ಕನ್ನಡಪ್ರಭ ವಾರ್ತೆ ತುಮಕೂರು
ವಿಶ್ವವಿದ್ಯಾನಿಲಯ ಕಲಾ ಮತ್ತು ವಿಜ್ಞಾನ ಕಾಲೇಜಿನ ಸಂಸ್ಕೃತ ವಿಭಾಗವು ಮಂಗಳವಾರ ಆಯೋಜಿಸಿದ್ದ ‘ಆಧುನಿಕಯುಗದಲ್ಲಿ ಸಂಸ್ಕೃತದ ಅವಶ್ಯಕತೆ’ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಂಸ್ಕೃದಲ್ಲಿರುವ ಕಾಳಿದಾಸನ ಮಹಾಕಾವ್ಯಗಳು ವಿಲಿಯಂ ಶೇಕ್ಸ್‌ಪಿಯರ್‌ನ ಸಾನೆಟ್‌ಗಳಿಗಿಂತಲೂ, ಪ್ರಾಚೀನ ಗ್ರೀಕ್ ಮಹಾಕಾವ್ಯಗಳಾದ ಇಲಿಯಡ್, ಒಡಿಸ್ಸಿಗಿಂತಲೂ ಉನ್ನತ ಮಟ್ಟದ್ದಾಗಿದೆ ಎಂದು ವಿದೇಶಿ ಕವಿಗಳೇ ಒಪ್ಪಿದ್ದಾರೆ ಎಂದರು.ವಿಚಾರ ವಿನಿಮಯ, ವಿಷಯಗಳ ಮಂಥನಕ್ಕೆ ಸ್ವಾಗತಿಸಿದ ದೇಶ ಭಾರತ. ಕ್ಷತ್ರಿಯನ ಕರ್ತವ್ಯವನ್ನು ನೆನಪು ಮಾಡಲು ಭಗವದ್ಗೀತೆ ಹೊರಟಿತು. ಪ್ರಶ್ನೆ ಉತ್ತರಗಳ ಜಿಜ್ಞಾಸೆ ಇರಬೇಕು. ವಿಷಯಗಳ ಮಂಥನ, ವಿಮರ್ಶೆಗಳಾಗಬೇಕು. ಎಲ್ಲ ಕಾಲಕ್ಕೂ ಅವಶ್ಯಕವಾದ ಕಲೆ, ಸಾಹಿತ್ಯ, ಸಂಗೀತದ ಉದಯವಾಗಿದ್ದು ಸಂಸ್ಕೃತ ಭಾಷೆಯಲ್ಲಿ. ಕನ್ನಡ ಹೃದಯದ ಭಾಷೆಯಾದರೆ, ಸಂಸ್ಕೃತ ಪುಣ್ಯಾಮೃತದ ಭಾಷೆ ಎಂದು ಹೇಳಿದರು.
‘ಸೊನ್ನೆಯಿಂದ ಶುರುವಾದ ಭಾರತ ಸಂಸ್ಕೃತ ಭಾಷೆಯಿಂದ ಎಲ್ಲರಿಗೂ ತಾಯಿಯಾಯಿತು’ ಎಂದು ಇತಿಹಾಸ ತಜ್ಞ ವಿಲ್ ಡ್ಯುರಾಂಟ್ ಹೇಳಿದ್ದಾರೆ. 170 ವರ್ಷಗಳ ಹಿಂದೆ ಭಾರತದ ಸರ್ವೋಚ್ಚ ನ್ಯಾಯಾಲಯದ ಮೊದಲ ನ್ಯಾಯಾಧೀಶರಾಗಿದ್ದ ವಿಲಿಯಂ ಜೋನ್ಸ್ 22ನೆಯ ಭಾಷೆಯಾಗಿ ಸಂಸ್ಕೃತಾಭ್ಯಾಸವನ್ನು ಐದು ವರ್ಷಗಳ ಕಾಲ ಮಾಡಿ, ಸಂಸ್ಕೃತದ ಪ್ರಾಚೀನತೆಯ ಕುರಿತು ಪುಸ್ತಕ ಬರೆದರು ಎಂದು ತಿಳಿಸಿದರು.
ವಿದ್ಯಾವಾಹಿನಿ ಪ್ರಥಮ ದರ್ಜೆ ಕಾಲೇಜಿನ ಸಂಸ್ಕೃತ ಉಪನ್ಯಾಸಕಿ ಪ್ರೇಮಾ ಅನಂತ ಮತ್ತು ಗಮಕಿ ಶ್ರೀದೇವಿ ಅನಂತರಾಜು ಗಮಕ ವಾಚನ ಮಾಡಿದರು. ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ. ಪ್ರಕಾಶ್ ಎಂ.ಶೇಟ್, ಸಂಸ್ಕೃತ ವಿಭಾಗದ ಉಪನ್ಯಾಸಕರಾದ ಡಾ.ಡಿ.ವಿ. ಸುಬ್ರಹ್ಮಣ್ಯ ಶಾಸ್ತ್ರಿ, ಜಿ. ವತ್ಸಲ, ಲೋಕೇಶ್ ಎಂ.ಆರ್. ಉಪಸ್ಥಿತರಿದ್ದರು.