ಕನ್ನಡಪ್ರಭ ವಾರ್ತೆ ವಿಜಯಪುರ
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಾರ್ಚ್ 15ರಂದು ನಗರದಲ್ಲಿರುವ ವಿಜಯ ಫಂಕ್ಷನ್ ಹಾಲನಲ್ಲಿ ಬೆಳಗ್ಗೆ 10 ಗಂಟೆಗೆ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರಿಗೆ ಕಾರ್ಯಾಗಾರ ನಡೆಯಲಿದ್ದು, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ ಸೊರಕೆ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಕಾರ್ಯಾಗಾರದಲ್ಲಿ ಸಚಿವರಾದ ಎಂ.ಬಿ.ಪಾಟೀಲ, ಶಿವಾನಂದ ಪಾಟೀಲ, ಶಾಸಕರಾದ ಸಿ.ಎಸ್.ನಾಡಗೌಡ, ಯಶವಂತರಾಯಗೌಡ ಪಾಟೀಲ, ವಿಠ್ಠಲ ಕಟಕದೊಂಡ, ಅಶೋಕ ಮನಗೂಳಿ, ಸುನೀಲಗೌಡ ಪಾಟೀಲ ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ಎಲ್ಲ ಜನಪ್ರತಿನಿಧಿಗಳು ಹಾಗೂ ಮುಖಂಡರು ಭಾಗವಹಿಸಲಿದ್ದಾರೆ ಎಂದರು. ಕಾರ್ಯಾಗಾರದಲ್ಲಿ ಕಾಂಗ್ರೆಸ್ ಪಕ್ಷದ ಆರಂಭದ ದಿನಗಳು, ಕಾಂಗ್ರೆಸ್ ಜನಪರ ಕಾರ್ಯಗಳು, ಕಾಂಗ್ರೆಸ್ ನೀಡಿದ ಕೊಡುಗೆಗಳ ಕುರಿತು ಕಾರ್ಯಕರ್ತರಿಗೆ ಮಾಹಿತಿ ಒದಗಿಸುವುದು ಉಪನ್ಯಾಸಗಳು ನಡೆಯಲಿವೆ. ಕಾರ್ಯಕರ್ತರ ಕಾರ್ಯಾಗಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲಾದ್ಯಂತ ಪೂರ್ವಭಾವಿ ಸಭೆಗಳನ್ನು ನಡೆಸಲಾಗಿದ್ದು, ಪ್ರತಿ ಬ್ಲಾಕ್ ನಿಂದ ಕನಿಷ್ಠ 100 ಜನ ಭಾಗವಹಿಸಲಿದ್ದು, 1500ಕ್ಕೂ ಅಧಿಕ ಕಾರ್ಯಕರ್ತರು ಕಾರ್ಯಾರಾಗದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಪ್ರಚಾರ ಸಮಿತಿಯ ಮಹಮ್ಮದರಫೀಕ್ ಟಪಾಲ್ ಮಾತನಾಡಿ, ಜಿಲ್ಲೆಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಘಟಕದ ಕಾರ್ಯಾಗಾರ ಮೊದಲ ಬಾರಿಗೆ ನಡೆಯುತ್ತಿದ್ದು, ಪ್ರಚಾರ ಸಮಿತಿ ಅಧ್ಯಕ್ಷ ವಿನಕುಮಾರ ಸೊರಕೆ ಅವರ ನೇತೃತ್ವದ ತಂಡ ಕಾರ್ಯಾಗಾರ ನಡೆಸಿಕೊಡಲಿದೆ. ಕಾರ್ಯಾಗಾರದಲ್ಲಿ ಮಾಧ್ಯಮ ನಿರ್ವಹಣೆ, ಕೋಮುಗಲಭೆ ನಿವಾರಣೆ, ಪಕ್ಷ ಸಂಘಟನೆ, ಬೆಲೆ ಏರಿಕೆ, ಇತ್ಯಾದಿ ವಿಷಯಗಳ ಕುರಿತು ಚರ್ಚೆ, ಉಪನ್ಯಾಸ, ಸಂವಾದಗಳು ನಡೆಯಲಿದ್ದು, ಕಾರ್ಯಕರ್ತರಿಗೆ ಅರಿವು ಮೂಡಿಸುವ ಕೆಲಸವಾಗಲಿದೆ ಎಂದರು.ಗೋಷ್ಠಿಯಲ್ಲಿ ಮುಖಂಡರಾದ ವಸಂತ ಹೊನಮೊಡೆ, ಮಹೆಬೂಬ್ ಕಲಾದಗಿ, ಎಂ.ಎಂ.ಮುಲ್ಲಾ, ಸರಫರಾಜ ಮಿರ್ದೆ ಇದ್ದರು.