ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಜಂತು ಹುಳು ನಿರ್ಮೂಲನೆಯಿಂದ ಮಕ್ಕಳು ಸೇವಿಸುವ ಪೌಷ್ಟಿಕ ಆಹಾರ ಮಕ್ಕಳ ದೇಹಕ್ಕೆ ಲಭ್ಯವಾಗುತ್ತದೆ. ಜಂತುಹುಳು ನಿರ್ಮೂಲನೆಗೆ ಮಾತ್ರೆ ಸೇವಿಸುವುದು ಮಾತ್ರವಲ್ಲದೆ ಶೌಚಾಲಯಕ್ಕೆ ಹೋಗಿ ಬಂದ ನಂತರ ಹಾಗೂ ಊಟಕ್ಕೆ ಮುನ್ನ ಕೈಗಳನ್ನು ಚೆನ್ನಾಗಿ ತೊಳೆಯುವ ಹವ್ಯಾಸ ಬೆಳೆಸಿಕೊಳ್ಳಲು ಸಲಹೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಂಜುನಾಥ ಡಿ.ಎನ್. ಮಾತನಾಡಿ, ರಾಷ್ಟ್ರೀಯ ಜಂತುಹುಳು ನಿರ್ಮೂಲನಾ ದಿನದ ನಿಮಿತ್ತ 1-19 ವರ್ಷದೊಳಗಿನ ಎಲ್ಲ ಅಂಗನವಾಡಿ ಕೇಂದ್ರ, ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಖಾಸಗಿ ಶಾಲೆಗಳು ಸೇರಿದಂತೆ ಕಾಲೇಜು ಮಕ್ಕಳಿಗೆ ಉಚಿತವಾಗಿ ಜಂತು ಹುಳು ನಿವಾರಣೆಗೆ ಮಾತ್ರೆ ನೀಡಲಾಗುತ್ತಿದೆ. ತರಗತಿಗಳಿಗೆ ಗೈರು ಹಾಜರಾದ ಮಕ್ಕಳಿಗೆ ಮತ್ತೆ ಫೆ.16ರಂದು ಮಾಪ್ ಅಪ್ ದಿನ ಮಾತ್ರೆ ನೀಡಲಾಗುತ್ತದೆ ಎಂದು ತಿಳಿಸಿದರು.ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ರಾಜಕುಮಾರ ಯರಗಲ್ಲ, ಆಹಾರ ಇಲಾಖೆ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ತಾಲೂಕು ಆರೋಗ್ಯಾಧಿಕಾರಿ ಡಾ.ಸರಸ್ವತಿ ಮಾಗಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಕಲಾ ಶಿನ್ನೂರ, ಆರ್.ಕೆ.ಎಸ್ಕೆ ಕಾರ್ಯಕ್ರಮ ಸಂಯೋಜಕ ವಿವೇಕ ಬೆಂಡಿಗೇರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.