ಸಚಿವ ಸುಧಾಕರ್ ಭರವಸೆ । ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾರ್ಯಕ್ರಮಕ್ಕೆ ಚಾಲನೆಕನ್ನಡಪ್ರಭ ವಾರ್ತೆ ಹೊಸದುರ್ಗ
ಪಟ್ಟಣದ ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಮಂಗಳವಾರ ಆಯೋಜಿಸಿದ್ದ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಎನ್ನುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾಂಗ್ರೆಸ್ ಪಕ್ಷ ಕಾರ್ಯಕರ್ತರ ಪಕ್ಷವಾಗಿದೆ ಸರ್ಕಾರಕ್ಕಾಗಿ ದುಡಿದವರಿಗೆ ಸ್ಥಾನಮಾನ ನೀಡಬೇಕು ಎನ್ನುವುದು ಎಲ್ಲಾ ಮುಖಂಡರ ಆಶಯವಾಗಿದೆ ಈ ಹಿನ್ನಲೆಯಲ್ಲಿ ಪ್ರತಿ ತಾಲೂಕಿನಿಂದ ಎರಡ್ಮೂರು ಜನರ ಆಯ್ಕೆ ಮಾಡಿ ಪಟ್ಟಿ ಸರ್ಕಾರಕ್ಕೆ ನೀಡಿದ್ದೇವೆ. ನೇಮಕಾತಿ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸುವಂತೆ ಸಿಎಂ ಹಾಗೂ ಡಿಸಿಎಂ ಬಳಿ ಮನವಿ ಮಾಡಿದ್ದೇವೆ ಎಂದು ಹೇಳಿದರು.ಭದ್ರಾ ಯೋಜನೆಗೆ 2,600 ಕೋಟಿ: ಸಿಎಂ ಸಿದ್ದರಾಮಯ್ಯ ಅವರು ಈ ಬಾರಿಯ ಬಜೆಟ್‌ನಲ್ಲಿ ಅಪ್ಪರ್ ಭದ್ರಾ ಯೋಜನೆಯ ಕಾಮಗಾರಿಗೆ 2,600 ಕೋಟಿ ರು. ಅನುದಾನ ನೀಡಿದ್ದಾರೆ. ಅಪ್ಪರ ಭದ್ರಾ ಯೋಜನೆಯಡಿ ಹೊಸದುರ್ಗ ತಾಲೂಕಿನ ಕೆರೆಗಳನ್ನು ಈ ವರ್ಷದಲ್ಲಿ ತುಂಬಿಸುವ ಕೆಲಸ ಆಗಲಿದೆ. ಅಲ್ಲದೆ ಈ ಯೋಜನೆಯಡಿ ಜಿಲ್ಲೆಯ 6 ಲಕ್ಷ ಎಕರೆಗೆ ನೀರು ಹರಿಸುವ ಕೆಲಸ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಮುಗಿಯಬೇಕಿತ್ತು ಆದರೆ ಬಿಜೆಪಿ ಸರ್ಕಾರ ಕೆಲಸ ಮಾಡಲಿಲ್ಲ. ನಾವು ಅಧಿಕಾರಕ್ಕೆ ಬಂದಿದ್ದು ಆ ಕೆಲಸವನ್ನು ಪೂರ್ಣ ಮಾಡಲಿದ್ದೇವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ನ ಜಿಲ್ಲಾಧ್ಯಕ್ಷ ಎಂ.ಕೆ.ತಾಜ್‌ಪೀರ್ ಅಧ್ಯಕ್ಷತೆ ವಹಿಸಿದ್ದರು. ಪಂಚಗ್ಯಾರಂಟಿ ಯೋಜನೆ ಸಮಿತಿ ಜಿಲ್ಲಾಧ್ಯಕ್ಷ ಶಿವಣ್ಣ, ಮುಖಂಡರಾದ ಹಾಲೇಶ್, ಮೈಲಾರಪ್ಪ, ಸಂಪತ್ ಕುಮಾರ್, ಗೋ.ತಿಪ್ಪೇಶ್, ಕೆ.ಅನಂತ್, ಪದ್ಮನಾಭ್, ಲೋಕೇಶ್ವರಪ್ಪ, ಕಾರೇಹಳ್ಳಿ ಬಸವರಾಜ್, ಕೆಪಿಸಿಸಿ ಸದಸ್ಯರಾದ ಎಂ.ಪಿ.ಶಂಕರ್, ಅಲ್ತಾಫ್, ಎಂ.ಎಚ್.ಕೃಷ್ಣಮೂರ್ತಿ, ರಾಜೇಂದ್ರ ಪ್ರಸಾದ್, ಯಶವಂತ್ ಗೌಡ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಮಂಜುನಾಥ್, ಮಹಮದ್ ಇಸ್ಮಾಯಿಲ್, ಶ್ರೀರಾಂಪುರ ದಾಸಪ್ಪ ಮತ್ತಿತರರಿದ್ದರು.