ಕನ್ನಡಕ್ಕಾಗಿ ಕೆಲಸ ಮಾಡುವ ಏಕೈಕ ಸಂಸ್ಥೆ ಕಸಾಪ

KannadaprabhaNewsNetwork |  
Published : May 11, 2025, 01:23 AM IST
ಚಿತ್ರ 2 | Kannada Prabha

ಸಾರಾಂಶ

ಹಿರಿಯೂರು: ಕನ್ನಡಕ್ಕಾಗಿ ಕೆಲಸ ಮಾಡಲು ಇರುವ ಏಕೈಕ ಸಂಸ್ಥೆ ಎಂದರೆ ಅದು ಕನ್ನಡ ಸಾಹಿತ್ಯ ಪರಿಷತ್ತು ಎಂದು ಕಸಾಪ ಮಾಜಿ ಅಧ್ಯಕ್ಷ ಹರ್ತಿಕೋಟೆ ಮಹಾಸ್ವಾಮಿ ಹೇಳಿದರು.

ಹಿರಿಯೂರು: ಕನ್ನಡಕ್ಕಾಗಿ ಕೆಲಸ ಮಾಡಲು ಇರುವ ಏಕೈಕ ಸಂಸ್ಥೆ ಎಂದರೆ ಅದು ಕನ್ನಡ ಸಾಹಿತ್ಯ ಪರಿಷತ್ತು ಎಂದು ಕಸಾಪ ಮಾಜಿ ಅಧ್ಯಕ್ಷ ಹರ್ತಿಕೋಟೆ ಮಹಾಸ್ವಾಮಿ ಹೇಳಿದರು.

ನಗರದ ವೀನಸ್ ಹಾಲ್‌ನಲ್ಲಿ ಏರ್ಪಡಿಸಿದ್ದ ಕನ್ನಡ ಸಾಹಿತ್ಯ ಪರಿಷತ್‌ನ ಸಂಸ್ಥಾಪನ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಸಾಪ ಏಳು ಕೋಟಿ ಕನ್ನಡಿಗರ ಆಸ್ತಿ. ಕನ್ನಡ ಭಾಷೆ, ಸಾಹಿತ್ಯ, ಕಲೆ, ಜಾನಪದ ಸಂಸ್ಕೃತಿ ಸಂವರ್ಧನೆಗೆ ಹಾಗೂ ಸಂರಕ್ಷಣೆಗೆ 1915ರಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನೆಯಾಯಿತು. ಕನ್ನಡ ಸಾಹಿತ್ಯ ಪರಿಷತ್ತು ಅಸ್ತಿತ್ವಕ್ಕೆ ಬಂದಾಗ ಎಚ್.ವಿ.ನಂಜುಂಡಯ್ಯರವರು ಪ್ರಥಮ ಅಧ್ಯಕ್ಷರಾಗಿದ್ದರು ಎಂದು ತಿಳಿಸಿದರು.

ತದನಂತರ ಮೈಸೂರು ರಾಜಮನೆತನದ ಕಾಂತರಾಜ ಅರಸ್, ಕಂಠೀರವ ನರಸರಾಜ ಒಡೆಯರ್, ಜಯಚಾಮರಾಜೇಂದ್ರ ಒಡೆಯರ್ ಅಲ್ಲದೆ ಶ್ರೀನಿವಾಸರಾವ್, ಡಿ.ವಿ.ಗುಂಡಪ್ಪ, ಬಿಎಂ ಶ್ರೀ ಕನ್ನಡ ಸಾಹಿತ್ಯ ಪರಿಷತ್ತನ್ನು ಕಟ್ಟಿ ಬೆಳೆಸಿದರು. ದಿವಾನ್ ಮಿರ್ಜಾ ಇಸ್ಮಾಯಿಲ್ ಅವರ ಸತತ ಪ್ರಯತ್ನದಿಂದ ಈಗಿರುವ ಕಟ್ಟಡದ ನಿವೇಶನ ಉಚಿತವಾಗಿ ದೊರೆಯಿತು. 1933ರಲ್ಲಿ ಅದೇ ಸ್ಥಳದಲ್ಲಿ ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರ ನಿರ್ಮಾಣವಾಯಿತು ಎಂದರು.

ಕರ್ನಾಟಕ ಸಾಹಿತ್ಯ ಪರಿಷತ್ತು ಇಂದಿನ ಕನ್ನಡ ಸಾಹಿತ್ಯ ಪರಿಷತ್ ಎಂದು ಹೆಸರು ಬದಲಾಯಿಸಿಕೊಂಡಿತು. ಅಲ್ಲಿಂದ ಇಲ್ಲಿಯವರೆಗೆ ಸಾಹಿತಿಗಳು, ಕವಿಗಳು, ಬರಹಗಾರರನ್ನು ಗುರುತಿಸಿ ಅನೇಕ ಪುಸ್ತಕಗಳನ್ನು ಪ್ರಕಟಿಸಿ ಹೆಸರು ಪಡೆದಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕಸಾಪ ಅಧ್ಯಕ್ಷ ಸಿ.ರಾಮಚಂದ್ರಪ್ಪ, ಕೋಶಾಧ್ಯಕ್ಷ ಜಿ.ಪ್ರೇಮ್ ಕುಮಾರ್, ಗೌರವ ಕಾರ್ಯದರ್ಶಿ ಎಚ್.ಕೃಷ್ಣಮೂರ್ತಿ, ಜೆ.ನಿಜಲಿಂಗಪ್ಪ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಮೇಶ್, ಸಂಘಟನಾ ಕಾರ್ಯದರ್ಶಿ ಮಹಮ್ಮದ್ ಫಕ್ರುದ್ದೀನ್, ಶಿವಮೂರ್ತಿ, ಧರ್ಮಪುರ ಹೋಬಳಿ ಅಧ್ಯಕ್ಷ ಅಶೋಕ್, ಅಜ್ಗರ್ ಅಹಮದ್, ಮಹಿಳಾ ಪ್ರತಿನಿಧಿ ವೇದಪುಷ್ಪ, ಶಾಂತರಾಜು, ಡಿಶ್ ಬಸವರಾಜ್, ರಾಮಣ್ಣ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!