ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ಶಿಕ್ಷಕರ ಕಲಿಕಾ ಕೇಂದ್ರ ಕೋಟೆ ಶಾಲೆಯಲ್ಲಿ ತಾಲೂಕು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ಕಾರ್ಮಿಕ ಇಲಾಖೆ ಆಶ್ರಯದಲ್ಲಿ ನಡೆದ ಕಾರ್ಮಿಕ ಕಾಯ್ದೆಗಳು, ಯೋಜನೆಗಳು ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಕಾರ್ಮಿಕರಿಗಾಗಿ ಇರುವ ಯೋಜನೆಗಳು ಹಾಗೂ ಕಾಯ್ದೆಗಳನ್ನು ತಿಳಿದುಕೊಳ್ಳಬೇಕು. ಈ ಹಿಂದೆ ಮಾಲೀಕರು ಹೆಚ್ಚು ಕೆಲಸ ಮಾಡಿಕೊಂಡು ಕಡಿಮೆ ಕೂಲಿ ಜೊತೆಗೆ ನಿರಂತರವಾಗಿ ಕಾರ್ಮಿಕರನ್ನು ಶೋಷಣೆ ಮಾಡುತ್ತಿದ್ದರು ಎಂದರು.
ಕಾರ್ಮಿಕರಿಗೆ ಸಮಾನತೆ ಜೊತೆಗೆ ರಕ್ಷಣೆ ನೀಡಬೇಕೆಂಬ ಉದ್ದೇಶದಿಂದ ಹಲವಾರು ಕಾಯ್ದೆ ಜಾರಿಗೆ ತರಲಾಯಿತು. ಕೆಲಸಕ್ಕೆ ತಕ್ಕ ಕೂಲಿ, ಸಮಯ ನಿಗಧಿ, ವಾರಕ್ಕೆ ಒಂದು ದಿನ ರಜೆ, ವೈದ್ಯಕೀಯ ವೆಚ್ಚ, ವಿದ್ಯಾರ್ಥಿ ವೇತನ ಸೇರಿದಂತೆ ಹಲವು ಸೌಲಭ್ಯ ನೀಡಲಾಗಿದೆ. ಕಾರ್ಮಿಕರು ಕಾಯ್ದೆಯ ಬಗ್ಗೆ ತಿಳಿವಳಿಕೆ ಪಡೆದು ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕೆಂದರು.ಮಂಡ್ಯ ಉಪವಿಭಾಗದ ಕಾರ್ಮಿಕ ಅಧಿಕಾರಿ ಸುಭಾಷ್ ಎಂ.ಆಲದಕಟ್ಟಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಗೆ ಹಲವಾರು ಯೋಜನೆ ನೀಡಲಾಗುತ್ತಿದೆ. ಸೌಲಭ್ಯ ಪಡೆದುಕೊಳ್ಳಬೇಕೆಂದರು.
ಕಾರ್ಮಿಕರು ಈ ದೇಶದ ಆಸ್ತಿ. ದುಶ್ಚಟಗಳಿಂದ ದೂರವಾಗಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು, ಮಕ್ಕಳನ್ನು ಶಿಕ್ಷಿತರನ್ನಾಗಿ ಮಾಡಬೇಕು. ಕಾರ್ಮಿಕ ಇಲಾಖೆ ನೀಡುವ ಯೋಜನೆಗಳನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳಬೇಕೆಂದು ತಿಳಿವಳಿಕೆ ನೀಡಿದರು.