ಕನ್ನಡಪ್ರಭ ವಾರ್ತೆ ಮಡಿಕೇರಿ
ವಿದ್ಯಾರ್ಥಿಗಳು ಪರಿಸರವನ್ನು ಉಳಿಸಿ ಬೆಳೆಸಬೇಕು, ಆ ನಿಟ್ಟಿನಲ್ಲಿ ಸಮಾಜದಲ್ಲಿ ಜಾಗೃತಿ ಮೂಡಿಸುವ ಕಾರ್ಯ ಆಗಬೇಕು ಎಂದರು. ಅರಣ್ಯ ಇಲಾಖೆಯು ಪರಿಸರದ ಸಂರಕ್ಷಣೆಗೆ ವಹಿಸಿರುವ ಕ್ರಮಗಳ ಬಗ್ಗೆ ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಸೆಂಟ್ ಆನ್ಸ್ ಪದವಿ ಕಾಲೇಜಿನ ವ್ಯವಸ್ಥಾಪಕರು ಮತ್ತು ಪಿಯು ಕಾಲೇಜು ಪ್ರಾಂಶುಪಾಲ ರೆ. ಫಾ. ಮದಲೈ ಮುತ್ತು ಮಾತನಾಡಿ, ನಾವು ಪರಿಸರ ಸಂರಕ್ಷಿಸಿದರೆ ಮುಂದೊಂದು ದಿನ ಅದು ನಮ್ಮನ್ನು ಸಂರಕ್ಷಿಸುತ್ತದೆ. ಆ ನಿಟ್ಟಿನಲ್ಲಿ ಗಿಡಗಳನ್ನು ನೆಟ್ಟು ಬೆಳೆಸಬೇಕು, ಮತ್ತು ಪರಿಸರ ಜಾಗೃತಿ ಮೂಡಿಸುವಂತಾಗಬೇಕು ಎಂದರು.ಸಂತ ಅನ್ನಮ್ಮ ಚರ್ಚ್ ನ ಪ್ರಧಾನ ಗುರುಗಳು ಮತ್ತು ವಿದ್ಯಾಸಂಸ್ಥೆಯ ವ್ಯವಸ್ಥಾಪಕ ರೆ. ಫಾ. ಜೇಮ್ಸ್ ಡೊಮಿನಿಕ್, ಪದವಿ ಕಾಲೇಜು ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ಐಕ್ಯೂಎಸಿ ಸಂಚಾಲಕಿ ಹೇಮ, ನೇಚರ್ ಕ್ಲಬ್ ಸಂಚಾಲಕ ಜೇಮ್ಸ್ ಆಂಟೋನಿ, ಯುವ ರೆಡ್ ಕ್ರಾಸ್ ಅಧಿಕಾರಿ ವಿಲೀನ ಗೋನ್ಸಾಲ್ವೇಸ್, ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು, ಅರಣ್ಯ ಇಲಾಖೆಯ ಹಮೀದ್ ಮತ್ತು ವಿದ್ಯಾರ್ಥಿಗಳು ಇದ್ದರು. ಕಾಲೇಜಿನ ಎನ್. ಎಸ್. ಎಸ್. ಅಧಿಕಾರಿ ಬಿ. ಎನ್. ಶಾಂತಿಭೂಷಣ್ ಸ್ವಾಗತಿಸಿ, ನಿರೂಪಿಸಿದರು.