- ನ್ಯಾಮತಿಯಲ್ಲಿ ಜಿಪಂ ಸಿಇಒ ಗಿತ್ತೆ ಮಾಧವ ಬೆಳಗಿನ ನಡೆ-ಗ್ರಾಮಗಳ ಕಡೆ - ಉದ್ಯೋಗ ಖಾತ್ರಿ ಕಾರ್ಮಿಕರ ಆರೋಗ್ಯ, ಸುರಕ್ಷತೆ ಬಗ್ಗೆ ಒತ್ತು ನೀಡಬೇಕು - - -
ಬೆಳಗಿನ ನಡೆ ಗ್ರಾಮಗಳ ಕಡೆ ಕಾರ್ಯಕ್ರಮದಡಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ ವಿಠ್ಠಲ ರಾವ್ ನ್ಯಾಮತಿ ತಾಲೂಕಿನ ವಿವಿಧ ಗ್ರಾಮ ಪಂಚಾಯಿಗಳು, ಗ್ರಾಮಗಳಿಗೆ ಭೇಟಿ ನೀಡಿ, ಅಭಿವೃದ್ಧಿ ಕಾರ್ಯಗಳ ಪ್ರಗತಿ ಪರಿಶೀಲನೆ, ಸಾರ್ವಜನಿಕ ಸೌಲಭ್ಯಗಳ ಸ್ಥಿತಿ ವೀಕ್ಷಿಸಿದರು.
ನ್ಯಾಮತಿ ತಾಲೂಕು ಪಲವನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ಗಂಜೇನಹಳ್ಳಿ ಗ್ರಾಮದಲ್ಲಿ ಭೇಟಿ ನೀಡಿ, ಗ್ರಾಮದ ಪ್ರತಿ ಬೀದಿಗೂ ಭೇಟಿ ನೀಡಿದ ಜಿಪಂ ಸಿಇಓ ಗಿತ್ತೆ ಮಾಧವ ವಿಠ್ಠಲ ರಾವ್, ಜಲ ಜೀವನ ಮಿಷನ್ ಕಾಮಗಾರಿ ಪ್ರಗತಿ ಪರಿಶೀಲಿಸಿ, ಗ್ರಾಮಸ್ಥರೊಂದಿಗೆ ಅಲ್ಲಿನ ಕುಂದುಕೊರತೆಗಳ ಬಗ್ಗೆ ಆಲಿಸಿದರು.ಚಟ್ನಹಳ್ಳಿ ಗ್ರಾಪಂ ಸೂಗಿಲು ಗ್ರಾಮದಲ್ಲಿ ಜಲಜೀವನ ಮಿಷನ್ ಕಾಮಗಾರಿ ಪರಿಶೀಲಿಸಿದ ನಂತರ ಸವಳಂಗ ಗ್ರಾಪಂಗೆ ಭೇಟಿ ನೀಡಿದ ಸಿಇಒ ಗಿತ್ತೆ ಮಾಧವ ಅಲ್ಲಿನ ಮೆಟ್ರಿಕ್‌ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ವೀಕ್ಷಿಸಿ, ಹಾಸ್ಟೆಲ್ ಮೂಲಸೌಲಭ್ಯಗಳ ಬಗ್ಗೆ ಚರ್ಚಿಸಿದರು. ವಿದ್ಯಾರ್ಥಿಗಳ ಜೊತೆಗೆ ಸಂವಾದ ನಡೆಸಿ, ವಿದ್ಯಾರ್ಥಿಗಳಿಗೆ ಅಗತ್ಯಕ್ಕೆ ವ್ಯವಸ್ಥೆಗಳನ್ನು ಕಲ್ಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಸವಳಂಗದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಆಸ್ಪತ್ರೆ ಸ್ವಚ್ಛತೆ ಹಾಗೂ ಸೇವಾ ನಿರ್ವಹಣೆ ಪರಿಶೀಲಿಸಿ, ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಆಸ್ಪತ್ರೆ ವೈದ್ಯರು, ಸಿಬ್ಬಂದಿ ಬಗ್ಗೆ ಸಿಇಒ ಮೆಚ್ಚುಗೆ ವ್ಯಕ್ತಪಡಿಸಿದರು. ಮಾದಾಪುರ ಗ್ರಾಮದಲ್ಲಿ ಮಹಾತ್ಮ ಗಾಂಧಿ ನರೇಗಾ ಕಾಮಗಾರಿ ಸ್ಥಳ ವೀಕ್ಷಿಸಿ, ಕಾಮಗಾರಿ ಬಗ್ಗೆ ಮಾಹಿತಿ ಪಡೆದು, ಕೂಲಿಕಾರರ ಆರೋಗ್ಯ, ಸುರಕ್ಷತೆಗೆ ವಿಶೇಷ ಗಮನ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಸುರಹೊನ್ನೆ ಗ್ರಾಪಂನಲ್ಲಿ ನರೇಗಾ ಕಾಮಗಾರಿ ವೀಕ್ಷಿಸಿ, ಕೂಲಿಕಾರರ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಿದರು. ಚಿನ್ನಿಕಟ್ಟೆ ಗ್ರಾಪಂ ವ್ಯಾಪ್ತಿಯ ಸೂರಗೊಂಡನಕೊಪ್ಪ, ಬಿದರಹಳ್ಳಿ ಗ್ರಾಮಗಳಲ್ಲಿ ಜಲ ಜೀವನ್ ಮಿಷನ್ ಕಾಮಗಾರಿ ಪರಿಶೀಲಿಸಿ, ಗ್ರಾಮಸ್ಥರೊಂದಿಗೆ ಸಂವಾದದಲ್ಲಿ ಅಲ್ಲಿನ ಸಮಸ್ಯೆಗ ಬಗ್ಗೆ ಸ್ಪಂದಿಸಿದರು. ಕಡೆಗೆ ಬಸವನಹಳ್ಳಿ ಗ್ರಾಪಂ ವ್ಯಾಪ್ತಿಯ ಮಾದನಬಾವಿ ಗ್ರಾಮದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೈಗೊಂಡಿರುವ ಕೆರೆ ಹೂಳೆತ್ತುವ ಕಾಮಗಾರಿಯನ್ನು ಸಿಇಓ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಕೂಲಿ ಕಾರ್ಮಿಕರ ಅಹವಾಲು ಸಹ ಆಲಿಸಿದರು.
