ಕಾಮಿರ್ಕರು ಸರ್ಕಾರದ ಸೌಲಭ್ಯ ಸದ್ಬಳಕೆ ಮಾಡಿಕೊಳ್ಳಿ

KannadaprabhaNewsNetwork |  
Published : Oct 25, 2024, 01:01 AM IST
ಭದ್ರಾವತಿ ಹಳೇನಗರದ ವೀರಶೈವ ಸಭಾ ಭವನದಲ್ಲಿ ಗುರುವಾರ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗು ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ `ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಮೇಸನ್ ಮತ್ತು ವೆಲ್ಡಿಂಗ್ ಕಿಟ್‌ಗಳ ವಿತರಣೆ ಮತ್ತು ಅರಿವು ಕಾರ್ಯಕ್ರಮ'ದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಕಿಟ್‌ಗಳನ್ನು ವಿತರಿಸಿದರು. | Kannada Prabha

ಸಾರಾಂಶ

ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಮೇಸನ್ ಮತ್ತು ವೆಲ್ಡಿಂಗ್ ಕಿಟ್‌ಗಳ ವಿತರಣೆ ಮತ್ತು ಅರಿವು ಕಾರ್ಯಕ್ರಮವನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.

ಕನ್ನಡಪ್ರಭ ವಾರ್ತೆ ಭದ್ರಾವತಿ

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹೆಚ್ಚು ಸಂಘಟಿತರಾಗುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ತಮ್ಮ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಗಮನ ಹರಿಸಬೇಕು ಎಂದು ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಮನವಿ ಮಾಡಿದರು.

ಹಳೇನಗರದ ವೀರಶೈವ ಸಭಾ ಭವನದಲ್ಲಿ ಗುರುವಾರ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹಾಗೂ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಮೇಸನ್ ಮತ್ತು ವೆಲ್ಡಿಂಗ್ ಕಿಟ್‌ಗಳ ವಿತರಣೆ ಮತ್ತು ಅರಿವು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಸಮಾಜದಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಶ್ರಮಿ ಹೆಚ್ಚಿದ್ದಾಗಿದೆ. ಶಾಸಕರಿಗೆ ಮತ್ತು ನಮ್ಮ ಕುಟುಂಬದವರಿಗೆ ಅವರ ಶ್ರಮದ ಅರಿವಿದೆ. ಈ ಹಿನ್ನಲೆಯಲ್ಲಿ ಪ್ರಾಮಾಣಿಕವಾಗಿ ಅವರ ನೋವು-ನಲಿವುಗಳಿಗೆ ಸ್ಪಂದಿಸುತ್ತಿದ್ದೇವೆ. ಯಾವುದೇ ತಾರತಮ್ಯವಿಲ್ಲದೆ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಮುಂದಾಗಿದ್ದೇವೆ. ಇದಕ್ಕೆ ಪೂರಕವಾಗಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಸಹ ಒಗ್ಗಟ್ಟಾಗಿ ತಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಮುಂದಾಗಬೇಕು ಎಂದು ಹೇಳಿದರು.

ನಗರಸಭೆ ಅಧ್ಯಕ್ಷ ಎಂ.ಮಣಿ ಎಎನ್‌ಎಸ್, ಶಿಮುಲ್ ನಿರ್ದೇಶಕ ಎಸ್.ಕುಮಾರ್, ಮಾಜಿ ಉಪಾಧ್ಯಕ್ಷ ಚನ್ನಪ್ಪ, ಸೂಡ ಸದಸ್ಯ ಎಚ್.ರವಿಕುಮಾರ್, ಕಾರ್ಮಿಕ ಮುಖಂಡ ವಿ.ವಿನೋದ್, ಸಿ.ಎಂ.ಖಾದರ್ ಸೇರಿದಂತೆ ಇನ್ನಿತರರು ಮಾತನಾಡಿದರು. ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಿದ್ದರು. ಬಗರ್ ಹುಕುಂ ತಾಲೂಕು ಅಧ್ಯಕ್ಷ ಎಸ್. ಮಣಿಶೇಖರ್, ಉದ್ಯಮಿ ಬಿ.ಕೆ.ಜಗನ್ನಾಥ, ನಗರಸಭೆ ಸದಸ್ಯರಾದ ಬಸವರಾಜ.ಬಿ. ಆನೆಕೊಪ್ಪ, ಬಷೀರ್ ಅಹಮದ್, ಗೀತಾ ರಾಜ್‌ಕುಮಾರ್, ಅನುಸುಧಾ ಮೋಹನ್ ಪಳನಿ, ಕೆ.ಸುದೀಪ್ ಕುಮಾರ್, ಸೈಯದ್ ರಿಯಾಜ್, ಸರ್ವಮಂಗಳ ಭೈರಪ್ಪ, ಕಾರ್ಮಿಕ ಮುಖಂಡರಾದ ಚಂದ್ರಶೇಖರ್, ಸುಂದರ್ ಬಾಬು, ಅಭಿಲಾಷ್, ಬಗರ್ ಹುಕುಂ ತಾಲೂಕು ಸಮಿತಿ ಸದಸ್ಯೆ ಎಂ.ಎಸ್.ಸುಧಾಮಣಿ, ಕಸಾಪ ಕಟ್ಟಡ ನಿರ್ಮಾಣ ಸಮಿತಿ ಅಧ್ಯಕ್ಷೆ ಡಾ.ವಿಜಯದೇವಿ ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!