ಕನ್ನಡಪಪ್ರಭ ವಾರ್ತೆ ಶಿವಮೊಗ್ಗ
ನಗರದ ಸಹ್ಯಾದ್ರಿ ನಾರಾಯಣ ಹೆಲ್ತ್ ಕೇರ್ ಆವರಣದಲ್ಲಿ ನಿರ್ಮಿಸಿರುವ ಕ್ಯಾನ್ಸರ್ ಕೇರ್ ಬ್ಲಾಕ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ ತಂದೆ ಬಿ.ಎಸ್.ಯಡಿಯೂರಪ್ಪನವರ ಕನಸು ನನಸಾಗಿತ್ತು. ಆ ನಿಟ್ಟಿನಲ್ಲಿ ನಾರಾಯಣ ಆಸ್ಪತ್ರೆ ಸೇರಿದಂತೆ ನಗರದಲ್ಲಿ ಹಲವಾರು ಖಾಸಗಿ ಆಸ್ಪತ್ರೆಗಳು ಉತ್ತಮ ಸೇವೆಯನ್ನು ಒದಗಿಸುತ್ತಿರುವುದು ಸಂತೋಷದ ವಿಷಯವಾಗಿದೆ ಎಂದರು.
ಶಾಸಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡಿ, ಶಿವಮೊಗ್ಗದಲ್ಲಿ ಸುಸಜ್ಜಿತ ಆಸ್ಪತ್ರೆ ಸ್ಥಾಪಿಸಬೇಕು ಎಂಬ ಪರಿಕಲ್ಪನೆ ಇತ್ತು. ನಗರದ ತೀರ್ಥಹಳ್ಳಿ ರಸ್ತೆ ಯಲ್ಲಿರುವ ಕಟ್ಟಡದಲ್ಲಿ ಆಸ್ಪತ್ರೆ ನಿರ್ಮಿಸಲು ನಾರಾಯಣ ಹೆಲ್ತ್ ಅಧಿಕಾರಿಗಳು ಒಪ್ಪಿಗೆ ಸೂಚಿಸಿದಾಗಿನಿಂದ ಸಹ್ಯಾದ್ರಿ ನಾರಾಯಣ ಆಸ್ಪತ್ರೆ ಅತ್ಯುತ್ತಮ ಆರೋಗ್ಯ ಸೇವೆ ನೀಡುತ್ತಿದೆ. ಇದೀಗ ಮುಂದಿನ ಹಂತವಾಗಿ ಸಮಗ್ರ ಕ್ಯಾನ್ಸರ್ ಘಟಕ ಆರಂಭವಾಗಿರುವುದು ಅತ್ಯಂತ ಅನುಕೂಲಕರವಾಗಿದೆ ಎಂದು ತಿಳಿಸಿದರು.ಈ ಹೊಸ ಸೌಲಭ್ಯವು ಕ್ಯಾನ್ಸರ್ ರೋಗ ನಿರ್ಣಯವನ್ನು ಎದುರಿಸುತ್ತಿರುವವರಿಗೆ ಭರವಸೆಯ ದಾರಿದೀಪವನ್ನು ನೀಡುತ್ತದೆ ಎಂದು ಕ್ಯಾನ್ಸರ್ ಕೇರ್ ಬ್ಲಾಕ್ ಸ್ಥಾಪನೆಯನ್ನು ಶ್ಲಾಘಿಸಿದರು.
ಗ್ರೂಪ್ ಸಿಇಒ ಡಾ.ಇಮ್ಯಾನುಯೆಲ್ ರೂಪರ್ಟ್ ಮಾತನಾಡಿ, ಶಿವಮೊಗ್ಗ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ರೋಗಿಗಳಿಗೆ ತಡೆರಹಿತ ಮತ್ತು ಪರಿಣಾಮಕಾರಿ ಚಿಕಿತ್ಸಾ ಪ್ರಯಾಣವನ್ನು ಒದಗಿಸುವ ಗುರಿಯನ್ನು ನಾವು ಹೊಂದಿದ್ದೇವೆ ಎಂದು ಹೇಳಿದರು.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಕ್ಯಾನ್ಸರ್ ಕೇರ್ ಬ್ಲಾಕ್ ಅನ್ನು ಉದ್ಘಾಟಿಸಿದರು. ನಾರಾಯಣ ಹೆಲ್ತ್ ಕಾರ್ಯನಿರ್ವಾಹಕ ಉಪಾಧ್ಯಕ್ಷ ವೀರೇನ್ ಶೆಟ್ಟಿ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಉಸ್ಥಿತರಿದ್ದರು.