ವಿಶ್ವ ಹಾಲು ದಿನಾಚರಣೆ: 18 ವಿವಿಧ ನಂದಿನಿ ಕೇಕ್ ಮಾರುಕಟ್ಟೆಗೆ

KannadaprabhaNewsNetwork |  
Published : Jun 01, 2025, 03:19 AM IST

ಸಾರಾಂಶ

ವಿಶ್ವ ಹಾಲು ದಿನಾಚರಣೆ ಪ್ರಯುಕ್ತ ಕರ್ನಾಟಕ ಸಹಕಾರ ಹಾಲು ಮಹಾಮಂಡಳ ಹಾಗೂ ಶಿಮುಲ್ ವತಿಯಿಂದ ಜೂ.1 ರಂದು 18 ವಿವಿಧ ಮಾದರಿ ನಂದಿನಿ ಕೇಕ್ ಹಾಗೂ ಮಫಿನ್‌ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುತ್ತಿದ್ದು, ಮಾರುಕಟ್ಟೆಯಲ್ಲಿ ದೊರೆಯುವ ಬೇರೆ ಖಾಸಗಿ ಬ್ರಾಂಡ್‌ನ ಕೇಕ್ ಹಾಗೂ ಮಫಿನ್‌ಗಳಿಗಿಂತ ನಂದಿನಿ ಕೇಕ್ ಹಾಗೂ ಮಫಿನ್‌ಗಳು ಉತ್ತಮ ಗುಣಮಟ್ಟದಲ್ಲಿ ಹಾಗೂ ಸ್ಪರ್ಧಾತ್ಮಕ ಬೆಲೆಗಳಲ್ಲಿ ನೀಡಲಾಗುತ್ತಿದೆ.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ವಿಶ್ವ ಹಾಲು ದಿನಾಚರಣೆ ಪ್ರಯುಕ್ತ ಕರ್ನಾಟಕ ಸಹಕಾರ ಹಾಲು ಮಹಾಮಂಡಳ ಹಾಗೂ ಶಿಮುಲ್ ವತಿಯಿಂದ ಜೂ.1 ರಂದು 18 ವಿವಿಧ ಮಾದರಿ ನಂದಿನಿ ಕೇಕ್ ಹಾಗೂ ಮಫಿನ್‌ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುತ್ತಿದ್ದು, ಮಾರುಕಟ್ಟೆಯಲ್ಲಿ ದೊರೆಯುವ ಬೇರೆ ಖಾಸಗಿ ಬ್ರಾಂಡ್‌ನ ಕೇಕ್ ಹಾಗೂ ಮಫಿನ್‌ಗಳಿಗಿಂತ ನಂದಿನಿ ಕೇಕ್ ಹಾಗೂ ಮಫಿನ್‌ಗಳು ಉತ್ತಮ ಗುಣಮಟ್ಟದಲ್ಲಿ ಹಾಗೂ ಸ್ಪರ್ಧಾತ್ಮಕ ಬೆಲೆಗಳಲ್ಲಿ ನೀಡಲಾಗುತ್ತಿದೆ.

ಒಕ್ಕೂಟವು ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳ ಕಾರ್ಯ ವ್ಯಾಪ್ತಿಯನ್ನು ಹೊಂದಿದ್ದು, ಕಾರ್ಯವ್ಯಾಪ್ತಿಯ ಜಿಲ್ಲೆಗಳ 1325 ಉತ್ಪಾದಕರ ಸಹಕಾರ ಸಂಘಗಳಿಂದ ಪ್ರತಿನಿತ್ಯ 2 ಸರತಿಗಳಲ್ಲಿ ಸರಾಸರಿ 8 ಲಕ್ಷ ಲೀಟರ್‌ ಹಾಲನ್ನು ಸಂಗ್ರಹಿಸಲಾಗುತ್ತಿದೆ. ಸದರಿ ಹಾಲನ್ನು ಅತ್ಯಾಧುನಿಕ ಯಂತ್ರಗಳಲ್ಲಿ ಸಂಸ್ಕರಿಸಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ತಯಾರಿಸಲಾಗುತ್ತಿದೆ. ಒಕ್ಕೂಟದ ವ್ಯಾಪ್ತಿಯಲ್ಲಿರುವ 1836 ಹಾಲಿನ ಡೀಲರ್, 147 ಫ್ರಾಂಚೈಸಿ ಪಾರ್ಲರ್ ಹಾಗೂ 49 ಸ್ವಂತ ಪಾರ್ಲರ್‌ಗಳ ಮೂಲಕ ಪ್ರತಿನಿತ್ಯ 2.85 ಲಕ್ಷ ಲೀಟರ್ ಹಾಲು ಮತ್ತು ಸರಾಸರಿ 65 ಸಾವಿರ ಲೀಟರ್‌ ಮೊಸರನ್ನು ಮಾರಾಟ ಮಾಡಲಾಗುತ್ತಿದೆ. ಹಾಲು, ಮೊಸರು, ಮಜ್ಜಿಗೆ, ಲಸ್ಸಿ, ಸಿಹಿ ಹಾಗೂ ಖಾರಾ ಉತ್ಪನ್ನಗಳು, ನಂದಿನಿ ಹಲ್ವ, ಅಲ್ಲದೇ ಬ್ರೇಡ್, ಬನ್, ಐಸ್ ಕ್ರೀಂ ಸೇರಿದಂತೆ ಈಗಾಗಲೇ 150 ಕ್ಕೂ ಹೆಚ್ಚು ವಿವಿಧ ಉತ್ಪನ್ನಗಳನ್ನು ಕೆ.ಎಂ.ಎಫ್ ಹಾಗೂ ಹಾಲು ಒಕ್ಕೂಟಗಳಿಂದ ಮಾರಾಟ ಮಾಡಲಾಗುತ್ತಿದೆ.

