- ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ರಾಜೇಗೌಡ ಹುಟ್ಟು ಹಬ್ಬದ ಪ್ರಯುಕ್ತ ಯುವ ಕಾಂಗ್ರೆಸ್ ಆಶ್ರಯದಲ್ಲಿ ರಕ್ತದಾನ ಶಿಬಿರ
ಅನೇಕ ಅಡಚಣೆ ಮಧ್ಯೆ ನಾನು ಶೃಂಗೇರಿ ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ ಕೆಲಸ ಮಾಡಿದ್ದು ನನಗೆ ಆತ್ಮತೃಪ್ತಿ ಇದೆ ಎಂದು ಶಾಸಕ ಟಿ.ಡಿ. ರಾಜೇಗೌಡ ತಿಳಿಸಿದರು.
ಮಂಗಳವಾರ ಪಟ್ಟಣದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಶಾಸಕ ಟಿ.ಡಿ.ರಾಜೇಗೌಡ ಹುಟ್ಟು ಹಬ್ಬದ ಪ್ರಯುಕ್ತ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಚಿಕ್ಕಮಗಳೂರು ಆಶಾಜ್ಯೋತಿ ಮತ್ತು ಕೆ ಆರ್ ಎಸ್ ಬ್ಲಡ್ ಬ್ಯಾಂಕ್ ನ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರದಲ್ಲಿ ರಕ್ತದಾನಿಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು. ಎಲ್ಲಾ ದಾನಕ್ಕಿಂತ ರಕ್ತದಾನವೇ ಶ್ರೇಷ್ಠ. ನನ್ನ ಹುಟ್ಟು ಹಬ್ಬದ ಪ್ರಯುಕ್ತ ಯುವ ಕಾಂಗ್ರೆಸ್ ಹಲವು ವರ್ಷಗಳಿಂದ ರಕ್ತದಾನ ಹಾಗೂ ಇತರ ಸಾಮಾಜಿಕ ಕಾರ್ಯ ಮಾಡುತ್ತಾ ಬಂದಿದೆ. ನನಗೆ ಆತ್ಮಸಂತೋಷ ತಂದಿದೆ. ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್ ಪ್ರಯತ್ನದಿಂದ ಹೊನ್ನೇಕೊಡಿಗೆ ಸಂಪರ್ಕ ಸೇತುವೆ ಆಗಿದೆ. ಎನ್.ಆರ್. ಪುರದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಪ್ರಾರಂಭವಾಗಿದೆ. ಜಯಪುರ, ಹರಿಹರಪುರ,ಮಾಗುಂಡಿ ಸೇರಿದಂತೆ ವಿವಿಧ ಕಡೆ ರಸ್ತೆ ಅಗಲೀಕರಣ ಮಾಡಿಸಿದ್ದೇನೆ. ಕೊಪ್ಪ, ಶೃಂಗೇರಿ ಪಟ್ಟಣದ ರಸ್ತೆ ಅಗಲೀಕರಣ ಮುಂದಿನ ವರ್ಷ ಕೈಗೆತ್ತಿಕೊಳ್ಳಲಿದ್ದೇವೆ. ಗ್ರಾಮೀಣ ರಸ್ತೆಗಳು ಹಾಳಾಗಿದೆ. ಮುಖ್ಯಂತ್ರಿಗಳಿಗೆ ಮನವಿ ಸಲ್ಲಿಸಲಾಗಿದ್ದು ಮಳೆಗಾಲದ ನಂತರ ಗ್ರಾಮೀಣ ರಸ್ತೆಗಳ ದುರಸ್ತಿ ಕಾರ್ಯ ಮಾಡುತ್ತೇವೆ ಎಂದರು.ಬಾಳೆಹೊನ್ನೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರತನ್ ಗೌಡ ಅರಗಿ ಮಾತನಾಡಿ ಕಳೆದ 5-6 ವರ್ಷದಿಂದಲೂ ಯುವ ಕಾಂಗ್ರೆಸ್ ರಕ್ತದಾನ ಮಾಡುತ್ತಾ ಬಂದಿದೆ. ಟಿ.ಡಿ. ರಾಜೇಗೌಡ ಹುಟ್ಟು ಹಬ್ಬದ ದಿನವೇ ಕೆಪಿಎಸ್ ಶಾಲೆ, ಅಳೇಹಳ್ಳಿಯಲ್ಲೂ ರಕ್ತದಾನ ಮಾಡಿದ್ದೇವೆ. ಶಾಸಕ ಟಿ.ಡಿ.ರಾಜೇಗೌಡರು ಕ್ಷೇತ್ರದ ಅಭಿವೃದ್ಧಿ ಮಾಡುತ್ತಿದ್ದು ಅವರಿಗೆ ಇನ್ನಷ್ಟು ಅಧಿಕಾರ ಬರಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶ್ರೀಜಿತ್ ಗೌಡ ದಂಡಿನಮಕ್ಕಿ, ಯುವ ಕಾಂಗ್ರೆಸ್ ನಗರ ಅಧ್ಯಕ್ಷ ವಿಜಯ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಅಭಿಲಾಶ್, ಕೌಸಿಕ್ ಪಟೇಲ್, ಅಕ್ಷೀರ, ಕಸಬ ಹೋಬಳಿ ಅಧ್ಯಕ್ಷ ನಿತಿನ್,ತಾಲೂಕು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್, ಯು ವ ಕಾಂಗ್ರೆಸ್ , ತಾಲೂಕು ಕಾಂಗ್ರೆಸ್ ಮುಖಂಡರು ಇದ್ದರು.
ನಾನು ಸಚಿವ ಸ್ಥಾನ ಕೇಳಿಲ್ಲ. ಸ್ಥಾನ ನೀಡುವುದು ಮುಖ್ಯ ಮಂತ್ರಿಗಳ ವಿವೇಚನೆಗೆ ಬಿಟ್ಟ ವಿಚಾರ ಎಂದು ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.