ನಾಳೆ ಸ್ಪಧಾತ್ಮಕ ಪರೀಕ್ಷೆ ಕುರಿತು ಕಾರ್ಯಾಗಾರ: ಪ್ರಜ್ವಲ್ ಮೌರ್ಯ

KannadaprabhaNewsNetwork | Published : Apr 12, 2025 12:46 AM

ಸಾರಾಂಶ

ಅಧ್ಯಯನ ಭೋದಿ ಎಜುಕೇಷನ್ ಚಾರಿಟಬಲ್ ಟ್ರಸ್ ಮತ್ತು ಮೈತ್ರಿ ಅಕಾಡೆಮಿ ವತಿಯಿಂದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ನಂತರ ಮುಂದೇನು? ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ದರಾಗುವುದು ಹೇಗೆ ಎಂಬ ವಿಷಯದ ಕಾರ್ಯಾಗಾರವನ್ನು ಏ. ೧೩ರಂದು ಬೆಳಗ್ಗೆ ೧೦.೩೦ಕ್ಕೆ ನಗರದ ಸ್ವಾಮಿ ವಿವೇಕಾನಂದ ರಂಗ ಮಂದಿರದಲ್ಲಿ ಆಯೋಜಿಸಲಾಗಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಅಧ್ಯಯನ ಭೋದಿ ಎಜುಕೇಷನ್ ಚಾರಿಟಬಲ್ ಟ್ರಸ್ ಮತ್ತು ಮೈತ್ರಿ ಅಕಾಡೆಮಿ ವತಿಯಿಂದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ನಂತರ ಮುಂದೇನು? ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ದರಾಗುವುದು ಹೇಗೆ ಎಂಬ ವಿಷಯದ ಕಾರ್ಯಾಗಾರವನ್ನು ಏ. ೧೩ರಂದು ಬೆಳಗ್ಗೆ ೧೦.೩೦ಕ್ಕೆ ನಗರದ ಸ್ವಾಮಿ ವಿವೇಕಾನಂದ ರಂಗ ಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಅಕಾಡೆಮಿಯ ಸಂಸ್ಥಾಪಕ ನಿರ್ದೇಶಕ ಪ್ರಜ್ವಲ್ ಮೌರ್ಯ ತಿಳಿಸಿದರು.

ಮೈತ್ರಿ ಅಕಾಡೆಮಿಯ ಪ್ರಥಮ ವಾರ್ಷಿಕೋತ್ಸವದ ಅಂಗವಾಗಿ ಸದರಿ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಿಗೆ ಅನುಕೂಲಕರ ರೀತಿಯ ಕಾರ್ಯಕ್ರಮ ಒದಗಿಸುವ ನಿಟ್ಟಿನಲ್ಲಿ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ಡಾ.ಕುಮಾರ ಉದ್ಘಾಟಿಸಲಿದ್ದು, ಶೈಕ್ಷಣಿಕ ಕ್ಷೇತ್ರದ ಸಾಧಕರ ಭಾವಚಿತ್ರಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಪುಷ್ಪಾರ್ಚನೆ ನೆರವೇರಿಸುವರು. ಎಸ್ಸೆಸ್ಸೆಲ್ಸ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಮುಂದಿನ ಆಯ್ಕೆ ಬಗ್ಗೆ ಮೈಸೂರಿನ ಮಹಾರಾಣಿ ವಿಜ್ಞಾನ ಕಾಲೇಜುನ ಸಹಾಯಕ ಪ್ರಾಧ್ಯಾಪಕ ಡಾ.ಲಕ್ಷ್ಮಣ್ ಮಾರ್ಗದರ್ಶನ ನೀಡುವರು ಎಂದರು.

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುವ ಕುರಿತು ಅಕ್ಕ ಐಎಎಸ್ ಅಕಾಡೆಮಿಯ ಮುಖ್ಯಸ್ಥ ಡಾ.ಶಿವಕುಮಾರ್ ಹಾಗೂ ಮದ್ದೂರಿನ ಹೆಚ್.ಕೆ.ವೀರಣ್ಣಗೌಡ ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಸಂದೀಪ್ ರಾವಣೀರ್ಕ ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡುವರು ಎಂದರು.

ಮುಖ್ಯ ಅತಿಥಿಗಳಾಗಿ ಅಪರ ಜಿಲ್ಲಾಧಿಕಾರಿ ಶಿವಾನಂದಮೂರ್ತಿ, ಪಿಡಬ್ಲ್ಯುಡಿ ಅಧೀಕ್ಷಕ ನಾಗರಾಜ್ ಅಂಬೇಡ್ಕರ್, ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯ್‌ಆನಂದ್, ಸದ್ವಿದ್ಯಾ ಪಿ.ಯು ಕಾಲೇಜಿನ ಪ್ರಾಂಶುಪಾಲ ಹರೀಶ್‌ಕುಮಾರ್, ಮಂಡ್ಯ ಮಹಿಳಾ ಸರ್ಕಾರಿ ಕಾಲೇಜಿನ ಸಹ ಪ್ರಾಧ್ಯಾಪಕರಾದ ಪ್ರೊ.ಮನ್ಸೂರ್ ಪಾಷ, ಡಾ.ಕೆ.ಚಂದ್ರಕಾಂತ್, ಆದರ್ಶ ಎಕ್ಸಲೆನ್ಸ್ ಪಿಯು ಕಾಲೇಜಿನ ಪ್ರಾಂಶುಪಾಲ ದೊಡ್ಡಾಚಾರ್, ಹಿರಿಯ ಪತ್ರಕರ್ತ ಬಿ.ಪಿ.ಪ್ರಕಾಶ್ ಪಾಲ್ಗೊಳ್ಳುವರು ಎಂದು ವಿವರಿಸಿದರು.

ಕಾರ್ಯಾಗಾರಕ್ಕೆ ಪಾಲ್ಗೊಳ್ಳುವವರ ನೋಂದಣಿಗೆ ೧೦೦ ರು.ಶುಲ್ಕ ನಿಗದಿ ಪಡಿಸಲಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಉಚಿತ ಪ್ರವೇಶವನ್ನು ಕೋರಿಕೆಯ ಮೇರೆಗೆ ನೀಡಲಾಗುವುದು. ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನೂ ಮಾಡಲಾಗಿದೆ ಎಂದರು.

Share this article