ಹಾವೇರಿ: ಜಿಲ್ಲೆಯ ಹಾನಗಲ್ಲ ತಾಲೂಕು ಅಕ್ಕಿಆಲೂರಿನ ಎಪಿಎಂಸಿ ಆವರಣದಲ್ಲಿ ಹಾನಗಲ್ಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸುಮಾರು ₹650 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮ ಮೇ 4ರಂದು ಬೆಳಗ್ಗೆ 11ಕ್ಕೆ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ ಅವರು ಆಗಮಿಸಲಿದ್ದಾರೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಕ್ಕಿಆಲೂರು ಎಪಿಎಂಸಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ, ಇಂಧನ ಸಚಿವ ಕೆ.ಜೆ. ಜಾರ್ಜ್, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ, ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು, ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಸೇರಿದಂತೆ ಅನೇಕ ಸಚಿವರು, ಜಿಲ್ಲೆಯ ಆರು ಜನ ಶಾಸಕರು ಹಾಗೂ ಎಲ್ಲ ಜನಪ್ರತಿನಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.ಕಳೆದ 2018- 19ರಲ್ಲಿ ಡಿ.ಕೆ. ಶಿವಕುಮಾರ ಜಲ ಸಂಪನ್ಮೂಲರಾಗಿದ್ದ ವೇಳೆ ಜಿಲ್ಲೆಯ ಬಹುವರ್ಷದ ಬೇಡಿಕೆಯಾಗಿದ್ದ ಬಾಳಂಬೀಡ ಏತ ನೀರಾವರಿ ಯೋಜನೆಗಳ ಎಸ್ಟಿಮೇಟ್, ಡಿಪಿಎಆರ್ ಸಿದ್ಧಪಡಿಸಿ ಕ್ಯಾಬಿನೆಟ್‌ನಲ್ಲಿ ಅನುಮೋದನೆ ನೀಡಲಾಗಿತ್ತು. ಬಳಿಕ ಸರ್ಕಾರ ಬದಲಾಗಿ ಕಾಮಗಾರಿ ಕುಂಟುತ್ತಾ ಸಾಗಿದ್ದು, ಇದೀಗ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಕಾಮಗಾರಿ ಪೂರ್ಣಗೊಂಡಿದೆ. ಈ ಕಾರ್ಯಕ್ರಮದಲ್ಲಿ ಬಾಳಂಬೀಡ ಏತ ನೀರಾವರಿ ಯೋಜನೆ, ಹಿರೇಕೌಂಸಿ ಏತ ನೀರಾವರಿ ಯೋಜನೆ, ಹಾನಗಲ್ಲ ಸರ್ಕಾರಿ ಕಚೇರಿಗಳ ಸಂಕೀರ್ಣ, ಅಕ್ಕಿಆಲೂರಿನ ಪ್ರವಾಸಿ ಮಂದಿರ, ಬಾಳಂಬೀಡ 110 ಕೆವಿ ವಿದ್ಯುತ್ ಗ್ರಿಡ್, ಹಾನಗಲ್ಲ ಎಪಿಎಂಸಿ ಉಗ್ರಾಣ ಮತ್ತು ಅಕ್ಕಿಆಲೂರು ಎಪಿಎಂಸಿ ಇತರೆ ಸೌಲಭ್ಯಗಳು ಹಾಗೂ ಮಳಿಗೆಗಳು ಹೀಗೆ ಒಟ್ಟು ₹615 ಕೋಟಿ ಮೊತ್ತದ ಕಾಮಗಾರಿಗಳ ಉದ್ಘಾಟನೆ ನಡೆಯಲಿದೆ ಎಂದರು. ಅದೇ ರೀತಿ ಹಾನಗಲ್ಲ ಪಟ್ಟಣದ ಆನಿಕೆರೆಗೆ ಕಲುಷಿತ ನೀರು ಹೋಗುತ್ತಿದ್ದು, ಇದನ್ನು ತಡೆಗಟ್ಟುವುದು ಹಾಗೂ ಆನಿಕೆರೆ ಅಭಿವೃದ್ಧಿ ಸೇರಿ ವಿವಿಧ ₹35 ಕೋಟಿ ಮೊತ್ತದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನಡೆಯಲಿದೆ ಎಂದರು. ಜಿಲ್ಲೆಯ ಎಲ್ಲ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ, ಪ್ರಧಾನ ಕಾರ್ಯದರ್ಶಿ ಶಂಕರ ಮೆಹರವಾಡೆ, ಕಾರ್ಮಿಕ ಘಟಕದ ಅಧ್ಯಕ್ಷ ಮಂಜು ಕಚವಿ ಇದ್ದರು.ಖಾಸಗಿ ಬಸ್ ಪಲ್ಟಿ: 14 ಜನರಿಗೆ ಗಾಯ