-ಸೆ.22 ರಿಂದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭ
----ಕನ್ನಡಪ್ರಭ ವಾರ್ತೆ ಯಾದಗಿರಿ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಧರ್ಮದ ಕಾಲಂನಲ್ಲಿ ವೀರಶೈವ ಲಿಂಗಾಯತ ಎಂದೇ ಬರೆಸಬೇಕು. ಹಿಂದೂ ಎಂದು ಬರೆಸಬಾರದು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಜ್ಯ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಅವಿನಾಶ ಜಗನ್ನಾಥ ಮನವಿ ಮಾಡಿದರು.ಈ ಕುರಿತು ಹೇಳಿಕೆ ನೀಡಿರುವ ಅವರು, ಸೆ.22 ರಿಂದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಆರಂಭಗೊಳ್ಳಲಿದೆ. ಹಿಂದಿನಿಂದಲೂ ಮಹಾಸಭಾವು ವೀರಶೈವ-ಲಿಂಗಾಯತ ಧರ್ಮದ ಪ್ರತಿಪಾದನೆ ಮಾಡುತ್ತಾ ಬಂದಿದೆ.
ಹೀಗಾಗಿ ಧರ್ಮದ ಕಾಲಂನ ಇತರೆ ಕಾಲಂನಲ್ಲಿ ವೀರಶೈವ ಲಿಂಗಾಯತ ಎಂದು ಬರೆಸಬೇಕು ಎಂದು ಈಗಾಗಲೇ ಮಹಾಸಭೆಯ ರಾಷ್ಟ್ರೀಯ ಸಮಿತಿಯಲ್ಲಿ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ಅರಣ್ಯ ಸಚಿವ ಈಶ್ವರ ಖಂಡ್ರೆ ಹಾಗೂ ರಾಜ್ಯಾಧ್ಯಕ್ಷ ಶಂಕರ ಬಿದರಿ ಅವರು ತೀರ್ಮಾನಿಸಿ, ಇದೇ ಮಾದರಿಯಲ್ಲಿ ಬರೆಸುವಂತೆ ಸೂಚನೆ ನೀಡಿದ್ದಾರೆ. ಇದರ ಅನ್ವಯ ಎಲ್ಲರೂ ವೀರಶೈವ ಲಿಂಗಾಯತ ಎಂದೇ ಧರ್ಮ ಕಾಲಂ ನಲ್ಲಿ ಬರೆಸಬೇಕು.ಜಾತಿಯ ಕಾಲಂನಲ್ಲಿ ವೀರಶೈವ ಅಥವಾ ಲಿಂಗಾಯತ ಎಂದು, ಉಪ ಜಾತಿಯ ಕಾಲಂನಲ್ಲಿ ತಮ್ಮ ತಮ್ಮ ಉಪಜಾತಿ ಹೆಸರು ಬರೆಸಬೇಕು. ಸರ್ಕಾರಕ್ಕೆ ನಾಡಿನ ಜನರ ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಯ ನಿಖರ ಮಾಹಿತಿ ದೊರೆತರೆ, ಕಲ್ಯಾಣಕಾರ್ಯಕ್ರಮ ರೂಪಿಸಲು ಅನುಕೂಲವಾಗುತ್ತದೆ. ಹೀಗಾಗಿ ಪ್ರತಿಯೊಬ್ಬರೂ ಸಮೀಕ್ಷೆಯಲ್ಲಿ ತಮ್ಮ ಮಾಹಿತಿ ಏಕರೂಪವಾಗಿರುವಂತೆ ನೋಡಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ.
ಜಾತಿ ಪ್ರಮಾಣ ಪತ್ರಕ್ಕೂ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೂ ಸಂಬಂಧವಿಲ್ಲ. ಪ್ರತಿಯೊಬ್ಬರೂ ತಮ್ಮ ನೈಜ ಜಾತಿಯನ್ನೇ ಸಮೀಕ್ಷೆಯ ವೇಳೆ ಬರೆಸಬೇಕು, ನಮ್ಮ ಸಮುದಾಯದ ನೈಜ ಜನಸಂಖ್ಯೆ ಹೊರಹೊಮ್ಮಲು ಇದು ಬಹಳ ಮುಖ್ಯವಾಗಿರುವುದರಿಂದ ಎಲ್ಲರೂ ಒಂದೇ ರೀತಿಯ ಮಾಹಿತಿ ನೀಡಿ ಬರೆಸುವಂತೆ ಅವರು ಮನವಿ ಮಾಡಿದ್ದಾರೆ.-----
9ವೈಡಿಆರ್5: ಅವಿನಾಶ್ ಜಗನ್ನಾಥ್, ಅಭಾವೀಲಿಂ ರಾಜ್ಯ ಯುವ ಘಟಕದ ಪ್ರಕಾ