ಗಜಗಳ ಅನುಪಸ್ಥಿತಿಯಲ್ಲಿ ವಿಶ್ವ ಆನೆ ದಿನಾಚರಣೆ!

KannadaprabhaNewsNetwork |  
Published : Aug 13, 2026, 02:45 AM IST
ಕಾರ್ಯಕ್ರಮ ಸಂದರ್ಭ | Kannada Prabha

ಸಾರಾಂಶ

ವಿಶ್ವ ಆನೆ ದಿನ ಅಂಗವಾಗಿ ನಡೆದ ಕಾರ್ಯಕ್ರಮ ಕುಶಾಲನಗರದಲ್ಲಿ ಈ ಬಾರಿ ಆನೆಗಳ ಅನುಪಸ್ಥಿತಿಯಲ್ಲಿ ನಡೆಯಿತು.

ಕುಶಾಲನಗರ: ವಿಶ್ವ ಆನೆ ದಿನ ಅಂಗವಾಗಿ ನಡೆದ ಕಾರ್ಯಕ್ರಮ ಕುಶಾಲನಗರದಲ್ಲಿ ಈ ಬಾರಿ ಆನೆಗಳ ಅನುಪಸ್ಥಿತಿಯಲ್ಲಿ ನಡೆಯಿತು.

ಆನೆ ಶಿಬಿರದಲ್ಲಿ ಇತ್ತೀಚೆಗೆ ನಡೆದ ಆನೆಗಳ ಕಾಳಗದಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಕಾರಣ ಶಿಬಿರಕ್ಕೆ ನಿರ್ಬಂಧ ಹಾಗೂ ಎಸ್ಓಪಿ ನಿಯಮ ರೂಪಿಸುವ ಹಿನ್ನೆಲೆಯಲ್ಲಿ ಈ ಬಾರಿ ಆನೆ ದಿನವನ್ನು ಭಾಷಣ ಮತ್ತು ವಿದ್ಯಾರ್ಥಿಗಳಿಗೆ ಆನೆ ಬಗ್ಗೆ ಕೆಲವು ಸ್ಪರ್ಧೆಗಳಿಗೆ ಸೀಮಿತಗೊಳಿಸಲಾಗಿತ್ತು. ಆನೆ ದಿನದ ಅಂಗವಾಗಿ ಕುಶಾಲನಗರದ ಕಾವೇರಿ ನಿಸರ್ಗಧಾಮದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಆನೆಗಳ ಬಗ್ಗೆ ಉಪನ್ಯಾಸ ಮತ್ತು ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಇಷ್ಟಕ್ಕೆ ಕಾರ್ಯಕ್ರಮ ಕೊನೆಗೊಂಡಿತ್ತು.

ಕಾರ್ಯಕ್ರಮ ಉದ್ಘಾಟಿಸಿದ ಕೊಡಗು ಜಿಲ್ಲಾ ಪೊಲೀಸ್ ಅಧಿಕಾರಿ ಬಿಂದು ಮಣಿ ಮಾತನಾಡಿ, ಆನೆ ಮಾನವ ಸಹಬಾಳ್ವೆ ಬಗ್ಗೆ ಪ್ರತಿಯೊಬ್ಬರೂ ಅರಿವು, ಮಾಹಿತಿ ಹೊಂದುವ ಮೂಲಕ ಆನೆ ಮಾನವ ಸಂಘರ್ಷಕ್ಕೆ ಶಾಶ್ವತ ಪರಿಹಾರ ಸಾಧ್ಯ ಎಂದು ಅಭಿಪ್ರಾಯ ಪಟ್ಟರು.

