಮ । ಗೋವಿಂದರಾಜು ಕರೆ

ಕನ್ನಡಪ್ರಭ ವಾರ್ತೆ ತುಮಕೂರು

ಕಾರ್ಮಿಕರ ಸಂಘಟಿತರಾಗುವ ಮೂಲಕ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಬೇಕು ಕಾರ್ಮಿಕರ ಐಕ್ಯತೆಯನ್ನು ಮುರಿಯವ ಕೆಲಸಗಳು ನಡೆಯುತ್ತಿದ್ದು ದೇಶದ ಐಕ್ಯತೆಗಾಗಿ ಕಾರ್ಮಿಕರು ಅಲೋಚಿಸುವ ಗುಣವನ್ನು ಮೈಗೂಡಿಸಿಕೊಳ್ಳಬೇಕು ಎಂದು ಐಎನ್‌ಟಿಯುಸಿ ಕಾರ್ಮಿಕ ಸಂಘದ ಜಿಲ್ಲಾಧ್ಯಕ್ಷರ ಗೋವಿಂದರಾಜು ತಿಳಿಸಿದರು.

ತುಮಕೂರು ಗ್ರಾಮಾಂತರದ ಹೆಬ್ಬೂರಿನ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಕಾರ್ಮಿಕರಿಗಾಗಿ ಹಮ್ಮಿಕೊಂಡಿದ್ದ ಒಂದು ದಿನದ ಅರಿವಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಮಿಕರು ಸಂಘಟಿತರಾಗಿ ತಮಗೆ ಸಿಗಬೇಕಾದ ಸವಲತ್ತುಗಳನ್ನು ಪಡೆದುಕೊಳ್ಳಬೇಕು, ಸಂಘಟಿತರಾದಗ ಮಾತ್ರ ಸಮಸ್ಯೆಗಳನ್ನು ಇತ್ಯಾರ್ಥಪಡಿಸಿಕೊಳ್ಳಲು ಸಾಧ್ಯವಾಗುತ್ತದೆ. ಕಟ್ಟಡ ಕಾರ್ಮಿಕರಿಗೆ ವಿವಿಧ ರೀತಿಯ ಸವಲತ್ತುಗಳು ದೊರೆಯುತ್ತಿದ್ದು ಅದನ್ನು ನೈಜ ಕಾರ್ಮಿಕರಿಗೆ ತಲುಪಿಸುವ ಕೆಲಸವನ್ನು ಮಾಡಬೇಕಾಗಿದೆ. ಆ ನಿಟ್ಟಿನಲ್ಲಿ ಕಾರ್ಮಿಕರು ಕೆಲಸ ಮಾಡಬೇಕು ಎಂದರು.

ದೇಶದ ಆರ್ಥಿಕ ಬೆಳವಣಿಗೆಗೆ ಕಾರ್ಮಿಕರ ಪಾತ್ರ ಬಹಳ ಮುಖ್ಯವಾಗಿದ್ದು ಆ ನಿಟ್ಟಿನಲ್ಲಿ ಆಡಳಿತ ನಡೆಸುವ ಸರ್ಕಾರಗಳು ಕಾರ್ಮಿಕರ ಪರವಾದ ನೀತಿಗಳನ್ನು ಜಾರಿಗೆ ತರಬೇಕು, ಕಟ್ಟಡ ಕಾರ್ಮಿಕರ ಮಕ್ಕಳಿಗೆ ನೀಡಲಾಗುವ ಶೈಕ್ಷಣಿಕ ಧನ ಸಹಾಯವನ್ನು ಈ ಕೂಡಲೇ ಬಿಡುಗಡೆ ಮಾಡಬೇಕು ಕಟ್ಟಡ ಕಾರ್ಮಿಕರ ಸಮಸ್ಯೆಗಳನ್ನು ಸರ್ಕಾರ ತಕ್ಷಣ ಇತ್ಯಾರ್ಥ ಪಡಿಸಬೇಕು ಎಂದರು.

ಐಎನ್‌ಟಿಯುಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಚ್.ಎಂ. ಯಲ್ಲಪ್ಪ ಮಾತನಾಡಿ, ಜಿಲ್ಲೆಯ ಪ್ರತಿ ಹೋಬಳಿಗಳಲ್ಲಿ ಕಟ್ಟಡ ಕಾರ್ಮಿಕರನ್ನು ಸಂಘಟಿಸಿ ಕಾರ್ಮಿಕರಿಗೆ ಅರಿವನ್ನು ಮೂಡಿಸುವ ಕೆಲಸವನ್ನು ಐಎನ್‌ಟಿಯುಸಿ ಮಾಡುತ್ತಿದ್ದು ಜಿಲ್ಲೆಯ ಪ್ರತಿ ಹೋಬಳಿಗಳಲ್ಲಿ ಅರಿವಿನ ಕಾರ್ಯಕ್ರಮಗಳು ನಡೆಯಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪರಮಶಿವಯ್ಯ ಐಎನ್‌ಟಿಯುಸಿ ಹೆಬ್ಬೂರು ಘಟಕದ ನರಸೇಗೌಡ, ಗಂಗರಾಜು ಉಪಸ್ಥಿತರಿದ್ದು ಕಾರ್ಯಗಾರದಲ್ಲಿ ಹೆಬ್ಬೂರು ಗ್ರಾಮಪಂಚಾಯ್ತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.

Share this article