ನಮಗೆ ಸಾಮಾಜಿಕ ಸ್ವಾತಂತ್ರ್ಯ ಬೇಕು

KannadaprabhaNewsNetwork |  
Published : Jun 30, 2025, 12:34 AM IST
58 | Kannada Prabha

ಸಾರಾಂಶ

ಬೌದ್ಧ ಧರ್ಮದ ಪರಿಕಲ್ಪನೆಗಳನ್ನು ಸಮಾಜಕ್ಕೆ ತಿಳಿಸುವ ಕೆಲಸವನ್ನು ಯುವಕರು ಮಾಡಬೇಕಾಗಿದೆ.

ಕನ್ನಡಪ್ರಭ ವಾರ್ತೆ ನಂಜನಗೂಡುದೇಶದಲ್ಲಿ ರಾಜಕೀಯ ಸ್ವಾತಂತ್ರ್ಯಕ್ಕಿಂತ ಸಾಮಾಜಿಕ ಸ್ವಾತಂತ್ರ್ಯ ಬೇಕಾಗಿದೆ ಎಂದು ಸಾಹಿತಿ ಡಾ. ಬಂಜಗೆರೆ ಜಯಪ್ರಕಾಶ್ ತಿಳಿಸಿದರು.ಪಟ್ಟಣದ ಶ್ರಾವಣ ಕಲ್ಯಾಣ ಮಂಟಪದಲ್ಲಿ ಬುದ್ಧ, ಬಸವಣ್ಣ, ಅಂಬೇಡ್ಕರ್ ರವರ ಜನ್ಮದಿನದ ಅಂಗವಾಗಿ ಸಂವಿಧಾನದ ಆಶಯಗಳು ಮತ್ತು ಬಹುತ್ವದ ಭಾರತಕ್ಕಿರುವ ಸವಾಲುಗಳು ಕುರಿತ ಜನ ಜಾಗೃತಿ ಸಮಾವೇಶವನ್ನು ಅವರು ಉದ್ಘಾಟಿಸಿ ಮಾತನಾಡಿದರು.ಬೌದ್ಧ ಧರ್ಮದ ಪರಿಕಲ್ಪನೆಗಳನ್ನು ಸಮಾಜಕ್ಕೆ ತಿಳಿಸುವ ಕೆಲಸವನ್ನು ಯುವಕರು ಮಾಡಬೇಕಾಗಿದೆ. ಬುದ್ಧನ ಪ್ರಜ್ಞಾ, ಕರುಣ, ಮೈತ್ರಿಯನ್ನು ಯುವ ಜನತೆಗೆ ತಿಳಿಸಬೇಕು. ರಾಜಕೀಯ ಸ್ವಾತಂತ್ರ್ಯ ಮಾತ್ರವಲ್ಲದೆ ಪ್ರತಿಯೊಬ್ಬರಿಗೂ ಸಾಮಾಜಿಕ ಸ್ವಾತಂತ್ರ್ಯ ಅಗತ್ಯವಾಗಿದೆ. ನಮಗೆ ಬೇಕಾದ ಶಿಕ್ಷಣ, ಉದ್ಯೋಗ, ಸ್ನೇಹ, ಪ್ರೀತಿಯ ಸ್ವಾತಂತ್ರ್ಯ ಎಲ್ಲರಿಗೂ ಸಮಾನತೆಯ ಸ್ವಾತಂತ್ರ್ಯ ಸಿಗಬೇಕು ಎಂದರು.ಸಮಾನತೆ ಹುಟ್ಟಿದರೆ ಭ್ರಾತೃತ್ವ ಬೆಳೆಯುತ್ತದೆ. 11ನೇ ಶತಮಾನದಲ್ಲಿ ಬಸವಣ್ಣನವರ ಕಾಲಘಟ್ಟದಲ್ಲಿ ಲಿಂಗ ತಾರತಮ್ಯಯನ್ನು ಹೋಗಲಾಡಿಸಿ ಸಮಾನತೆಯ ಸಮಾಜ ನಿರ್ಮಾಣವಾಗಿತ್ತು. ಜಾತ್ಯಾತೀತ ಎನ್ನುವುದು ಎಲ್ಲ ಸಮುದಾಯವನ್ನು ಒಳಗೊಳ್ಳುತ್ತದೆ. ಎಲ್ಲರ ಏಳಿಗೆಗೆ ಸಹಕಾರಿಯಾಗುತ್ತದೆ. ಇದರ ವಿರುದ್ಧ ‌ಆರ್ ಎಸ್‌ಎಸ್‌ಇದೆ ಎಂದು ಅವರು ಹೇಳಿದರು.