ಪಕ್ಷಕ್ಕೆ ಶಕ್ತಿಯಾಗಿರುವ ಕಾರ್ಯಕರ್ತರನ್ನು ಗೌರವಿಸಬೇಕು: ಡಾ.ಸಿದ್ದರಾಮಯ್ಯ

KannadaprabhaNewsNetwork |  
Published : Apr 07, 2026, 01:30 AM IST
6ಕೆಎಂಎನ್‌ಡಿ-5ಮಂಡ್ಯದ ಸುಭಾಷ್‌ನಗರದಲ್ಲಿರುವ ಬಿಜೆಪಿ ಕಚೇರಿ ವಿಕಾಸಭವನದಲ್ಲಿ ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನಾಚರಣೆಯನ್ನು ಮುಖಂಡರು, ಕಾರ್ಯಕರ್ತರು ಆಚರಿಸಿದರು. | Kannada Prabha

ಸಾರಾಂಶ

ಬಿಜೆಪಿ ಅಧಿಕಾರಾವಧಿಯಲ್ಲಿ ಕಾಶ್ಮೀರದಲ್ಲಿ ಆರ್ಟಿಕಲ್ 370 ವಿಧಿಯನ್ನು ರದ್ದುಪಡಿಸಲಾಯಿತು. ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಮತ್ತು ಡಿಜಿಟಲ್ ಇಂಡಿಯಾದಂತಹ ಯೋಜನೆ ಹಾಗೂ ಆತ್ಮನಿರ್ಭರದಂತಹ ಮಹತ್ವದ ಯೋಜನೆಗಳನ್ನು ಜಾರಿಗೊಳಿಸುವುದರೊಂದಿಗೆ ಜನಹಿತ ಆಡಳಿತ ನೀಡುತ್ತಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನವನ್ನು ಪಕ್ಷದ ಕಚೇರಿ ವಿಕಾಸ ಭವನದಲ್ಲಿ ಕಾರ್ಯಕರ್ತರು ಆಚರಿಸಿದರು.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಮಂಡಳಿ ಸದಸ್ಯ ಡಾ.ಸಿದ್ದರಾಮಯ್ಯ ಮಾತನಾಡಿ, ರಾಷ್ಟ್ರೀಯ ಚಿಂತನೆಗಳ ಮೂಲಕ ಅಭಿವೃದ್ಧಿಯ ಪಥಕ್ಕೆ ನಾಂದಿ ಹಾಡಿದ ಪಕ್ಷದ ಹಿರಿಯರನ್ನು ಈ ಸಂದರ್ಭದಲ್ಲಿ ಸ್ಮರಿಸಿಕೊಳ್ಳಬೇಕಿದೆ. ತಳಮಟ್ಟದಿಂದ ಪಕ್ಷವನ್ನು ಬಲಪಡಿಸುತ್ತಿರುವ ಕಾರ್ಯಕರ್ತರ ಶ್ರಮವನ್ನು ಗೌರವಿಸಬೇಕು ಎಂದರು.

ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸೈದ್ಧಾಂತಿಕ ಬೆಂಬಲದೊಂದಿಗೆ ಅಸ್ತಿತ್ವಕ್ಕೆ ಬಂದಿತು. ಹಿಂದೂ ಸಂಸ್ಕೃತಿ ಮತ್ತು ರಾಷ್ಟ್ರೀಯತೆಯನ್ನು ಎತ್ತಿ ಹಿಡಿಯುವುದು ಇದರ ಮುಖ್ಯ ಉದ್ದೇಶವಾಗಿದೆ. ತುರ್ತು ಪರಿಸ್ಥಿತಿಯ ನಂತರ ಇಂದಿರಾ ಗಾಂಧಿಯವರ ಕಾಂಗ್ರೆಸ್ ಸರ್ಕಾರವನ್ನು ಸೋಲಿಸಲು ಜನ ಸಂಘವು ಇತರೆ ವಿರೋಧಿ ಪಕ್ಷಗಳೊಂದಿಗೆ ಸೇರಿ ಜನತಾ ಪಾರ್ಟಿ ಎಂಬ ಒಕ್ಕೂಟವನ್ನು ರಚಿಸಿತು. ಆಂತರಿಕ ಭಿನ್ನಾಭಿಪ್ರಾಯಗಳಿಂದ ಒಕ್ಕೂಟ ಪತನಗೊಂಡಿತು.

