ಆಧುನಿಕತೆಯ ಮಾಯಾಜಾಲದಲ್ಲಿ ಕುಸ್ತಿ ಕಣ್ಮರೆ

KannadaprabhaNewsNetwork |  
Published : Nov 21, 2026, 02:00 AM IST
ವಿದ್ಯಾಗಿರಿಯ ಜನತಾ ಶಿಕ್ಷಣ ಸಮಿತಿಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 79ನೇ ಹುಟ್ಟುಹಬ್ಬದ ಪ್ರಯುಕ್ತ ರಾಜ್ಯ ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಜೆಎಸ್ಸೆಸ್‌ ಹುಕ್ಕೇರಿಕರ್ ಪಿಯು ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿ ಉದ್ಘಾಟನೆ. | Kannada Prabha

ಸಾರಾಂಶ

ಕುಸ್ತಿ ಭಾರತದ ಅತ್ಯಂತ ಪ್ರಾಚೀನ ಹಾಗೂ ಸಾಂಪ್ರದಾಯಿಕ ಕ್ರೀಡೆಗಳಲ್ಲಿ ಒಂದಾಗಿದೆ. ಈ ಕ್ರೀಡೆಯು ದೈಹಿಕ ಶಕ್ತಿ, ಮಾನಸಿಕ ಸ್ಥೈರ್ಯ, ಶಿಸ್ತು, ಆತ್ಮವಿಶ್ವಾಸ ಮತ್ತು ಕ್ರೀಡಾ ಮನೋಭಾವ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

ಧಾರವಾಡ:

ಕುಸ್ತಿ ಭಾರತದ ಅತ್ಯಂತ ಪ್ರಾಚೀನ ಹಾಗೂ ಸಾಂಪ್ರದಾಯಿಕ ಕ್ರೀಡೆಗಳಲ್ಲಿ ಒಂದಾಗಿದೆ. ಈ ಕ್ರೀಡೆಯು ದೈಹಿಕ ಶಕ್ತಿ, ಮಾನಸಿಕ ಸ್ಥೈರ್ಯ, ಶಿಸ್ತು, ಆತ್ಮವಿಶ್ವಾಸ ಮತ್ತು ಕ್ರೀಡಾ ಮನೋಭಾವ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಆದರೆ, ಆಧುನಿಕತೆಯ ಮಾಯಾಜಾಲದಲ್ಲಿ ಕುಸ್ತಿ ಕ್ರೀಡೆಗೆ ಯುವಜನತೆ ಪ್ರಾಮುಖ್ಯತೆ ನೀಡುತ್ತಿಲ್ಲ ಎಂದು ವಿಧಾನ ಪರಿಷತ್‌ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಬೇಸರ ವ್ಯಕ್ತಪಡಿಸಿದರು.

ವಿದ್ಯಾಗಿರಿಯ ಜನತಾ ಶಿಕ್ಷಣ ಸಮಿತಿಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 79ನೇ ಹುಟ್ಟುಹಬ್ಬದ ಪ್ರಯುಕ್ತ ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಜೆಎಸ್‌ಎಸ್‌ ಹುಕ್ಕೇರಿಕರ್ ಪಿಯು ಕಾಲೇಜುಗಳ ಆಶ್ರಯದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿ ಉದ್ಘಾಟಿಸಿದ ಅವರು, ಶಾಲಾ-ಕಾಲೇಜುಗಲಲ್ಲಿ ಕುಸ್ತಿ ಕ್ರೀಡೆಗೆ ಪ್ರಾಮುಖ್ಯತೆ ನೀಡಬೇಕು. ಮಕ್ಕಳಿಗೆ, ಪಾಲಕರಿಗೆ ಇದರ ಬಗ್ಗೆ ಅರಿವು ಮೂಡಿಸುವ ಕೆಲಸವಾಗಬೇಕು ಎಂದರು.

