ಮಾಗಡಿ: ಚಕ್ರಭಾವಿ ಸೇರಿದಂತೆ ಸುತ್ತಮುತ್ತಲ ಕೆರೆಗಳಿಗೆ 92 ಕೋಟಿ ರೂಪಾಯಿ ವೆಚ್ಚದಲ್ಲಿ 115 ಕಿ.ಮೀ ದೂರದಿಂದ ಕಾವೇರಿ ನೀರನ್ನು ತಂದು ತುಂಬಿಸುವ ವೈ.ಜಿ.ಗುಡ್ಡ ಏತ ನೀರಾವರಿ ಯೋಜನೆಗಳ ಕಾಮಗಾರಿ ಇನ್ನೆರೆಡು ವರ್ಷದೊಲ್ಲಿ ಪೂರ್ಣಗೊಳ್ಳಲಿದೆ ಎಂದು ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಹೇಳಿದರು.
ಪರಿಸರ ಇಲಾಖೆಯ ಒಂದಷ್ಟು ತೊಡಕುಗಳು ಇದ್ದ ಕಾರಣ ಇನ್ನೊಂದೆರಡು ಕಿಲೋಮೀಟರ್ ಕಾಮಗಾರಿ ಬಾಕಿಯಿದೆ. ಮೇ ತಿಂಗಳ ಹೊತ್ತಿಗೆ ಕಾಮಗಾರಿ ಮುಗಿಯಲಿದೆ. ಇನ್ನು ವರ್ಷದ 365 ದಿನವೂ ವೈ.ಜಿ.ಗುಡ್ಡ ಕಾವೇರಿ ನೀರಿನಿಂದ ತುಂಬಿರಲಿದೆ. ಅಂದರೆ ಅಷ್ಟೂ ದಿನವೂ ನಿಮ್ಮ ಕೆರೆಗಳು ತುಂಬಿರುತ್ತವೆ. ಉಪಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಸೂಚನೆ ನೀಡಿ ಇನ್ನೆರಡು ವರ್ಷದೊಳಗೆ ಈ ಯೋಜನೆಯನ್ನು ಸಂಪೂರ್ಣಗೊಳಿಸಬೇಕು. ಕಟ್ಟುನಿಟ್ಟಿನ ಆದೇಶ ನೀಡಬೇಕು ಎಂದು ಮನವಿ ಮಾಡುತ್ತೇನೆ ಎಂದು ಹೇಳಿದರು.
ಕಾವೇರಿ ನದಿ ದೂರವಿದೆ ಅಂದರೆ ಪಶ್ಚಿಮದಿಂದ ಪೂರ್ವಕ್ಕೆ ನೀರನ್ನು ತಂದು ಕೆರೆಗಳನ್ನು ತುಂಬಿಸುವ ಕಾರ್ಯ ಮಾಡಲಾಗುತ್ತಿದೆ. ವೈ.ಜಿ.ಗುಡ್ಡಕ್ಕೆ ಕಾವೇರಿ ನೀರು ಬರುತ್ತಿದೆ ಎಂದು ಯಾರೂ ಊಹಿಸಿರಲಿಲ್ಲ. ನಾನು ಸಂಸದನಾಗಿದ್ದಾಗ ಸ್ಥಳೀಯ ನಾಯಕರಾದ ಚಂದ್ರೇಗೌಡರ ಒಟ್ಟಿಗೆ ಸ್ಥಳಕ್ಕೆ ಭೇಟಿ ಮಾಡಿ ಅದಕ್ಕೆ ಹೇಗೆ ನೀರನ್ನು ತುಂಬಿಸಬಹುದು ಅಧಿಕಾರಿಗಳ ಬಳಿ ಚರ್ಚೆ ನಡೆಸಿದೆ ಎಂದರು.ಹಿಂದಿನ ಸರ್ಕಾರದಲ್ಲಿ ಡಿ.ಕೆ.ಶಿವಕುಮಾರ್ ಅವರು ನೀರಾವರಿ ಸಚಿವರಾಗಿದ್ದಾಗ ಈ ಭಾಗದ ಮುಖ್ಯ ಎಂಜಿನಿಯರ್ ಆಗಿದ್ದ ಮೋಹನ್ ಅವರ ಬಳಿ ನೀರು ಹರಿಸುವ ಕುರಿತು ಚರ್ಚೆ ನಡೆಸಿದೆ. ಕಾವೇರಿ ನೀರನ್ನು ಕಣ್ವ ಜಲಾಶಯಕ್ಕೆ ತಂದು ನಂತರ ಹೇಗೆ ಮಂಚನಬೆಲೆ ವೈ.ಜಿ ಗುಡ್ಡಕ್ಕೆ ತರಬಹುದು ಎಂದು ಯೋಜನೆ ತಯಾರಿಸಲು ಹೇಳಿದೆ. ಆನಂತರ ಇದರ ಸಾಧ್ಯತೆಗಳನ್ನು ಚರ್ಚೆ ನಡೆಸಿ ಸತ್ತೇಗಾಲದಿಂದ ವೈ.ಜಿ.ಗುಡ್ಡಕ್ಕೆ ಕಾವೇರಿ ನೀರು ತರಲಾಗಿದೆ ಎಂದು ಡಿ.ಕೆ.ಸುರೇಶ್ ವಿವರಿಸಿದರು.
