ಕಾರ್ಯಕರ್ತನಂತೆ ಕೆಲಸ ಮಾಡುವೆ: ರಾಜಶೇಖರ ನಾಗಪ್ಪ

KannadaprabhaNewsNetwork |  
Published : Feb 09, 2024, 01:48 AM IST
8ಕೆಡಿವಿಜಿ9, 10-ದಾವಣಗೆರೆಯಲ್ಲಿ ಬಿಜೆಪಿ ನೂತನ ಜಿಲ್ಲಾಧ್ಯಕ್ಷ, ಪ್ರಧಾನ ಕಾರ್ಯದರ್ಶಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮಾಜಿ ಡಿಸಿಎಂ ಕೆ.ಎಸ್‌.ಈಶ್ವರಪ್ಪ. ..............8ಕೆಡಿವಿಜಿ11, 12-ದಾವಣಗೆರೆಯಲ್ಲಿ ನೂತನ ಬಿಜೆಪಿ ಜಿಲ್ಲಾಧ್ಯಕ್ಷ, ಪ್ರಧಾನ ಕಾರ್ಯದರ್ಶಿಗಳ ಪದಗ್ರಹಣ ಸಮಾರಂಭಕ್ಕೆ ಆಗಮಿಸಿದ್ದ ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಡಿಸಿಎಂ ನೂತನ ಅಧ್ಯಕ್ಷ ಎನ್.ರಾಜಶೇಖರ ನಾಗಪ್ಪಗೆ ಪಕ್ಷದ ಧ್ವಜ ಹಸ್ತಾಂತರಿಸಿ, ಶುಭಾರೈಸಿದರು. ....................8ಕೆಡಿವಿಜಿ13-ದಾವಣಗೆರೆಯಲ್ಲಿ ನೂತನ ಬಿಜೆಪಿ ಜಿಲ್ಲಾಧ್ಯಕ್ಷ, ಪ್ರಧಾನ ಕಾರ್ಯದರ್ಶಿಗಳ ಪದಗ್ರಹಣ ಸಮಾರಂಭಕ್ಕೆ ಆಗಮಿಸಿದ್ದ ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ, ನೂತನ ಜಿಲ್ಲಾಧ್ಯಕ್ಷ ಎನ್.ರಾಜಶೇಖರ ನಾಗಪ್ಪ ಇತರರಿಗೆ ಕಾರ್ಯಕರ್ತರು ಬೃಹತ್ ಹಾರ ಹಾಕಿ, ಅಭಿನಂದಿಸಿದರು. | Kannada Prabha

ಸಾರಾಂಶ

ಕೇವಲ ಗ್ಯಾರಂಟಿ ಭರವಸೆಯಿಂದ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದಲ್ಲಿ ಶೇ.64 ಅಪರಾಧ ಪ್ರಮಾಣ ಹೆಚ್ಚಾಗಿದೆ. ಕಾಂಗ್ರೆಸ್ಸಿನ ಗ್ಯಾರಂಟಿಗಳಿಂದ ಜನರು ಭ್ರಮನಿರಸನರಾಗಿದ್ದಾರೆ. ಭಾರತ ದೇಶಕ್ಕೆ ನರೇಂದ್ರ ಮೋದಿಯವರೇ ನಿಜವಾದ ಗ್ಯಾರಂಟಿ. ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಮತ್ತೆ ಬಿಜೆಪಿ ಗೆಲ್ಲಿಸಿ ಸುಭದ್ರ, ಬಲಿಷ್ಠ ಆರ್ಥಿಕ ದೇಶ ನಿರ್ಮಿಸಲು ಸಹಕರಿಸಬೇಕು.

ಕನ್ನಡಪ್ರಭ ವಾರ್ತೆ ದಾವಣಗೆರೆ

ಬಿಜೆಪಿ ನೂತನ ಜಿಲ್ಲಾಧ್ಯಕ್ಷರಾಗಿ ಎನ್‌.ರಾಜಶೇಖರ ನಾಗಪ್ಪ, ಪ್ರಧಾನ ಕಾರ್ಯದರ್ಶಿಗಳಾಗಿ ಧನಂಜಯ ಕಡ್ಲೇಬಾಳು, ಸಿ.ಅನಿಲಕುಮಾರ ನಾಯ್ಕ ಹಾಗೂ ಐರಣಿ ಅಣ್ಣೇಶಕುಮಾರ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಸೇರಿ ಜಿಲ್ಲಾ ಮುಖಂಡರ ಸಮಕ್ಷಮ ಜವಾಬ್ದಾರಿ ವಹಿಸಿಕೊಂಡರು.

ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಎನ್.ರಾಜಶೇಖರ ನಾಗಪ್ಪ ಮಾತನಾಡಿ ಐದು ಶತಮಾನಗಳ ಸತತ ಹೋರಾಟದಿಂದ ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ವೇಳೆ ಇಡೀ ದೇಶ ಒಂದಾಗಲು ಪ್ರಧಾನಿ ನರೇಂದ್ರ ಮೋದಿ ಕಾರಣರಾಗಿದ್ದಾರೆ. ಮೋದಿಯವರು ದಿನದ 18 ಗಂಟೆ ಕೆಲಸ ಮಾಡಿ, ಭಾರತವನ್ನು ವಿಶ್ವದ 3ನೇ ಆರ್ಥಿಕ ದೇಶವನ್ನಾಗಿ ಮಾಡಿದ್ದರೂ ಪಕ್ಷದ ಸಾಮಾನ್ಯ ಕಾರ್ಯಕರ್ತ ತಾವೆಂದು ಹೇಳಿದ್ದಾರೆ. ಅಂತಹ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡಲು ನನಗೆ ಹೆಮ್ಮೆ ಇದೆ ಎಂದರು.

ಕೇವಲ ಗ್ಯಾರಂಟಿ ಭರವಸೆಯಿಂದ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದಲ್ಲಿ ಶೇ.64 ಅಪರಾಧ ಪ್ರಮಾಣ ಹೆಚ್ಚಾಗಿದೆ. ಕಾಂಗ್ರೆಸ್ಸಿನ ಗ್ಯಾರಂಟಿಗಳಿಂದ ಜನರು ಭ್ರಮನಿರಸನರಾಗಿದ್ದಾರೆ. ಭಾರತ ದೇಶಕ್ಕೆ ನರೇಂದ್ರ ಮೋದಿಯವರೇ ನಿಜವಾದ ಗ್ಯಾರಂಟಿ. ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಮತ್ತೆ ಬಿಜೆಪಿ ಗೆಲ್ಲಿಸಿ ಸುಭದ್ರ, ಬಲಿಷ್ಠ ಆರ್ಥಿಕ ದೇಶ ನಿರ್ಮಿಸಲು ಸಹಕರಿಸಬೇಕು ಎಂದು ಮನವಿ ಮಾಡಿದರು.

ಬಿಜೆಪಿ ರಾಜ್ಯ ಉಪಾಧ್ಯಕ್ಷ, ಮಾಜಿ ಸಚಿವ ಮುರುಗೇಶ ನಿರಾಣಿ ಮಾತನಾಡಿ, ಸೂರ್ಯ-ಚಂದ್ರರಂತೆ ನರೇಂದ್ರ ಮೋದಿ ಪ್ರಧಾನಿಯಾಗುವುದು ಅಷ್ಟೇ ಸತ್ಯ. 4 ಬಾರಿ ಡಾ.ಜಿ.ಎಂ.ಸಿದ್ದೇಶ್ವರ ಸಂಸದರಾಗಿದ್ದಾರೆ. ಒಂದು ಬಾರಿ ಕೇಂದ್ರ ಸಚಿವರಾಗಿದ್ದಾರೆ. ದಾವಣಗೆರೆ ಕ್ಷೇತ್ರದಲ್ಲಿ ಮತ್ತೆ ಬಿಜೆಪಿ ಕಳೆದ ಸಲಕ್ಕಿಂತಲೂ ಅತ್ಯಧಿಕ, ದಾಖಲೆಯ ಮತಗಳಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಮಾಜಿ ಸಚಿವ ಎಸ್.ಎ.ರವೀಂದ್ರನಾಥ, ವಿಪ ಮಾಜಿ ಮುಖ್ಯ ಸಚೇತಕ ಡಾ.ಎ.ಎಚ್.ಶಿವಯೋಗಿಸ್ವಾಮಿ, ಮಾಜಿ ಶಾಸಕರಾದ ಟಿ.ಗುರುಸಿದ್ದನಗೌಡ, ಮಾಡಾಳ್ ವಿರುಪಾಕ್ಷಪ್ಪ, ಪ್ರೊ.ಎನ್. ಲಿಂಗಣ್ಣ, ಎಂ.ಬಸವರಾಜ ನಾಯ್ಕ, ಜಿ.ಎಸ್.ಅನಿತ್‌ಕುಮಾರ, ನಿಟಕ ಪೂರ್ವ ಜಿಲ್ಲಾಧ್ಯಕ್ಷರಾದ ಎಸ್.ಎಂ.ವೀರೇಶ ಹನಗವಾಡಿ, ಯಶವಂತರಾವ್ ಜಾಧವ್, ಮಾಜಿ ಪ್ರಧಾನ ಕಾರ್ಯದರ್ಶಿ ಬಿ.ಎಸ್.ಜಗದೀಶ, ಚನ್ನಗಿರಿ ತುಮ್ಕೋಸ್ ಶಿವಕುಮಾರ, ಎಚ್.ಸಿ.ಮಹೇಶ ಪಲ್ಲಾಗಟ್ಟೆ, ಲೋಕಿಕೆರೆ ನಾಗರಾಜ, ಮಾಡಾಳ್ ಮಲ್ಲಿಕಾರ್ಜುನ, ಡಾ.ಟಿ.ಜಿ.ರವಿಕುಮಾರ, ಬಿ.ಜಿ.ಅಜಯಕುಮಾರ, ಪಿ.ಸಿ.ಶ್ರೀನಿವಾಸ ಭಟ್‌, ಕೊಟ್ರೇಶ, ದೂಡಾ ಮಾಜಿ ಅಧ್ಯಕ್ಷ ಎ.ವೈ.ಪ್ರಕಾಶ, ಪಾಲಿಕೆ ವಿಪಕ್ಷ ನಾಯಕ ಕೆ.ಪ್ರಸನ್ನಕುಮಾರ, ಸದಸ್ಯ ಆರ್.ಎಲ್.ಶಿವಪ್ರಕಾಶ, ಗುರು ಸೋಗಿ, ಶಿವನಗೌಡ ಪಾಟೀಲ್, ಟಿಂಕರ್ ಮಂಜಣ್ಣ ಸೇರಿ ಅನೇಕರಿದ್ದರು.

