ಕನ್ನಡಪ್ರಭ ವಾರ್ತೆ ಬಾಗಲಕೋಟೆ
ತಾಲೂಕಿನ ವೀರಾಪುರ ಗ್ರಾಮದ ಪುನರ್ವಸತಿ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಜ್ಞಾನಜ್ಯೋತಿ ವಿಕಾಸ ಅಸೋಸಿಯೇಶನ್ ಮತ್ತು ವೀರಾಪುರ ಗ್ರಾಮ ವಿಕಾಸ ವೇದಿಕೆ ಜಂಟಿಯಾಗಿ ಆಯೋಜಿಸಿದ್ದ ಕಾರ್ಮಿಕರ ನೋಂದಣಿ ಹಾಗೂ ಸ್ಮಾರ್ಟ್ ಕಾರ್ಡ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಕಟ್ಟಡ ಕಾರ್ಮಿಕಕರು, ಹೋಟೆಲ್ ಸಿಬ್ಬಂದಿ, ದಿನಗೂಲಿ ನೌಕರರು, ಇಟ್ಟಿಗೆ ಕಾರ್ಖಾನೆ ಕಾರ್ಮಿಕರು ಸೇರಿದಂತೆ ಅನೇಕ ಅಸಂಘಟಿತ ಕ್ಷೇತ್ರದ ಕಾರ್ಮಿಕರಿಗೆ ಸರ್ಕಾರದಿಂದ ವಿವಿಧ ಸೌಲಭ್ಯಗಳು ಲಭ್ಯವಾಗುತ್ತಿವೆ. ಈ ಸೌಲಭ್ಯಗಳ ಫಲಾನುಭವಿಗಳು ಆಗಲು ಕಾರ್ಡ್ ಪಡೆಯುವುದು ಅನಿವಾರ್ಯ. ಈಗಾಗಲೇ ಕಾರ್ಡ್ ಹೊಂದಿರುವವರು ತಮ್ಮ ಇತರ ಸಹೋದ್ಯೋಗಿಗಳಿಗೆ ಮಾಹಿತಿ ನೀಡಿ ನೋಂದಾಯಿಸಿಕೊಳ್ಳುವಂತೆ ಪ್ರೋತ್ಸಾಹಿಸಬೇಕು ಎಂದು ಹೇಳಿದರು.ಅಧ್ಯಕ್ಷತೆ ವಹಿಸಿದ್ದ ಬಸವಪ್ರಭು ಸರನಾಡಗೌಡ ಅವರು, ಜ್ಞಾನಜ್ಯೋತಿ ವಿಕಾಸ ಸಂಸ್ಥೆ ಜಿಲ್ಲೆಯಾದ್ಯಂತ ಅರ್ಥಪೂರ್ಣ ಕಾರ್ಯಗಳನ್ನು ನಡೆಸುತ್ತಿದೆ. ಇಂತಹ ಸೇವಾ ಕಾರ್ಯಗಳಲ್ಲಿ ನಮ್ಮನ್ನೂ ಸೇರಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.
ಉದ್ಯಮಿ ಸಂತೋಷ ಹೊಕ್ರಾಣಿ ಮಾತನಾಡಿ, ಕಾರ್ಮಿಕರು ದಿನಗೂಲಿ ಆದಾಯದಿಂದ ಸಂಸಾರ ನಡೆಸುವುದು ಕಷ್ಟ. ಅವರು ಸರ್ಕಾರದಿಂದ ಸೌಲಭ್ಯಗಳನ್ನು ಪಡೆದು ಆರ್ಥಿಕ, ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಮುನ್ನಡೆಯಬೇಕು ಎಂದು ಹೇಳಿದರು.