ವಿಶ್ವ ಜನಸಂಖ್ಯಾ ದಿನಾಚರಣೆ ನಾಳೆ

KannadaprabhaNewsNetwork | Published : Jul 10, 2024 12:39 AM

ಸಾರಾಂಶ

ದಾವಣಗೆರೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆರೋಗ್ಯ ಸಂಘ ವತಿಯಿಂದ ಜು.11ರಂದು `ಅಭಿವೃದ್ಧಿ ಹೊಂದಿದ ಭಾರತದ ಹೊಸ ಗುರುತಿಗಾಗಿ ಕುಟುಂಬ ಯೋಜನೆ ಅಳವಡಿಕೆ ಪ್ರತಿ ದಂಪತಿಗಳಿಗೆ ಹೆಮ್ಮೆ ತರುತ್ತದೆ` ಎಂಬ ಘೋಷವಾಕ್ಯದೊಂದಿಗೆ ರಾಜ್ಯಮಟ್ಟದ 2024ನೇ ಸಾಲಿನ ವಿಶ್ವ ಜನಸಂಖ್ಯಾ ದಿನ ಕಾರ್ಯಕ್ರಮವನ್ನು ನಗರದ ಬಿಐಇಟಿ ಕಾಲೇಜಿನ ಎಸ್.ಎಸ್. ಮಲ್ಲಿಕಾರ್ಜುನ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗಿದೆ.

ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆರೋಗ್ಯ ಸಂಘ ವತಿಯಿಂದ ಜು.11ರಂದು `ಅಭಿವೃದ್ಧಿ ಹೊಂದಿದ ಭಾರತದ ಹೊಸ ಗುರುತಿಗಾಗಿ ಕುಟುಂಬ ಯೋಜನೆ ಅಳವಡಿಕೆ ಪ್ರತಿ ದಂಪತಿಗಳಿಗೆ ಹೆಮ್ಮೆ ತರುತ್ತದೆ` ಎಂಬ ಘೋಷವಾಕ್ಯದೊಂದಿಗೆ ರಾಜ್ಯಮಟ್ಟದ 2024ನೇ ಸಾಲಿನ ವಿಶ್ವ ಜನಸಂಖ್ಯಾ ದಿನ ಕಾರ್ಯಕ್ರಮವನ್ನು ನಗರದ ಬಿಐಇಟಿ ಕಾಲೇಜಿನ ಎಸ್.ಎಸ್. ಮಲ್ಲಿಕಾರ್ಜುನ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗಿದೆ.

ಬೆಳಗ್ಗೆ 10.30 ಗಂಟೆಗೆ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಕಾರ್ಯಕ್ರಮ ಉದ್ಘಾಟಿಸುವರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ್ ಉಪಸ್ಥಿತರಿರುವರು.

ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಡಿ.ಜಿ. ಶಾಂತನಗೌಡ, ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ, ಹರಿಹರ ಶಾಸಕ ಬಿ.ಪಿ. ಹರೀಶ್, ಮಹಾನಗರ ಪಾಲಿಕೆ ಮೇಯರ್ ಬಿ.ಎಚ್.ವಿನಾಯಕ, ವಿಪ ಸದಸ್ಯರಾದ ಎನ್.ರವಿಕುಮಾರ, ಎಸ್.ಎಲ್. ಭೋಜೇಗೌಡ, ಚಿದಾನಂದ್ ಎಂ.ಗೌಡ, ಡಿ.ಎಸ್.ಅರುಣ್, ಕೆ.ಎಸ್.ನವೀನ್, ಕೆ.ಅಬ್ದುಲ್ ಜಬ್ಬಾರ್, ಧನಂಜಯ್ ಸರ್ಜಿ, ಡಿ.ಟಿ.ಶ್ರೀನಿವಾಸ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ, ಡಾ.ವೈ.ನವೀನ್ ಭಟ್, ಡಾ.ಜಿ.ಎನ್ ಶ್ರೀನಿವಾಸ್, ಡಾ.ಎನ್.ಎಸ್. ನಂದಾ, ಡಿ.ರಂದೀಪ್, ನಾಗರಾಜ, ಡಾ.ಎಂ.ಟಿ. ತ್ರಿವೇಣಿ, ಡಾ ವಿವೇಕ್ ದೊರೈ, ಡಾ.ಬಿ.ಆರ್. ಚಂದ್ರಿಕಾ ಭಾಗವಹಿಸುವರು.

ಜಿಲ್ಲಾಧಿಕಾರಿ ಡಾ. ಜಿ.ಎಂ. ಗಂಗಾಧರಸ್ವಾಮಿ, ಜಿಪಂ ಸಿಇಒ ಡಾ.ಸುರೇಶ್ ಬಿ. ಇಟ್ನಾಳ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಡಾ.ಷಣ್ಮುಖಪ್ಪ, ಡಾ.ರೇಣುಕಾರಾಧ್ಯ ಇತರರು ಭಾಗವಹಿಸುವರು.

Share this article