ಕೂಲಿಕಾರರು ವಿಬಿ ಜಿ ರಾಮ್‌ ಜಿ ಯೋಜನೆಯ ಲಾಭ ಪಡೆಯಲಿ: ಚಂದ್ರಶೇಖರ ಬಿ. ಕಂದಕೂರ

KannadaprabhaNewsNetwork |  
Published : Aug 20, 2026, 02:15 AM IST
ಗಜೇಂದ್ರಗಡ ತಾಲೂಕಿನ ಗೋಗೇರಿ ಗ್ರಾಮಸ್ಥರೊಂದಿಗೆ ತಾಪಂ ಇಒ ಜಾಬ್ ಕಾರ್ಡ್ ಅಭಿಯಾನ ಕುರಿತು ವಿವರಿಸಿದರು. | Kannada Prabha

ಸಾರಾಂಶ

ವಿಬಿ ಜಿ ರಾಮ್ ಜಿ ಯೋಜನೆಯಡಿ ಜಾಬ್ ಕಾರ್ಡ್ ಇಲ್ಲದವರು ಹೊಸ ಜಾಬ್ ಕಾರ್ಡ್ ಮಾಡಿಸಿಕೊಳ್ಳಬೇಕು. ಜಾಬ್ ಕಾರ್ಡ್ ತಿದ್ದುಪಡಿ ಇದ್ದರೆ ತಿದ್ದುಪಡಿ ಮಾಡಿಸಿಕೊಳ್ಳಬಹುದು.

ಗಜೇಂದ್ರಗಡ: ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ ಆ್ಯಂಡ್ ಆಜೀವಿಕ ಮಿಷನ್(ಗ್ರಾಮೀಣ) ಯೋಜನೆಯಡಿ ಆ. ೧೫ರಿಂದ ಸೆ. ೧೫ರ ವರೆಗೆ ಜಾಬ್ ಕಾರ್ಡ್ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಕೂಲಿಕಾರರು ಜಾಬ್ ಕಾರ್ಡ್ ಮೇಳ ಅಭಿಯಾನದಲ್ಲಿ ಭಾಗವಹಿಸಬೇಕು ಎಂದು ತಾಪಂ ಇಒ ಚಂದ್ರಶೇಖರ ಬಿ. ಕಂದಕೂರ ಹೇಳಿದರು.

ತಾಲೂಕಿನ ಗೋಗೇರಿ ಗ್ರಾಪಂ ಮುಂಭಾಗದಲ್ಲಿ ಬುಧವಾರ ಜಾಬ್ ಕಾರ್ಡ್ ಮೇಳ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿಬಿ ಜಿ ರಾಮ್ ಜಿ ಯೋಜನೆಯಡಿ ಜಾಬ್ ಕಾರ್ಡ್ ಇಲ್ಲದವರು ಹೊಸ ಜಾಬ್ ಕಾರ್ಡ್ ಮಾಡಿಸಿಕೊಳ್ಳಬೇಕು. ಜಾಬ್ ಕಾರ್ಡ್ ತಿದ್ದುಪಡಿ ಇದ್ದರೆ ತಿದ್ದುಪಡಿ ಮಾಡಿಸಿಕೊಳ್ಳಬಹುದು. ಇ ಕೆವೈಸಿ ನವೀಕರಣಕ್ಕೆ ಅವಕಾಶ ನೀಡಲಾಗಿದೆ. ಗ್ರಾಮ ಪಂಚಾಯಿತಿ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಎಲ್ಲ ಕೂಲಿಕಾರರು ನಮ್ಮ ಸಿಬ್ಬಂದಿಗೆ ಸಹಕರಿಸಿ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದರು.

ಕೆಲಸದ ಅಗತ್ಯವಿರುವವರು ಉದ್ಯೋಗಕ್ಕಾಗಿ ನಮೂನೆ ೬ ತುಂಬಿ ಅರ್ಜಿ ಸಲ್ಲಿಸಿದರೆ ಯೋಜನೆಯಡಿ ಕೆಲಸ ಒದಗಿಸಲಾಗುವುದು. ವಿಬಿ ಜಿ ರಾಮ್ ಜಿ ಯೋಜನೆಯ ಕ್ರಿಯಾಯೋಜನೆಯಲ್ಲಿ ವೈಯಕ್ತಿಕ ಫಲಾನುಭವಿಗಳಾಗಿ ಆಯ್ಕೆಯಾಗಿರುವವರು ತಕ್ಷಣ ಕಾಮಗಾರಿ ಆದೇಶ ಪಡೆದು ಕಾಮಗಾರಿ ಆರಂಭಿಸುವಂತೆ ಸಿಬ್ಬಂದಿಗೆ. ಆ. ೧೫ರಿಂದ ಸೆ.೧೫ರ ವರೆಗೆ ಅಭಿಯಾನ ನಡೆಯಲಿದೆ. ಎಲ್ಲರೂ ಅಭಿಯಾನದಲ್ಲಿ ಭಾಗವಹಿಸಿ ವಿಬಿ ಜಿ ರಾಮ್ ಜಿ ಯೋಜನೆ ಸದುಪಯೋಗ ಪಡೆದುಕೊಳ್ಳಬಹುದು ಎಂದರು.