ಯಡಿಯೂರಪ್ಪನವರೆಂದರೆ ಅಭಿವೃದ್ಧಿ. ಅಭಿವೃದ್ಧಿಯೆಂದರೆ ಯಡಿಯೂರಪ್ಪ. ಇಂತಹ ನಾಯಕರ ಮಾರ್ಗದರ್ಶನದಲ್ಲಿ ಬಿಜೆಪಿ ಮತ್ತಷ್ಟು ಬಲವಾಗಿ ಕಟ್ಟೋಣ. ದಾವಣಗೆರೆ ಬಿಜೆಪಿಯ ಭದ್ರಕೋಟೆ. ವಿಧಾನಸಭೆಯಲ್ಲಿ ಸೋತಿರಬಹುದು. ಆದರೆ, ನಾವ್ಯಾರೂ ಮನೆಯಲ್ಲಿ ಕುಳಿತಿಲ್ಲ. ನರೇಂದ್ರ ಮೋದಿ 3ನೇ ಬಾರಿಗೆ ಪ್ರಧಾನಿ ಮಾಡಲು ಜನರೇ ತೀರ್ಮಾನಿಸಿದ್ದಾರೆ. ಜಿಲ್ಲೆಯಲ್ಲಿ ಮಾಜಿ ಸಚಿವ ಎಸ್.ಎ.ರವೀಂದ್ರನಾಥ ಪಕ್ಷ ಕಟ್ಟಿದರೂ, ತಾಂತ್ರಿಕವಾಗಿ ಸೋತರು. ಯಡಿಯೂರಪ್ಪ, ಈಶ್ವರಪ್ಪ, ವಿಜಯೇಂದ್ರ ಸಂಕಲ್ಪದಂತೆ ಸೂಕ್ತ ಅಭ್ಯರ್ಥಿ ತೀರ್ಮಾನಿಸಿ, ಬಿಜೆಪಿ ಗೆಲ್ಲಿಸೋಣ.

ಎಂ.ಪಿ.ರೇಣುಕಾಚಾರ್ಯ, ಮಾಜಿ ಸಚಿವ

---

ದಾವಣಗೆರೆ ಲೋಕಸಭಾ ಕ್ಷೇತ್ರ ಬಿಜೆಪಿಯ ಕ್ಷೇತ್ರವೆಂಬುದು ಮತ್ತೆ ಸಾಬೀತುಪಡಿಸೋಣ. ಪ್ರತಿಯೊಬ್ಬರ ಮನೆ ಮನೆಗೂ ತೆರಳಿ, ನರೇಂದ್ರ ಮೋದಿಯವರ ಪ್ರಧಾನಿ ಮಾಡೋಣ ಎಂಬ ಸಂದೇಶ ತಲುಪಿಸೋಣ. ಬರಲಿರುವ ಲೋಕಸಭೆ ಚುನಾವಣೆಯಲ್ಲಿ 28 ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಗೆಲ್ಲಿಸಿ, ಮತ್ತೆ ಮೋದಿಯವರ ಕೈಗಳ ಬಲಪಡಿಸೋಣ.

ಬಿ.ಪಿ.ಹರೀಶ ಗೌಡ, ಹರಿಹರ ಶಾಸಕ

PREV

Recommended Stories

ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಎಸ್ಸೆಸ್ಸೆಲ್ಸಿ- ಪಿಯು : ಈ ವರ್ಷವೂ 3 ಪರೀಕ್ಷೆ ಉದ್ದೇಶ ಫೇಲ್‌