ಬೆಳಗಿನ ನಡೆ–ಗ್ರಾಮಗಳ ಕಡೆ ಕಾರ್ಯಕ್ರಮದ ಮೂಲಕ ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಗ್ರಾಮ ಮಟ್ಟದ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ನೀಡುವ ಸದುದ್ದೇಶದಿಂದ ಸ್ಥಳೀಯ ಸಮಸ್ಯೆಗಳನ್ನು ನೇರವಾಗಿ ಅರಿತು, ಜನರೊಂದಿಗೆ ಸಂವಾದ ನಡೆಸುತ್ತಿರುವುದು ಗ್ರಾಮಸ್ಥರಲ್ಲಿ ವಿಶ್ವಾಸ ಮತ್ತು ನಿರೀಕ್ಷೆಯನ್ನು ಹುಟ್ಟು ಹಾಕಿರುವುದು ಸುಳ್ಳಲ್ಲ. ..................ಕ್ಯಾಪ್ಷನ್19ಕೆಡಿವಿಜಿ13, 14-ನ್ಯಾಮತಿ ತಾಲೂಕಿನಲ್ಲಿ ಶುಕ್ರವಾರ ಬೆಳಗಿನ ನಡೆ ಗ್ರಾಮಗಳ ಕಡೆ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧಿ ನರೇಗಾ ಕೂಲಿ ಕಾರ್ಮಿಕರೊಂದಿಗೆ ಜಿಪಂ ಸಿಇಓ ಗಿತ್ತೆ ಮಾಧವ ವಿಠ್ಠಲರಾವ್. ................19ಕೆಡಿವಿಜಿ15, 16-ನ್ಯಾಮತಿ ತಾಲೂಕಿನಲ್ಲಿ ಶುಕ್ರವಾರ ಬೆಳಗಿನ ನಡೆ ಗ್ರಾಮಗಳ ಕಡೆ ಕಾರ್ಯಕ್ರಮದಲ್ಲಿ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ್ದ ವೇಳೆ ಶಾಲಾ ಹಾಸ್ಟೆಲ್‌ಗೆ ಭೇಟಿ ನೀಡಿ, ಅಲ್ಲಿನ ಸೌಲಭ್ಯಗಳ ಬಗ್ಗೆ, ಕುಂದು ಕೊರತೆ ಬಗ್ಗೆ ಮಕ್ಕಳೊಂದಿಗೆ ಚರ್ಚಿಸುತ್ತಿರುವ ಜಿಪಂ ಸಿಇಓ ಗಿತ್ತೆ ಮಾಧವ ವಿಠ್ಠಲರಾವ್.................19ಕೆಡಿವಿಜಿ17-ನ್ಯಾಮತಿ ತಾಲೂಕಿನಲ್ಲಿ ಶುಕ್ರವಾರ ಬೆಳಗಿನ ನಡೆ ಗ್ರಾಮಗಳ ಕಡೆ ಕಾರ್ಯಕ್ರಮದಲ್ಲಿ ವಿವಿಧ ಗ್ರಾಮಗಳಲ್ಲಿ ಜಲಜೀವನ ಮಿಷನ್ ಹಾಗೂ ಗ್ರಾಮದ ಸಮಸ್ಯೆ ಬಗ್ಗೆ ಅಹವಾಲು ಆಲಿಸುತ್ತಿರುವ ಜಿಪಂ ಸಿಇಓ ಗಿತ್ತೆ ಮಾಧವ ವಿಠ್ಠಲರಾವ್.