ವಿಬಿ ಜಿ ರಾಮ್ ಜಿ ಯೋಜನೆಯಡಿ ದೊರೆಯುವ ಉದ್ಯೋಗಾವಕಾಶ ಹಾಗೂ ಸೌಲಭ್ಯಗಳ ಕುರಿತು ಕೂಲಿ ಕಾರ್ಮಿಕರಿಗೆ ಮಾಹಿತಿ ನೀಡಿದ ಅವರು, ನಂತರ ಕಾಯಕ ಬಂಧುಗಳ ಹಾಗೂ ಗ್ರಾಮಸ್ಥರು ಜತೆ ಸಂವಾದ ನಡೆಸಿದ ಅವರು, ಯೋಜನೆಯಡಿ ಕೈಗೊಳ್ಳಲಾಗುವ ವಿವಿಧ ಕಾಮಗಾರಿಗಳು, ಉದ್ಯೋಗದ ಅವಕಾಶಗಳು ಹಾಗೂ ಯೋಜನೆಯ ಪ್ರಯೋಜನಗಳ ಕುರಿತು ವಿವರಿಸಿದರು. ತಾಲೂಕಿನಾದ್ಯಂತ ಜಾಬ್ ಕಾರ್ಡ್ ಮೇಳ ನಡೆಯುತ್ತಿದ್ದು, ಕೂಲಿ ಕಾರ್ಮಿಕರು ಸಕ್ರಿಯವಾಗಿ ಭಾಗವಹಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಭಾರತ ಜೋಡೋ: ರಾಜ್ಯ ಸರ್ಕಾರದ ಹೊಸ ಉಪಕ್ರಮವಾದ ಭಾರತ್ ಜೋಡೋ ಯುವ ಸಂಘದ ಮೂಲಕ ರಾಜ್ಯಾದ್ಯಂತ ಯುವಕರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಿ ನಾಯಕತ್ವದ ಗುಣಗಳನ್ನು ಬೆಳೆಸುವ ಮತ್ತು ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಯುವಕರನ್ನು ಸಬಲೀಕರಣ ಮಾಡುವ ಉದ್ದೇಶ ಹೊಂದಿದೆ. ಭಾರತ್ ಜೋಡೋ ನೋಂದಣಿ ಮಾಡಿಸಲು ೧೮ ವರ್ಷದಿಂದ ೩೫ ವರ್ಷದವರಾಗಿರಬೇಕು. ಪ್ರತಿ ಗ್ರಾಪಂ ಕನಿಷ್ಠ ೧೦೦ ಯುವಕರನ್ನು ನೋಂದಣಿ ಮಾಡಿಸಿದರೆ ಸಂಘ ರಚನೆಯಾಗುತ್ತದೆ. ಈ ಸಂಘದಲ್ಲಿ ಎಲ್ಲ ಸಮುದಾಯದ ಜನರು ಮಹಿಳೆಯರು ಇರಬೇಕು ಆನಿಟ್ಟಿನಲ್ಲಿ ನೋಂದಣಿ ಮಾಡಬೇಕು. ಸಂಘಕ್ಕೆ ವರ್ಷ ₹೧೦ ಲಕ್ಷ ಅನುದಾನ ಸರ್ಕಾರಿಂದ ನೀಡಲಾಗುತ್ತದೆ ಎಂದರು.

ಈ ವೇಳೆ ಐಇಸಿ ಸಂಯೋಜಕ ಮಂಜುನಾಥ ಹಳ್ಳದ, ಕಾರ್ಯದರ್ಶಿ ಎಂ.ಎಂ. ಗೋಡೆಕಾರ, ಎನ್.ಜಿ. ಭಾಗವಾನ, ಕೆ.ಬಿ. ಮಾದರ, ಡಿ.ಕೆ. ವಾಲಿಕಾರ, ಯಲ್ಲವ್ವ ಗಾರಗಿ, ನಿಂಗಪ್ಪ ಸೋಂಪೂರ ಸೇರಿ ಕಾಯಕ ಬಂಧುಗಳು ಹಾಗೂ ಗ್ರಾಮಸ್ಥರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ಪರ್ಧಾತ್ಮಕತೆಗೆ ತಕ್ಕಂತೆ ಛಾಯಾಗ್ರಹಣ ಉದ್ಯಮ ಬೆಳೆಯಲಿ: ಮಿಥುನ ಪಾಟೀಲ
ಶಿರಹಟ್ಟಿ ತಾಲೂಕಿನಲ್ಲಿ ಬೆಳೆವಿಮೆ ಕಂತು ಪಾವತಿಸಿದ ರೈತರಿಗಿಲ್ಲ ಪರಿಹಾರ!