ಶ್ರೀ ಭುವನೇಂದ್ರ ಕಾಲೇಜಿನ ಐಕ್ಯೂಎಸಿ (IQAC) ಆಶ್ರಯದಲ್ಲಿ ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ವತಿಯಿಂದ ಪರಿಣಾಮಕಾರಿ ಸಂಶೋಧನಾ ಬರವಣಿಗೆಯ ಕುರಿತು ಕಾರ್ಯಾಗಾರ ಆಯೋಜಿಸಲಾಯಿತು.
ಕಾರ್ಕಳ: ಶ್ರೀ ಭುವನೇಂದ್ರ ಕಾಲೇಜಿನ ಐಕ್ಯೂಎಸಿ (IQAC) ಆಶ್ರಯದಲ್ಲಿ ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ವತಿಯಿಂದ ಪರಿಣಾಮಕಾರಿ ಸಂಶೋಧನಾ ಬರವಣಿಗೆಯ ಕುರಿತು ಕಾರ್ಯಾಗಾರ ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಮಾಹೆ ಮಣಿಪಾಲದ ಸ್ಕೂಲ್ ಆಫ್ ಕಾಮರ್ಸ್ ಅಂಡ್ ಎಕನಾಮಿಕ್ಸ್‌ನ ಸಹಾಯಕ ಪ್ರಾಧ್ಯಾಪಕರೂ ಸಂಶೋಧನಾ ಪ್ರಾಧ್ಯಾಪಕರೂ ಆಗಿರುವ ಡಾ. ಸತೀಶ್ ಕುಮಾರ್ ವಿದ್ಯಾರ್ಥಿಗಳಿಗೆ ಬರವಣಿಗೆಯ ಕೌಶಲ್ಯದ ಕುರಿತು ತರಬೇತಿ ನೀಡಿದರು. ವಿದ್ಯಾರ್ಥಿಗಳು ಯಾವ ಕೆಲಸವನ್ನು ಯಾವಾಗ ಮಾಡಬೇಕು ಎಂಬುದನ್ನು ಸರಿಯಾಗಿ ಅರಿತುಕೊಂಡಿರಬೇಕು. ಕಳೆದು ಹೋದ ಕ್ಷಣಗಳು ಮತ್ತೆ ಮರಳಿ ಬರಲಾರವು. ಆದ್ದರಿಂದ ಆಸಕ್ತಿ ಇರುವಾಗ ಅಸಡ್ಡೆ ತೋರದೆ, ನೆಪಗಳನ್ನು ಹೇಳದೆ ಕೆಲಸವನ್ನು ಮಾಡಬೇಕು. ಬರವಣಿಗೆಯ ಕೌಶಲವನ್ನು ವೃದ್ಧಿಸಿಕೊಂಡರೆ ಅನೇಕ ಸಂಶೋಧನಾ ಪ್ರಬಂಧಗಳನ್ನು ರಚಿಸಲು ಸಾಧ್ಯವಾಗುತ್ತದೆ. ಅವಕಾಶಗಳು ನಾವು ಮಂಡಿಸುವ ವಿಷಯದ ಮೇಲೆ ಅವಲಂಬಿತವಾಗಿರುತ್ತವೆ. ಬರವಣಿಗೆಯ ಕೌಶಲವನ್ನು ಪರಿಪೂರ್ಣವಾಗಿ ಬೆಳೆಸಿಕೊಂಡಾಗ ನಮಗೇ ಗೊತ್ತಿರದ ಅವಕಾಶಗಳು ನಮ್ಮನ್ನು ಹುಡುಕಿಕೊಂಡು ಬರುತ್ತವೆ ಎಂದು ಹೇಳಿದರು.
ವಿದ್ಯಾರ್ಥಿಗಳ ಬರವಣಿಗೆಗೆ ಪೂರಕವಾದ ಮಾಹಿತಿಗಳು ಹಾಗೂ ಸಂಶೋಧನಾ ಪ್ರಬಂಧ ಮಂಡನೆಯ ವಿಧಾನವನ್ನು ಅವರು ಪ್ರಾತ್ಯಕ್ಷಿಕೆಯ ಮೂಲಕ ವಿವರಿಸಿದರು. ಕಾಲೇಜಿನ ಪ್ರಾಚಾರ್ಯ ಡಾ. ಮಂಜುನಾಥ ಎ. ಕೋಟ್ಯಾನ್, ಬಿ.ಬಿ.ಎ. ವಿಭಾಗದ ಮುಖ್ಯಸ್ಥರಾದ ನಂದಕಿಶೋರ್ ಕೆ., ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಮಹೇಶ್ ಶೆಟ್ಟಿ ಉಪಸ್ಥಿತರಿದ್ದರು.
ಬಿ.ಬಿ.ಎ. ವಿಭಾಗದ ವಿದ್ಯಾರ್ಥಿನಿ ಪ್ರೀಮಲ್ ಕಾರ್ಯಕ್ರಮ ನಿರೂಪಿಸಿದರು. ವಾಣಿಜ್ಯ ಸಂಘದ ಸಂಯೋಜಕರಾದ ಪ್ರೊ. ಶಿವಶಂಕರ್ ಸ್ವಾಗತಿಸಿದರು. ಬಿ.ಕಾಂ. ವಿದ್ಯಾರ್ಥಿನಿ ಅಕ್ಷತಾ ಎಲ್. ಕೋಟ್ಯಾನ್ ವಂದಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.