ಕನ್ನಡಪ್ರಭ ವಾರ್ತೆ ಗೋಕಾಕ
ನಗರದ ತಮ್ಮ ಗೃಹ ಕಚೇರಿಯಲ್ಲಿ ಶನಿವಾರ ಕಟ್ಟಡ ಕಾರ್ಮಿಕರು ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಶ್ರಮಶಕ್ತಿ ಯೋಜನೆಯಡಿ ನೋಂದಾಯಿತ ಕಾರ್ಮಿಕರಿಗೆ ವಿವಿಧ ಬಗೆಯ ಕಿಟ್ ವಿತರಿಸಿ ಮಾತನಾಡಿದರು.
ಸರ್ಕಾರ ಎಲ್ಲ ರೀತಿಯ ಕೆಲಸ ಮಾಡುವ ಸಂಘಟಿತ, ಅಸಂಘಟಿತ ಕಾರ್ಮಿಕರಿಗೆ ಅನೇಕ ಸೌಲಭ್ಯ ನೀಡುತ್ತಿದೆ. ಗೌಂಡಿ ಕಿಟ್, ಎಲೆಕ್ಟ್ರಿಷಿಯನ್ ಮಷಿನ್ ಕಿಟ್, ಪ್ಲಂಬಿಂಗ್ ಕಿಟ್, ಟೈಲ್ಸ್ ವರ್ಕ್ ಕಿಟ್, ರೋಡ್ ಕನ್ಸಟ್ರಕ್ಷನ್ ವರ್ಕ್ ಕಿಟ್‌ಗಳನ್ನು ಸಾವಿರಕ್ಕೂ ಹೆಚ್ಚು ಕಾರ್ಮಿಕರಿಗೆ ವಿತರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.ಕಾರ್ಮಿಕ ನೀರೀಕ್ಷಕ ಅಶೋಕ ವಡ್ಡರ, ಜಿಪಂ ಮಾಜಿ ಸದಸ್ಯ ಟಿ.ಆರ್. ಕಾಗಲ, ಶಾಸಕರ ಆಪ್ತ ಸಹಾಯಕ ಭೀಮಗೌಡ ಪೋಲಿಸಗೌಡರ, ಸುರೇಶ ಸನದಿ, ನಗರಸಭೆ ಅಧ್ಯಕ್ಷ ಪ್ರಕಾಶ ಮುರಾರಿ, ಸದಸ್ಯ ಬಸವರಾಜ ಆರೇನ್ನವರ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ರುದ್ರಮನಿ ಹಿರೇಮಠ, ಬಸವರಾಜ ಹಿರೇಮಠ, ಬೀರಪ್ಪ ಕಮತಾರ ಇದ್ದರು.