ಕುಶಾಲನಗರ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ

KannadaprabhaNewsNetwork | Published : Jun 6, 2024 12:30 AM

ಸಾರಾಂಶ

ಕುಶಾಲನಗರ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕುಶಾಲನಗರ ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಪ್ರಯುಕ್ತ ಕುಶಾಲನಗರ ಅರಣ್ಯ ಇಲಾಖೆ, ಕೊಡಗು ಜಿಲ್ಲಾ ಸೌಂದರ್ಯ ತಜ್ಞರ ವೇದಿಕೆ, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಮತ್ತು ಡ್ರೀಮ್ಸ್ ಡೇ ಕೇರ್ ಸಹಯೋಗದೊಂದಿಗೆ ಗಿಡ ನೆಡಲಾಯಿತು.

ಕನ್ನಡಪ್ರಭ ವಾರ್ತೆ ಕುಶಾಲನಗರ

ಗಿಡಗಳನ್ನು ನೆಡುವ ಮೂಲಕ ಅವುಗಳನ್ನು ಬೆಳೆಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದು ಕುಶಾಲನಗರ ತಹಸೀಲ್ದಾರ್ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆಡಳಿತ ಅಧಿಕಾರಿ ಕಿರಣ್ ಗೌರಯ್ಯ ಹೇಳಿದ್ದಾರೆ.

ಕುಶಾಲನಗರ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಕುಶಾಲನಗರ ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಪ್ರಯುಕ್ತ ಕುಶಾಲನಗರ ಅರಣ್ಯ ಇಲಾಖೆ, ಕೊಡಗು ಜಿಲ್ಲಾ ಸೌಂದರ್ಯ ತಜ್ಞರ ವೇದಿಕೆ, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಮತ್ತು ಡ್ರೀಮ್ಸ್ ಡೇ ಕೇರ್ ಸಹಯೋಗದೊಂದಿಗೆ ನಡೆದ ಗಿಡ ನೆಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ನೆಟ್ಟು ಬೆಳೆಸಿದ ಗಿಡವನ್ನು ವೈಯಕ್ತಿಕವಾಗಿ ನಿರ್ವಹಣೆ ಮಾಡುವ ಮೂಲಕ ಬೆಳೆಸುವ ಪಣತೊಡಬೇಕು ಎಂದರು.

ಕುಶಾಲನಗರ ವಲಯ ಅರಣ್ಯ ಅಧಿಕಾರಿ ರತನ್ ಕುಮಾರ್ ಮಾತನಾಡಿ, ಇಲಾಖೆ ಮೂಲಕ ಹಲವು ಯೋಜನೆಗಳಲ್ಲಿ ಹಸಿರೀಕರಣ ಕೆಲಸ ನಿರಂತರವಾಗಿ ನಡೆಯುತ್ತಿದೆ. ಪ್ರಕೃತಿ ಸಂರಕ್ಷಣೆಯಲ್ಲಿ ನಾಗರಿಕರು ಕೈಜೋಡಿಸಬೇಕು ಎಂದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕಿ ಲೀಲಾವತಿ ಮತ್ತು ಕೊಡಗು ಜಿಲ್ಲಾ ಸೌಂದರ್ಯ ತಜ್ಞರ ವೇದಿಕೆಯ ಜಿಲ್ಲಾಧ್ಯಕ್ಷ ರತ್ನ ಯತೀಶ್ ದಿನದ ಮಹತ್ವದ ಬಗ್ಗೆ ಮಾತನಾಡಿದರು.

ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಎಂ.ಎನ್. ಚಂದ್ರಮೋಹನ್ ಪ್ರಾಸ್ತಾವಿಕವಾಗಿ ಮಾತನಾಡಿ, ಕೃಷಿ ಮಾರುಕಟ್ಟೆ ಆವರಣದಲ್ಲಿ ಕಳೆದ ಹಲವು ವರ್ಷಗಳಿಂದ ಇಲಾಖೆಯ ಸಹಯೋಗದೊಂದಿಗೆ ನೂರಾರು ಗಿಡಗಳನ್ನು ನೆಟ್ಟು ಬೆಳೆಸಲಾಗಿದೆ. ನೆಟ್ಟು ಬೆಳೆಸಿದ ಗಿಡಗಳು ಹಾನಿಯಾಗದಂತೆ ಪ್ರತಿಯೊಬ್ಬರು ಎಚ್ಚರ ವಹಿಸಬೇಕು ಎಂದರು.

ಆವರಣದಲ್ಲಿ 25ಕ್ಕೂ ಅಧಿಕ ಗಿಡಗಳನ್ನು ನೆಡಲಾಯಿತು.

ಪತ್ರಕರ್ತ ಸಂಘದ ಉಪಾಧ್ಯಕ್ಷ ರಾಜು ರೈ, ಖಜಾಂಚಿ ಕುಡೆಕಲ್ ಗಣೇಶ್, ಪ್ರಧಾನ ಕಾರ್ಯದರ್ಶಿ ವನಿತಾ ಚಂದ್ರಮೋಹನ್, ಪತ್ರಕರ್ತರ ಸಂಘದ ಜಿಲ್ಲಾ ತಾಲೂಕು ಪದಾಧಿಕಾರಿಗಳು, ನಿರ್ದೇಶಕರು, ಸದಸ್ಯರು, ಅರಣ್ಯ ಇಲಾಖೆ ಉಪ ವಲಯ ಅರಣ್ಯ ಅಧಿಕಾರಿಗಳಾದ ಅನಿಲ್ ಡಿಸೋಜಾ, ದೇವಯ್ಯ, ಸಿಬ್ಬಂದಿ, ಜಿಲ್ಲಾ ಸೌಂದರ್ಯ ತಜ್ಞರ ವೇದಿಕೆ ಪ್ರಮುಖರಾದ ಪವಿತ್ರ ರಾಜೇಶ್, ನಾಗಮಣಿ, ಕಾವೇರಿ ಪರಿಸರ ರಕ್ಷಣಾ ಬಳಗದ ಡಿ.ಆರ್. ಸೋಮಶೇಖರ್, ಕಾರ್ಯಕ್ರಮ ಸಂಚಾಲಕಿ ಚೈತನ್ಯ ಮತ್ತಿತರರು ಇದ್ದರು.

Share this article