- ಕುಡಿಯುವ ನೀರಿನ ಪೈಪ್ ಒಡೆದಿರುವ ಶಂಕೆ
- ಗ್ರಾಮ ಪಂಚಾಯ್ತಿ ನಿರಾಸಕ್ತಿ ಬಗ್ಗೆ ಜನರ ಬೇಸರ
- ಕಲುಷಿತ ನೀರಿನಿಂದ ರೋಗ ಹರಡುವ ಆತಂಕ---
ತಾಲೂಕಿನ ಗೌಡಹಳ್ಳಿ ಗ್ರಾಮದ ಉಪ್ಪಾರ ಬಡಾವಣೆಯಲ್ಲಿ ಕಳೆದ 3 ದಿನಗಳಿಂದ ಕುಡಿಯುವ ನೀರಿನೊಂದಿಗೆ ಹುಳುಗಳು ಬರುತ್ತಿದ್ದು ಸಾರ್ವಜನಿಕರು ಆತಂಕಗೊಂಡಿದ್ದಾರೆ.
ಈ ಬಡಾವಣೆಯಲ್ಲಿ ಮಾತ್ರ ಈ ಸಮಸ್ಯೆ ಇದ್ದು, ಕುಡಿಯುವ ನೀರಿನ ಪೈಪ್ ಒಡೆದು ಕಲುಷಿತ ನೀರು ಇದಕ್ಕೆ ಸೇರಿರುವ ಬಗ್ಗೆ ಅನುಮಾನಗಳಿವೆ. ಈಗ ಬೇಸಿಗೆವಾಗಿರುವುದರಿಂದ ನೀರಿನಿಂದ ಅಪಾಯಕಾರಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಗಳು ದಟ್ಟವಾಗಿವೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟವರು ಈ ಬಗ್ಗೆ ಸೂಕ್ತ ಕ್ರಮ ವಹಿಸಬೇಕು. ಈ ಸಮಸ್ಯೆಗೆ ಪರಿಹಾರವನ್ನು ಒದಗಿಸಬೇಕು ಎಂದು ಇಲ್ಲಿನ ವಾಸಿಗಳಾದ ಮಹೇಶ್, ಪೂಜಾ ಸೇರಿದಂತೆ ಅನೇಕರ ಆಗ್ರಹವಾಗಿದೆ.
ಗೌಡಹಳ್ಳಿ ಗ್ರಾಮದ ಉಪ್ಪಾರ ಬಡಾವಣೆಯಲ್ಲಿ ಕುಡಿಯುವ ನೀರಿನಲ್ಲಿ ಹುಳುಗಳು ಬರುತ್ತಿವೆ ಎಂಬುದರ ಬಗ್ಗೆ ನನಗೆ ಮಾಹಿತಿ ಇಲ್ಲ. ಸಂಬಂಧಪಟ್ಟ ಪಿಡಿಒಗಳೊಂದಿಗೆ ಸಂಪರ್ಕಿಸಿ ಆದಷ್ಟು ಬೇಗ ಈ ಸಮಸ್ಯೆಯನ್ನು ಬಗೆಹರಿಸಲು ಕ್ರಮ ವಹಿಸಲಾಗುವುದು.
---5ಸಿಎಚ್‌ಎನ್55