ಸುಮಾರು 103 ಕೋಟಿ ವೆಚ್ಚದಲ್ಲಿ ಕೆಂಪೇಗೌಡರ ಕೋಟೆಯನ್ನು 18 ತಿಂಗಳಲ್ಲಿ ಅಭಿವೃದ್ಧಿಗೊಳಿಸುವಂತೆ ಸಂಬಂಧಿಸಿದ ಗುತ್ತಿಗೆದಾರರಿಗೆ ಸೂಚಿಸಲಾಗಿದೆ. ಕುದೂರು ಹೋಬಳಿಯಲ್ಲಿ ಜನಸಂಖ್ಯೆ ಹೆಚ್ಚಾಗಿರುವ ಕಾರಣ ಆ ಭಾಗದ ಜನರ ಅನುಕೂಲಕ್ಕೆ ಹೆಚ್ಚುವರಿ ಬಸ್ಸುಗಳನ್ನು ಹಾಕಲಾಗುವುದು. ಬಿಎಂಟಿಸಿ ಬಸ್‌ಗಳು ಮಾಗಡಿ ತಾಲ್ಲೂಕಿಗೂ ಬರಲಿದೆ. ಸಿಎಸ್‌ಆರ್ ನಿಧಿಯಲ್ಲಿ ಮಾಗಡಿ ತಾಲ್ಲೂಕಿನಲ್ಲಿಯೂ ಸುಸಜ್ಜಿತ 5 ಕೆಪಿಎಸ್ ಶಾಲೆಗಳನ್ನು ಪ್ರಾರಂಭಿಸಲು ಕ್ರಮಕೈಗೊಳ್ಳಲಾಗುವುದು ಎಂದು ರಾಮಲಿಂಗಾರೆಡ್ಡಿ ಹೇಳಿದರು.
ಕೋಟ್ ...ಮಂದೆಯೂ ನಮ್ಮ ಸರ್ಕಾರ ಅಧಿಕಾರದಲ್ಲಿ ಇರುತ್ತದೆ. 18-20 ತಿಂಗಳಲ್ಲಿ ಈ ಯೋಜನೆ ಮಾಡಲು ಸೂಚಿಸಲಾಗಿದೆ. ಈ ಅಧಿಕಾರ ನಂದಲ್ಲ, ನಿಮ್ಮದು. ನೀವೆಲ್ಲರೂ ಡಿ.ಕೆ. ಶಿವಕುಮಾರ್, ಡಿ.ಕೆ. ಸುರೇಶ್ ಹಾಗೂ ಬಾಲಕೃಷ್ಣ. ನಿಮ್ಮ ಹಿಂದೆ ನಾವು, ನಮ್ಮ ಹಿಂದೆ ನೀವು ಇರಬೇಕು. ಮುಂಖ್ಯಮಂತ್ರಿ ವಿಚಾರವಾಗಿ ಈಗ ಮಾತನಾಡುವುದಿಲ್ಲ, ಮಾತನಾಡಿದರೇ, ಅದನ್ನೇ ಬರೆಯುತ್ತಾರೆ. ಅದಕ್ಕೆ ಕಾಲ ಉತ್ತರ ನೀಡುತ್ತದೆ. ಸಧ್ಯದಲ್ಲೇ ಭೇಟಿಯಾಗಿ ನಿಮಗೆ ತಿಳಿಸುತ್ತೇನೆ.
- ಡಿ.ಕೆ.ಶಿವಕುಮಾರ್, ಉಪಮುಖ್ಯಮಂತ್ರಿಗಳು4ಕೆಆರ್ ಎಂಎನ್ 10.ಜೆಪಿಜಿ
ಮಾಗಡಿ ತಾಲೂಕಿನ ಚಕ್ರಭಾವಿಯಲ್ಲಿ ಬುಧವಾರ ವೈ.ಜಿ.ಗುಡ್ಡ ಏತನೀರಾವರಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲು ಆಗಮಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಬೃಹತ್ ಸೇಬಿನ ಹಾರ ಹಾಕಿ ಕಾಂಗ್ರೆಸ್ ಕಾರ್ಯಕರ್ತರು ಸ್ವಾಗತಿಸಿದರು.