ಒಂದೇ ಧರ್ಮ ರಾಷ್ಟ್ರ ಧರ್ಮವಾಗುತ್ತದೆ ಎಂದು ಹೇಳುತ್ತಿದ್ದಾರೆ. ಹಿಂದೂ ರಾಷ್ಟ್ರ ಮಾಡುವ ಹುನ್ನಾರ ನಡೆಸಲಾಗುತ್ತಿದೆ. ಧರ್ಮದ ಪ್ರತಿಪಾದನೆಯಲ್ಲಿ ಮೇಲು, ಕೀಳು, ಆಹಾರ ಸೇವನೆಯಲ್ಲೂ ಹಕ್ಕನ್ನು ಕಿತ್ತುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರತವು ಮಾಂಸಾಹಾರಿಗಳ ದೇಶವಾಗಿದೆ. ಸಂವಿಧಾನದ ಆಶಯಗಳನ್ನು ಪಾಲಿಸಬೇಕು. ಭಾರತದಲ್ಲಿ ಏಕ ಭಾಷೆ, ಒಂದೇ ಧರ್ಮವನ್ನು ಏರಲು ಸಾಧ್ಯವಿಲ್ಲ. ಪ್ರತಿ ಗ್ರಾಮಗಳಲ್ಲಿ ಸಂವಿಧಾನದ ಆಶಯಗಳನ್ನು ಗೌರವಿಸಿ ಭಾರತದ ಸಂವಿಧಾನವನ್ನು ಕಾಪಾಡಿಕೊಳ್ಳುವ ಜವಾಬ್ದಾರಿಯನ್ನು ಎಲ್ಲರೂ ತೆಗೆದುಕೊಳ್ಳಬೇಕು ಎಂದರು.ದಸಂಸ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರೆಗೋಡು, ಜಿಲ್ಲಾ ಸಂಚಾಲಕರಾದ ಬೆಟ್ಟಯ್ಯ ಕೋಟೆ, ಆಲಗೂಡು ಶಿವಕುಮಾರ್, ಜಿಲ್ಲಾ ಸಂಘಟನಾ ಸಂಚಾಲಕರಾದ ಶಂಭುಲಿಂಗಸ್ವಾಮಿ, ಹೆಗ್ಗನೂರು ನಿಂಗರಾಜು, ಖಜಾಂಚಿ ಬಿ.ಡಿ ಶಿವಬುದ್ದಿ, ಉಪವಿಭಾಗೀಯ ಸಂಚಾಲಕ ಮಂಜು ಶಂಕರಪುರ, ಸಂಘಟನಾ ಸಂಚಾಲಕ ಕೃಷ್ಣಮೂರ್ತಿ ಬಸವಟ್ಟಿಗೆ, ತಾಲೂಕು ಸಂಚಾಲಕ ಗಟ್ಟವಾಡಿ ಮಹೇಶ್, ತಾಲೂಕು ಸಂಘಟನಾ ಸಂಚಾಲಕರಾದ ಸುರೇಶ್, ನಟರಾಜು, ಗಜೇಂದ್ರ, ಮರಿಸ್ವಾಮಿ, ಹೊಳೆಯಪ್ಪ, ಸಿದ್ದರಾಜು, ಬೆಳಲೆ ಮಹೇಶ್ ಮೊದಲಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