ಕನ್ನಡಪ್ರಭವಾರ್ತೆ ಗುಳೇದಗುಡ್ಡ
ಅವರು ಬುಧವಾರ ಗುಳೇದಗುಡ್ಡ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ನಡೆದ ವಿಶ್ವ ರಂಗಭೂಮಿ ದಿನಾಚರಣೆ ಅಂಗವಾಗಿ ಜರುಗಿದ ಸರಳ ಸಮಾರಂಭದಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿ, ರಂಗಭೂಮಿ ಕಲಾವಿದರು ವೈಯಕ್ತಿಕ ಬದುಕಿನಲ್ಲಿ ಅನೇಕ ಕಷ್ಟಗಳಿದ್ದರೂ ಅದನ್ನು ಬದಿಗೊತ್ತಿ ಸಮಾಜಕ್ಕೆ ಉತ್ತಮ ಸಂದೇಶ ಕೊಟ್ಟಿದ್ದಾರೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕೋಶಾಧ್ಯಕ್ಷ, ಸಾಹಿತಿ ಡಾ.ಸಿ.ಎಂ.ಜೋಶಿ ಮುಖ್ಯ ಅತಿಥಿಗಳಾಗಿ ಮಾತನಾಡಿ, ಕನ್ನಡ ರಂಗಭೂಮಿಯ ಕಲಾವಿದರೆಲ್ಲರೂ ನಮ್ಮ ಕನ್ನಡ ನಾಡಿನ ಸಾಂಸ್ಕೃತಿಕ ಲೋಕದ ರಾಯಭಾರಿಗಳಾಗಿದ್ದಾರೆ. ರಂಗಕಲಾವಿದರಿಗೆ ಮಾಶಾಸನ ಸೇರಿದಂತೆ ಸರ್ಕಾರದ ಇನ್ನಿತರ ಸೌಲಭ್ಯಗಳನ್ನು ಒದಗಿಸಿಕೊಡಬೇಕು. ಇದರಿಂದ ಅವರ ಆರ್ಥಿಕ ಗುಣಮಟ್ಟ ಸುಧಾರಣೆಗೆ ಸಹಕಾರಿಯಾಗಲಿದೆ. ಅನೇಕ ದಶಕಗಳಿಂದ ರಂಗಭೂಮಿಯನ್ನೇ ನೆಚ್ಚಿಕೊಂಡು ಬದುಕಿದ ಹಲವಾರು ಕುಟುಂಬಗಳಿಂದ ಬೀದಿಗೆ ಬಂದಿವೆ. ಅವುಗಳ ಸಂರಕ್ಷಣೆ ಅತ್ಯಂತ ಜವಾಬ್ದಾರಿಯುತವಾಗಿದೆ. ಇಂತಹ ರಂಗಭೂಮಿ ಕಲಾವಿದರನ್ನು ಗುರುತಿಸಿ ಅವರನ್ನು ಪ್ರೋತ್ಸಾಹಿಸಿ ಗೌರವಿಸುವ ಕಾರ್ಯಗಳು ಇನ್ನೂ ಹೆಚ್ಚೆಚ್ಚು ಆಗಬೇಕಿದೆ ಎಂದು ಹೇಳಿದರು.ದೊಡ್ಡಾಟ ಕಲಾವಿದ ಶ್ರಿಕಾಂತ ಹುನಗುಂದ, ರಂಗ ವ್ಯವಸ್ಥಾಪಕ ಸುರೇಶ ಸಾರಂಗಿ ಮಾತನಾಡಿ, ನಾವೆಲ್ಲರೂ ಇಂದು ಟಿ.ವಿ. ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸಮಯವನ್ನು ಕಳೆಯುತ್ತಿರುವುದರಿಂದ ನಾಟಕ ಮತ್ತಿತರ ರಂಗಕಲೆಗಳ ಕಡೆಗಿನ ಆಸಕ್ತಿ ಕ್ಷೀಣಿಸುತ್ತಿದೆ. ಹಾಗಾಗಿ ರಂಗಕಲೆ ಮತ್ತು ಕಲಾವಿದರನ್ನು ಉಳಿಸಿ ಬೆಳೆಸುವ ಕಾರ್ಯವನ್ನು ಎಲ್ಲರೂ ಮಾಡಬೇಕೆಂದು ಮನವಿ ಮಾಡಿದರು.