ಅರಕಲಗೂಡು: ತಾಲೂಕಿನ ಕಂಚಿರಾಯ ಪ್ರೌಢಶಾಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನ ಆರೋಗ್ಯ ಕೇಂದ್ರ, ಎಪಿಡಿಮಿಯಾಲಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರ ಸಹಯೋಗದೊಂದಿಗೆ ವಿಶ್ವ ತಂಬಾಕು ರಹಿತ ಮಾಸಾಚಾರಣೆ ಹಾಗೂ ಯುವ ಸ್ಪಂದನ ಅರಿವು ಕಾರ್ಯಕ್ರಮವನ್ನು ವಿದ್ಯಾರ್ಥಿಗಳಿಗೆ ನೀಡಲಾಯಿತು.
ಯುವ ಸ್ಪಂದನ ಕಾರ್ಯಕ್ರಮದ ಘಟಕ ಅಂಶಗಳಾದ ಆರೋಗ್ಯ ಮತ್ತು ಜೀವನ ಶೈಲಿಯ ಬಗ್ಗೆ ಮಾನಸಿಕ ಆರೋಗ್ಯ ಸುರಕ್ಷತೆ ಸಂಬಂಧಗಳು ಹಾಗೂ ಶಿಕ್ಷಣ, ವೃತ್ತಿ, ವ್ಯಕ್ತಿತ್ವ ಬೆಳವಣಿಗೆ, ಲೈಂಗಿಕ ದೌರ್ಜನಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವನ್ನು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರರಾದ ವಿಮಲಾ ಅವರು ವಿದ್ಯಾರ್ಥಿಗಳಿಗೆ ಮದ್ಯಪಾನ ಹಾಗೂ ತಂಬಾಕು ಸೇವನೆಗಳ ಬಗ್ಗೆ ಹಾಗೂ ತಂಬಾಕು ಸೇವನೆಯ ದುಷ್ಪರಿಣಾಮಗಳ ಬಗ್ಗೆ ಜಾಗೃತಗೊಳ್ಳುವಂತಹ ಹಲವಾರು ಮಾಹಿತಿಯನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ತಾಲೂಕಿನ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಪರಮೇಶ್ವರ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಚಂದ್ರೇಗೌಡ, ಜಿಲ್ಲೆ ಯುವ ಪರಿವರ್ತಕರಾದ ಜಿ. ಎಲ್. ಚಂದ್ರಶೇಖರ್, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕರಾದ ವೆಂಕಟೇಶ್ ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.