ನಂತರ 1980ರ ಏಪ್ರಿಲ್ 6ರಂದು ಭಾರತೀಯ ಜನತಾ ಪಕ್ಷ ಸ್ಥಾಪನೆಯಾಯಿತು. ಅಟಲ್‌ ಬಿಹಾರಿ ವಾಜಪೇಯಿ ಅವರು ಇದರ ಮೊದಲ ಅಧ್ಯಕ್ಷರಾದರು. 1984ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕೇವಲ 2 ಸ್ಥಾನಗಳನ್ನು ಗೆಲುವು ಸಾಧಿಸಿತ್ತು ಎಂದು ವಿವರಿಸಿದರು.

ಎಲ್.ಕೆ.ಅಡ್ವಾಣಿ ಅವರು ನಡೆಸಿದ ರಥಯಾತ್ರೆಗೆ ದೇಶಾದ್ಯಂತ ಜನಪ್ರಿಯತೆಯನ್ನು ತಂದುಕೊಡುವ ಮೂಲಕ ಬಿಜೆಪಿಗೆ ಒಂದು ರೀತಿಯಲ್ಲಿ ಬಲ ಬಂದಂತಾಯಿತು. 1996ರಲ್ಲಿ ಬಿಜೆಪಿ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿತು. ಅಂದು ವಾಜಪೇಯಿ ಅವರು 13 ದಿನಗಳ ಪ್ರಧಾನಿಯಾಗಿದ್ದರು. ನಂತರ ಎನ್‌ಡಿಎ ಅಸ್ತಿತ್ವಕ್ಕೆ ಬಂದು 1998 ಮತ್ತು 99ರಲ್ಲಿ ಅಧಿಕಾರಕ್ಕೆ ಬಂದ ಎನ್‌ಡಿಎಯಲ್ಲಿ ವಾಜಪೇಯಿ ಅವರು ಪೂರ್ಣಾವಧಿ ಪ್ರಧಾನಿಯಾಗಿ 1999 ರಿಂದ 2004ರವರೆಗೆ ಪ್ರಧಾನಿಯಾಗಿ ಅಧಿಕಾರ ನಡೆಸಿದರು ಎಂದರು.

2014ರಲ್ಲಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಬಿಜೆಪಿ 282 ಸ್ಥಾನಗಳನ್ನು ಗೆದ್ದು ಮೂರು ದಶಕಗಳ ನಂತರ ಏಕಾಂಗಿಯಾಗಿ ಬಹುಮತ ಪಡೆದ ಪಕ್ಷವಾಯಿತು. ನಂತರದ ದಿನಗಳಲ್ಲಿ 2019ರಲ್ಲಿ 303 ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತಷ್ಟು ಬಲಿಷ್ಠವಾಯಿತು. 2024ರಲ್ಲೂ ಮೋದಿ ನೇತೃತ್ವದ ಎನ್‌ಡಿಎ ಒಕ್ಕೂಟದ ಸತತ ಮೂರನೇ ಬಾರಿ ಅಧಿಕಾರಕ್ಕೆ ಬಂದಿದೆ ಎಂದರು.

ಬಿಜೆಪಿ ಅಧಿಕಾರಾವಧಿಯಲ್ಲಿ ಕಾಶ್ಮೀರದಲ್ಲಿ ಆರ್ಟಿಕಲ್ 370 ವಿಧಿಯನ್ನು ರದ್ದುಪಡಿಸಲಾಯಿತು. ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಮತ್ತು ಡಿಜಿಟಲ್ ಇಂಡಿಯಾದಂತಹ ಯೋಜನೆ ಹಾಗೂ ಆತ್ಮನಿರ್ಭರದಂತಹ ಮಹತ್ವದ ಯೋಜನೆಗಳನ್ನು ಜಾರಿಗೊಳಿಸುವುದರೊಂದಿಗೆ ಜನಹಿತ ಆಡಳಿತ ನೀಡುತ್ತಿದೆ ಎಂದರು.

