ಕನ್ನಡಪ್ರಭ ವಾರ್ತೆ ಉಡುಪಿ
ಕಲೆ, ಸಾಹಿತ್ಯ, ಸಂಸ್ಕೃತಿ, ಆಧ್ಯಾತ್ಮದ ಅಸ್ಮಿತೆಯಿಂದ ಬೆಳಗುತ್ತಿರುವ ಶ್ರೀ ಶಂಕರನಾರಾಯಣನ ಈ ದಿವ್ಯ ಸನ್ನಿಧಿಯಲ್ಲಿ ಗುರು ರಾಘವೇಂದ್ರ ಸ್ವಾಮಿಗಳ ಆರಾಧನೆಯ ಈ ಪರ್ವ ಕಾಲದಲ್ಲಿ ಕಲಾವಿದರಿಗೆ ಹಾಗೂ ಭಕ್ತರಿಗೆ ಶುಭ ಹಾರೈಸಿದರು.
ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಕಾಶ್ ಜಿ. ಕೊಡವೂರು, ಶ್ರೀ ದೇವಳದಲ್ಲಿ ನಡೆಯುವ ಅಭಿವೃದ್ಧಿ ಕಾರ್ಯಕ್ರಮಗಳ ಮಾಹಿತಿ ನೀಡಿದರು.ಈ ಸಂದರ್ಭ ದೇವಳದ ಪ್ರಧಾನ ಅರ್ಚಕ ಸೀತಾರಾಮ ಆಚಾರ್ಯ, ಭಕ್ತವೃಂದದ ಅಧ್ಯಕ್ಷ ತೋಟದಮನೆ ದಿವಾಕರ ಶೆಟ್ಟಿ, ನಗರಸಭಾ ಸದಸ್ಯ ವಿಜಯ ಕೊಡವೂರು, ಉದ್ಯಮಿ ಸಾಧು ಸಾಲ್ಯಾನ್, ವ್ಯವಸ್ಥಾಪನ ಸಮಿತಿ ಸದಸ್ಯ ಭಾಸ್ಕರ್ ಪಾಲನ್, ಎ. ರಾಜ ಸೇರಿಗಾರ್ ಉಪಸ್ಥಿತರಿದ್ದರು.ಶಂಕರನಾರಾಯಣ ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ಜನಾರ್ದನ್ ಕೊಡವೂರು ಸ್ವಾಗತಿಸಿದರು. ಕಾವ್ಯ ಸೀತಾರಾಮ್ ಪ್ರಾರ್ಥಿಸಿದರು. ಪೂರ್ಣಿಮಾ ಜನಾರ್ದನ್ ನಿರೂಪಿಸಿದರು.