ಈಗಾಗಲೇ ಶಿಮುಲ್ ವತಿಯಿಂದ 100 ಗ್ರಾಂ ಪ್ಯಾಕ್‌ನಲ್ಲಿ ಖೋವಾ ಕಡಲೇ ಮಿಠಾಯಿಯನ್ನು ಮಾರಾಟ ಮಾಡಲಾಗುತ್ತಿದ್ದು, ಅದರೊಂದಿಗೆ 12 ಗ್ರಾಂ (5 ರು. ) ಹಾಗೂ 25 ಗ್ರಾಂ (10 ರು.) ಪ್ಯಾಕ್‌ಗಳಲ್ಲಿ ಸಹ ಖೋವಾ ಕಡಲೆ ಮಿಠಾಯಿಯನ್ನು ಉತ್ಪಾದಿಸಿ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದೆ. ಉತ್ಪನ್ನದ ಗುಣಮಟ್ಟದ ಬಗ್ಗೆ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ರಾಜ್ಯ, ರಾಷ್ಟ್ರ ಹಾಗೂ ವಿದೇಶಗಳಲ್ಲಿ ಜನಪ್ರಿಯತೆ ಹೊಂದಿರುವ ನಂದಿನಿ ಉತ್ಪನ್ನಗಳು ಗ್ರಾಹಕರ ಮನ್ನಣೆ ಗಳಿಸಿದ್ದು, ಈ ಸಾಲಿಗೆ ವಿಶ್ವ ಹಾಲು ದಿನದಂದು ನಂದಿನಿ ಕೇಕ್ ಮತ್ತು ಮಫೀನ್‌ಗಳು ಸೇರ್ಪಡೆಯಾಗುತ್ತಿದೆ. ಗ್ರಾಹಕರು ಎಂದಿನಂತೆ ನಂದಿನಿ ಉತ್ಪನ್ನಗಳನ್ನು ಬಳಸುವ ಮೂಲಕ ರೈತರ ಸಹಕಾರಿ ಸಂಸ್ಥೆ ಬೆಳವಣಿಗೆಗೆ ಸಹಕರಿಸಬೇಕೆಂದು ಶಿಮುಲ್ ವ್ಯವಸ್ಥಾಪಕ ನಿರ್ದೇಶಕರಾದ ಎಸ್.ಜಿ.ಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೂನ್ 1 ರಂದು 18 ವಿವಿಧ ಮಾದರಿ ನಂದಿನಿ ಕೇಕ್ ಹಾಗೂ ಮಫಿನ್‌ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುತ್ತಿದೆ.

ಸ್ಪಾಂಜಿ ವೆನಿಲ್ಲಾ ಕೇಕ್ 25 ಗ್ರಾಂ ಗೆ 10 ರು., ಫ್ರೂಟಿ ಸ್ಲೈಸ್ ಕೇಕ್ 30 ಗ್ರಾಂ ಗೆ 1ರಿಂದ 5 ರು., ಚಾಕೋ ಕಿತ್ತಲೆ ಸ್ಲೈಸ್ ಕೇಕ್, ವೆನಿಲ್ಲಾ ಸ್ಲೈಸ್ ಕೇಕ್, ಅನಾನಸ್ ಸ್ಲೈಸ್ ಕೇಕ್ 50 ಗ್ರಾಂ ಗೆ 15 ರಿಂದ 20 ರು., ವೆನಿಲ್ಲಾ ಮಫಿನ್, ಚಾಕಲೇಟ್ ಮಫಿನ್, ಅನಾನಸ್ ಮಫಿನ್, ಸ್ಟ್ರಾಬೆರಿ ಮಫಿನ್, ಮಾವಾ ಮಫಿನ್ 150 ಗ್ರಾಂ ಗೆ 50 ರು., ಪ್ಲಮ್ ಕೇಕ್, ಚಾಕೋ ವೆನಿಲ್ಲಾ ಕೇಕ್ , ಫ್ರೂಟ್ ಕೇಕ್, ವೆನಿಲ್ಲಾ ಕೇಕ್, ಚಾಕೊಲೇಟ್ ಕೇಕ್, ವಾಲ್ನಟ್ ಬನಾನಾ ಕೇಕ್, ಚಾಕಲೆಟ್ ಬೆಲ್ಲದ ಕೇಕ್ ಹಾಗೂ ಕೊಬ್ಬರಿ ಬೆಲ್ಲದ ಕೇಕ್ 200 ಗ್ರಾಂ ಗೆ 110 ರು. ದರವನ್ನು ನಿಗದಿಪಡಿಸಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಗವಂತನ ಶಕ್ತಿ ಪಡೆದವರಿಂದ ಡಿಕೆಶಿ ಸಿಎಂ ಆಗುವ ದಿನಾಂಕ ನಿಗದಿ : ಇಕ್ಬಾಲ್
ಜನ ನಂಗೆ ಇನ್ನೊಂದು ಅವಕಾಶ ಕೊಡಲಿ : ಎಚ್ಡಿಕೆ