ಶಾಸಕ ಅರವಿಂದ ಬೆಲ್ಲದ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ಹೆಚ್ಚುವದರೊಂದಿಗೆ ಅವರು ಆರೋಗ್ಯದಲ್ಲಿ ಆಂತರಿಕವಾಗಿ ಹಾಗೂ ಬಾಹ್ಯವಾಗಿ ಅಭಿವೃದ್ಧಿ ಹೊಂದುತ್ತಾರೆ. ಕ್ರೀಡೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಷ್ಟ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿ ತಂದಿದ್ದು ಕುಸ್ತಿ,

ಬ್ಯಾಡ್ಮಿಂಟನ್, ಕಬಡ್ಡಿ, ಖೋಖೋದಂತಹ ಹಲವಾರು ಕ್ರೀಡೆಗಳ ಉತ್ತೇಜನಕ್ಕಾಗಿ ಒಳಾಂಗಣ ಹಾಗೂ ಹೊರಾಂಗಣ ಕ್ರೀಡಾಂಗಣಗಳ ಅಭಿವೃದ್ಧಿ ಮಾಡಲಾಗಿದೆ ಎಂದರು. ಅಂತಾರಾಷ್ಟ್ರೀಯ ಕುಸ್ತಿಪಟು ರತ್ನಕುಮಾರ ಮಠಪತಿ ಮಾತನಾಡಿ, ಕುಸ್ತಿ ಅತ್ಯಂತ ಕಠಿಣವಾದ ಕ್ರೀಡೆಯಾಗಿದ್ದು, ಅದಕ್ಕೆ ನಿರಂತರ ಅಭ್ಯಾಸ, ಶಿಸ್ತು ಮತ್ತು ಸಮರ್ಪಣಾಭಾವ ಅತ್ಯಗತ್ಯ ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಕಾರ್ಯದರ್ಶಿ ಡಾ. ಅಜಿತ್ ಪ್ರಸಾದ ಮಾತನಾಡಿ, ಜನತಾ ಶಿಕ್ಷಣ ಸಮಿತಿಯು 22 ಸಾವಿರ ವಿದ್ಯಾರ್ಥಿಗಳನ್ನು ಒಳಗೊಂಡ ಬೃಹತ್ ಶಿಕ್ಷಣ ಸಂಸ್ಥೆಯಾಗಿದ್ದು ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನ ಹಾಗೂ ಪಟ್ಟಾಭಿಷೇಕ ವರ್ಧಂತಿಯ ಅಂಗವಾಗಿ ಸಂಸ್ಥೆಯ ವಿವಿಧ ಶಾಲಾ-ಕಾಲೇಜುಗಳಲ್ಲಿ 79 ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದರು.

ಪದವಿ ಕಾಲೇಜಿನ ಕ್ರೀಡಾ ನಿರ್ದೇಶಕ ಡಾ. ಜಿನ್ನಪ್ಪ ಕುಂದಗೋಳ ಸ್ವಾಗತಿಸಿದರು. ಶ್ರವಣಕುಮಾರ ಯೋಗಿ ನಿರೂಪಿಸಿದರು. ಡಾ. ಸೂರಜ್ ಜೈನ್ ವಂದಿಸಿದರು. ಆಡಳಿತಾಧಿಕಾರಿ ಅರಿಹಂತ ಪ್ರಸಾದ, ಭಾರತಿ ಶಾನಭಾಗ, ಡಾ. ತೇಜಸ್ವಿನಿ ನಾರಾಯಣಕರ, ಮಹಾವೀರ ಉಪಾದ್ಯೆ, ಡಾ. ಬಿ.ಎಂ. ಪಾಟೀಲ್ ಇದ್ದರು.

ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ 800ಕ್ಕೂ ಹೆಚ್ಚು ಕ್ರೀಡಾಪಟುಗಳು ಆಗಮಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯ ಹೆದ್ದಾರಿ ದುರಸ್ತಿಗಾಗಿ ರಸ್ತೆತಡೆ
ಅನುದಾನಿತ ಶಾಲಾ ನೌಕರರಿಗೂ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಲು ಆಗ್ರಹ