ಪೊಲೀಸ್ ಅರಣ್ಯ ಇಲಾಖೆಗೆ ಸಾರ್ವಜನಿಕರ ಮೂಲಕ ಸಹಕಾರ ದೊರೆತರೆ ಎಲ್ಲ ಸಮಸ್ಯೆಗಳಿಗೂ ಪರಿಹಾರ ಸಾಧ್ಯ.ಆನೆ ಮತ್ತು ಇತರ ವನ್ಯಜೀವಿಗಳ ಬಗ್ಗೆ ಮುಂದಿನ ಪೀಳಿಗೆಗೆ ಅರಿವು ಜಾಗೃತಿ ಮೂಡಿಸುವುದು ಶಿಕ್ಷಕರು ಪೋಷಕರ ಕರ್ತವ್ಯವಾಗಿದೆ ಎಂದರು.ಇದೇ ಸಂದರ್ಭ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡ ವನ್ಯಜೀವಿ ತಜ್ಞ ವೈದ್ಯರಾದ ಡಾ. ಚಿಟ್ಟಿಯಪ್ಪ, ಡಾ. ಮುಜೀಬ್. ಡಾ ಸಿ.ಕೆ. ತಮ್ಮಯ್ಯ, ಕೆ. ಭುವನೇಶ್ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಂದ ವಿದ್ಯಾರ್ಥಿಗಳಿಗೆ ಆನೆ ಸಂರಕ್ಷಣೆ ಮತ್ತಿತರ ವಿಷಯಗಳ ಬಗ್ಗೆ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಇಲಾಖೆಯ ಸಾಧಕ ಅಧಿಕಾರಿ ಸಿಬ್ಬಂದಿಗಳಿಗೆ, ದಕ್ಷಿಣ ಕೊಡಗಿನಲ್ಲಿ ಅರಣ್ಯ ಇಲಾಖೆಯೊಂದಿಗೆ ವನ್ಯಜೀವಿ ಸಂಘರ್ಷದ ಸಂದರ್ಭ ನಿರಂತರ ಕೈಜೋಡಿಸುತ್ತಿರುವ ಬಿ. ಶೆಟ್ಟಿಗೇರಿಯ ಅನಿಲ್ ಕಾಡೆಮಾಡ, ಜಗ ಚೇರಂಡ ಮತ್ತು ತಂಡದ ಸದಸ್ಯರನ್ನು ಇಲಾಖೆ ವತಿಯಿಂದ ಸನ್ಮಾನಿಸಲಾಯಿತು.ಆನೆ ದಿನ ಅಂಗವಾಗಿ ನಡೆದ ಚಿತ್ರಕಲೆ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಶಾಲೆಗಳ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಅರಣ್ಯ ಇಲಾಖೆಯ ಕೊಡಗು ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸೋನಾಲ್ ವೃಷ್ಟಿ ಅವರು ಆನೆ ಗಳ ಮಾಹಿತಿ ಹೊಂದಿರುವ ಪೋಸ್ಟರ್ ಮತ್ತು ಕಿರು ಹೊತ್ತಿಗೆಗಳನ್ನು ಬಿಡುಗಡೆಗೊಳಿಸಿದರು.

ಅರಣ್ಯ ಇಲಾಖೆ ಅಧಿಕಾರಿಗಳಾದ ಅಭಯ ಶಂಕರ್, ಸೆಂದಿಲ್ ಕುಮಾರ್ ನವೀನ್ ಕುಮಾರ್, ಶ್ರೀನಿವಾಸ್ ನಾಯಕ್, ಅನನ್ಯ ಕುಮಾರ್, ಪರಿಸರ ಜಾಗೃತಿ ಸಮಿತಿಯ ಸಂಚಾಲಕ ಟಿ.ಜಿ. ಪ್ರೇಮ್ ಕುಮಾರ್, ಜ್ಞಾನಗಂಗಾ ಶಾಲೆಯ ಆಡಳಿತ ಮಂಡಳಿ ಕಾರ್ಯದರ್ಶಿ ನಿಂಗಪ್ಪ, ವಲಯ ಅರಣ್ಯ ಅಧಿಕಾರಿ ರಕ್ಷಿತ್ ಮತ್ತಿತರರು ಇದ್ದರು.

ಕುಶಾಲನಗರ ಸರಕಾರಿ ಇಂಜಿನಿಯರಿಂಗ್ ಕಾಲೇಜು ಬಳಿಯಿಂದ ಹೊರಟ ವಿದ್ಯಾರ್ಥಿಗಳ ಜಾಥಾಕ್ಕೆ ಕುಶಾಲನಗರ ನ್ಯಾಯಾಧೀಶರಾದ ಚೈತ್ರ ಅವರು ಹಸಿರು ನಿಶಾನೆ ತೋರಿದರು.

ಸ್ಥಳೀಯ ಶಾಲೆಗಳ ವಿದ್ಯಾರ್ಥಿಗಳು ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉಡುಪಿ: ಸ್ವರ್ಣಾನದಿಗೆ ಬಾಗಿನ, ಸ್ನಾನಘಟ್ಟ ಲೋಕಾರ್ಪಣೆ
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಕೈಬಿಟ್ಟ ಹೆಸರು ಪರಿಶೀಲಿಸಿ: ಹರೀಶ್ ಕುಮಾರ್ ಕರೆ