ಕನ್ನಡಪ್ರಭ ವಾರ್ತೆ ಹಾವೇರಿ
ಲಿಖಿತ ಪರೀಕ್ಷೆಯು ಪಾರದರ್ಶಕತೆ, ಗಣಕೀಕೃತ, ಸಂಪೂರ್ಣ ವಸ್ತುನಿಷ್ಠೆ, ಅರ್ಹತೆ ಮತ್ತು ಮೀಸಲಾತಿ ಆಧಾರದ ಮೇಲೆ ನಡೆಯುತ್ತದೆ. ಯಾವುದೇ ಅಭ್ಯರ್ಥಿಗಳು ಇಲಾಖೆಯ ಹೊರಗಾಗಲಿ ಅಥವಾ ಒಳಗಾಗಲಿ ಉದ್ಯೋಗ ಪಡೆಯುವ ಸಲುವಾಗಿ ಯಾವುದೇ ವ್ಯಕ್ತಿಗೆ ಹಣ ನೀಡುವುದು ಅಥವಾ ಯಾವುದೇ ವಿಧವಾದ ಪಾರತೋಷಕ ನೀಡುವುದು ಮಾಡಬಾರದು. ಯಾವುದೇ ವಿಧವಾದ ಹಣ ವಸೂಲಾತಿಗೆ ಯಾರಿಗೂ ಅಧಿಕಾರ ನೀಡಿರುವುದಿಲ್ಲ. ಈ ದಿಶೆಯಲ್ಲಿ ಮಧ್ಯವರ್ತಿಗಳ ಭರವಸೆಗಳಿಗೆ ಮಾರು ಹೋಗಬಾರದೆಂದು ಅಭ್ಯರ್ಥಿಗಳಿಗೆ ತಿಳಿಸಿದ್ದಾರೆ.
ಲಿಖಿತ ಪರೀಕ್ಷೆಯ ಕರೆ ಪತ್ರವನ್ನು ಇಲಾಖೆಯ ವೆಬ್‌ಸೈಟ್ www.recruitment.ksp.gov.in ನಿಂದ ಡೌನ್ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಬೇಕು.ವಸ್ತ್ರ ಸಂಹಿತೆ:
ಮಹಿಳಾ ಮತ್ತು ತೃತೀಯ ಲಿಂಗ ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್‌ಗಳು ಅಥವಾ ಬಟನ್‌ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವುದು ನಿಷೇಧಿಸಲಾಗಿದೆ. ಪೂರ್ಣತೊಳಿನ ಬಟ್ಟೆಗಳು, ಜೀನ್ಸ್ ಪ್ಯಾಂಟ್ ಧರಿಸಬಾರದು. ಬದಲಾಗಿ ಅರ್ಧ ತೋಳಿನ ಬಟ್ಟೆ ಧರಿಸುವಂತೆ ತಿಳಿಸಲಾಗಿದೆ. ಎತ್ತರವಾದ ಹಿಮ್ಮಡಿಯ ಶೂ, ಚಪ್ಪಲಿ ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂ ಅಥವಾ ಚಪ್ಪಲಿ ಧರಿಸುವಂತಿಲ್ಲ. ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿ ಧರಿಸುವುದು ಕಡ್ಡಾಯವಾಗಿದೆ. ಮಹಿಳಾ ಮತ್ತು ತೃತೀಯ ಲಿಂಗದ ಅಭ್ಯರ್ಥಿಗಳು ಯಾವುದೇ ರೀತಿಯ ಲೋಹದ ಆಭರಣ ಧರಿಸುವುದನ್ನು ನಿಷೇಧಿಸಿದೆ. (ಮಂಗಳಸೂತ್ರ ಮತ್ತು ಕಾಲುಂಗರ ಹೊರತುಪಡಿಸಿ).
ಹಾವೇರಿ ನಗರದ ಸಿ.ಬಿ. ಕೊಳ್ಳಿ ಪಾಲಿಟೆಕ್ನಿಕ್ ಕಾಲೇಜ್, ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು, ಗುದ್ಲೆಪ್ಪ ಹಳ್ಳಿಕೇರಿ ಪಿಯು ಕಾಲೇಜ್, ಕೆರಿಮತ್ತಿಹಳ್ಳಿ ವಿಶ್ವವಿದ್ಯಾಲಯ, ಲಯನ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಎಸ್.ಎಂ.ಎಸ್. ಬಾಲಕಿಯರ ಪ್ರೌಢಶಾಲೆ, ಶ್ರೀ ಶಿವಲಿಂಗೇಶ್ವರ ಮಹಿಳಾ ಮಹಾ ವಿದ್ಯಾಲಯ ಹಾಗೂ ಇಜಾರಿಲಕಮಾಪೂರ ಟಿ.ಎಂ.ಎ.ಇ. ಸೊಸೈಟಿ ಬಿಪಿಇಡಿ ಮಹಾವಿದ್ಯಾಲಯದಲ್ಲಿ ಪರೀಕ್ಷೆ ಕೇಂದ್ರ ಸ್ಥಾಪಿಸಲಾಗಿದೆ. ೩೦೬೦ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿಸಿಕೊಂಡಿದ್ದಾರೆ.