ಮುಖಂಡ ಇಂಡುವಾಳು ಎಸ್. ಸಚ್ಚಿದಾನಂದ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿವೇಕ್, ನಗರಾಧ್ಯಕ್ಷ ಪ್ರಸನ್ನಕುಮಾರ್, ಗ್ರಾಮಾಂತರ ಅಧ್ಯಕ್ಷ ಭೀಮೇಶ್, ರಾಸಿ ಸಿದ್ದರಾಜು, ಸಿ.ಟಿ. ಮಂಜುನಾಥ್, ಚಂದ್ರು, ಎಂ.ಬಿ.ರಮೇಶ್, ಕ್ರಾಂತಿ ಮಂಜು, ಗೊರವಾಲೆ ಶಿವಣ್ಣ, ಆನಂದ್ ಸೇರಿದಂತೆ ಇತರರಿದ್ದರು.

ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನ ಆಚರಣೆ

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸೋಮವಾರ ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು.

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ.ಸಿದ್ದರಾಮಯ್ಯ ಮಾತನಾಡಿ, ಸುಮಾರು 46 ವರ್ಷಗಳ ಹಿಂದೆ ಭಾರತೀಯ ಜನತಾ ಪಕ್ಷವನ್ನು ಅಟಲ್ ಬಿಹಾರಿ ವಾಜಪೇಯಿ, ಎಲ್.ಕೆ.ಅಡ್ವಾನಿ ಸೇರಿದಂತೆ ಅನೇಕ ಹಿರಿಯ ಮುಖಂಡರ ಶ್ರಮದಿಂದ ಸ್ಥಾಪಿಸಿದ್ದಾರೆ. ಅಭಿವೃದ್ದಿಯ ಪಥಕ್ಕೆ ನಾಂದಿ ಹಾಡಿದ ಪಕ್ಷದ ಹಿರಿಯರನ್ನು ಸ್ಮರಿಸಿಕೊಳ್ಳಬೇಕಿದೆ. ತಳಮಟ್ಟದಿಂದ ಪಕ್ಷವನ್ನು ಬಲಪಡಿಸುತ್ತಿರುವ ಕಾರ್ಯಕರ್ತರುಗಳ ಶ್ರಮವನ್ನು ಗೌರವಿಸಬೇಕು ಎಂದರು.ತಾಲೂಕು ಅಧ್ಯಕ್ಷ ಪೀ.ಹಳ್ಳಿ ರಮೇಶ್ ಮಾತನಾಡಿ, ಪ್ರಸ್ತುತ ದೇಶ ದೇಶಗಳ ನಡುವೆ ಯುದ್ದ ನಡೆಯುತ್ತಿರುವುದರಿಂದ ಅಲ್ಲಿನ ಜನರು ನೆಮ್ಮದಿಯಿಂದ ಜೀವನ ಮಾಡಲು ಸಾಧ್ಯವಾಗುತ್ತಿಲ್ಲ. ಆದರೆ, ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದ ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವುದರಿಂದ ಅಂತಹ ಯಾವುದೇ ವಾತಾವರಣ ಸೃಷ್ಟಿಯಾಗಿಲ್ಲ. ಸೃಷ್ಟಿಯಾಗಲು ಬಿಡುವುದೂ ಇಲ್ಲ ಎಂದರು.

ಈ ವೇಳೆ ತಾಲೂಕು ಮಾಜಿ ಅಧ್ಯಕ್ಷ ಎ.ಟಿ.ಜಯಕುಮಾರ್, ಜಿಲ್ಲಾ ಬಿಜೆಪಿ ಮಾಜಿ ಕಾರ್ಯದರ್ಶಿ ಪೈ.ಮಹದೇವು, ಬಲ್ಲೇನಹಳ್ಳಿ ಬಿ.ಸಿ. ಕೃಷ್ಣೇಗೌಡ ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆಕಸ್ಮಿಕ ಬೆಂಕಿ: 2 ರಾಗಿ ಮೆದೆ ಭಸ್ಮ
ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಬಫರ್ ವಲಯ ಗಡಿ ಪರಿಷ್ಕರಿಸಿ