ಸಾಹಿತ್ಯ ಪರಿಷತ್ತಿಗೆ ಸಾಹಿತಿಗಳೇ ಸೂಕ್ತ ಅಭ್ಯರ್ಥಿಗಳು: ವೀರಭದ್ರಯ್ಯ ಭೂಸನೂರಮಠ

KannadaprabhaNewsNetwork |  
Published : Nov 03, 2026, 02:45 AM IST
ಕೊಪ್ಪಳ ತಾಲೂಕಿನ ಅಗಳಕೇರಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರ ಸಭೆ ನಡೆಯಿತು. | Kannada Prabha

ಸಾರಾಂಶ

ಕೊಪ್ಪಳ ತಾಲೂಕಿನ ಅಗಳಕೇರಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರ ಸಭೆ ನಡೆಯಿತು.

ಕೊಪ್ಪಳ: ಕನ್ನಡಿಗರ ಹೆಮ್ಮೆಯ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ತು ಸಾಹಿತಿಗಳ ವೇದಿಕೆಯಾಗಿದೆ. ಹೀಗಾಗಿ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ಸಾಹಿತಿಗಳೇ ಸೂಕ್ತ ಅಭ್ಯರ್ಥಿಗಳು ಎಂದು ವೀರಭದ್ರಯ್ಯ ಭೂಸನೂರಮಠ ಹೇಳಿದರು.

ತಾಲೂಕಿನ ಅಗಳಕೇರಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಆಯೋಜಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು. ಇತ್ತೀಚಿನ ವರ್ಷಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸಾಹಿತಿಗಳ ಮುಂದಾಳತ್ವದ ಕೊರತೆ ಎದ್ದು ಕಾಣುತ್ತಿತ್ತು. ಇದೀಗ ಮುಂಬರುವ ಚುನಾವಣೆಯಲ್ಲಿ ಸಾಹಿತಿಗಳೇ ಅಭ್ಯರ್ಥಿಗಳಾಗಿರುವುದರಿಂದ ಪರಿಷತ್ತಿಗೆ ಹೊಸ ಕಳೆ ಬಂದಿದೆ. ಬಸವರಾಜ ಬಿನ್ನಾಳ ಅವರು ಅಧ್ಯಕ್ಷ ಸ್ಥಾನಕ್ಕೆ ಸೂಕ್ತ ಅಭ್ಯರ್ಥಿಯಾಗಿದ್ದಾರೆ ಎಂದು ಬೆಂಬಲ ವ್ಯಕ್ತಪಡಿಸಿದರು.

ಅಭ್ಯರ್ಥಿ ಬಸವರಾಜ ಬಿನ್ನಾಳ ಮಾತನಾಡಿ, ಕಳೆದ ಹಲವು ವರ್ಷಗಳಿಂದ ಸಾಹಿತ್ಯ ಪರಿಷತ್ತಿನ ಸಾಮಾನ್ಯ ಸದಸ್ಯನಾಗಿ ಸೇವೆ ಸಲ್ಲಿಸಿದ್ದೇನೆ. ಸಾಹಿತ್ಯ ಪರಿಷತ್ತಿಗೆ ಸಾಹಿತಿಗಳೇ ಅಧ್ಯಕ್ಷರಾಗಬೇಕು ಎಂಬುದು ಬಹುದಿನಗಳ ಬೇಡಿಕೆಯಾಗಿತ್ತು. ಇದೀಗ ಆ ಕೂಗಿಗೆ ನ್ಯಾಯ ಸಿಕ್ಕಂತಾಗಿದೆ ಎಂದರು.

ಊರಿಗೊಂದು ರಂಗಮಂದಿರ, ತಾಲೂಕಿಗೊಂದು ಕನ್ನಡ ಭವನ ಹಾಗೂ ಜಿಲ್ಲೆಯಲ್ಲಿ ಸಾಹಿತ್ಯ ಪರಿಷತ್ತಿನ ಸ್ವಂತ ಕಚೇರಿ ಸ್ಥಾಪಿಸುವುದು ನಮ್ಮ ಉದ್ದೇಶವಾಗಿದೆ. ಸಾಹಿತ್ಯ ಸಮ್ಮೇಳನಗಳಲ್ಲಿ ಯುವಕರಿಗೆ ಆದ್ಯತೆ ನೀಡುವ ಮೂಲಕ ಅವರನ್ನು ಸಾಹಿತ್ಯ ಪರಿಷತ್ತಿನ ವೇದಿಕೆಯ ಮುಂಚೂಣಿಗೆ ತರುವ ಗುರಿ ಹೊಂದಿದ್ದೇನೆ. ಈ ಉದ್ದೇಶಗಳ ಈಡೇರಿಕೆಗೆ ಬಹುಮತದಿಂದ ಆಯ್ಕೆ ಮಾಡಬೇಕು ಎಂದು ಕೋರಿದರು.

ಜಿಲ್ಲಾ ನಾಟಕ ಬರಹಗಾರರ ಹಾಗೂ ಕವಿ ಸಂಘದ ಜಿಲ್ಲಾಧ್ಯಕ್ಷ ಹನುಮಂತಪ್ಪ ಮಾಸ್ತರ್ ಮಾತನಾಡಿದರು.

ಕುಕನೂರು ತಾಲೂಕು ಕಸಾಪ ಗೌರವ ಕಾರ್ಯದರ್ಶಿಗಳಾದ ಬಸವರಾಜ ಮೇಟಿ, ಪೀರಸಾಬ್ ದಫೇದಾರ್, ಆಜೀವ ಸದಸ್ಯರಾದ ಕೊಟ್ರೇಶ ವೀರಾಪುರ, ಶರಣಪ್ಪ ಅನಿಗೊಂದಿ, ಕೆಂಚಪ್ಪ ಹಿಟ್ನಾಳ್, ವಲಿಸಾಬ್ ಪೊಲೀಸ್ ಪಾಟೀಲ್, ಶೇಖರಪ್ಪ ಚಕ್ಕರಸಾಲಿ, ಈಶಪ್ಪ ಬಿಸ್ನಳ್ಳಿ, ಹನುಮಂತಪ್ಪ ಕುಂಬಾರ್, ಟಿ.ಎಚ್. ತಳಕಲ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭುಗಿಲೆದ್ದ ಸರ್ಕಾರ ವರ್ಸಸ್‌ ಕುಮಾರಸ್ವಾಮಿ ಸ್ಟಿಂಗ್‌ ಫೈಟ್‌ - ಈಗ ಎಚ್‌ಡಿಕೆ ಚಾರ್ಜ್‌ಶೀಟ್‌
ಅರಬ್ಬಿ ಸಮುದ್ರದಲ್ಲಿ ಚಂಡಮಾರುತ - ಇನ್ನೂ 3 ದಿನ ರಾಜ್ಯದೆಲ್ಲೆಡೆ ಮಳೆ