ಕನ್ನಡಪ್ರಭ ವಾರ್ತೆ ಶಹಾಪುರ
ಭೀಮರಾಯನ ಗುಡಿಯ ಪದವಿ ಪೂರ್ವ ಕಾಲೇಜಿನಲ್ಲಿ ಶಹಾಪುರ ತಾಲೂಕು 4ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಭೀಮರಾಯನ ಗುಡಿ ಹಾಗೂ ನಾಗನಟಿಗಿ ಕ್ಲಸ್ಟರ್ ವಲಯದ ಅಧಿಕಾರಿಗಳ ಹಾಗೂ ವಿವಿಧ ಶಾಲೆಗಳ ಮುಖ್ಯಗುರುಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಭೀಮರಾಯನಗುಡಿಯಲ್ಲಿ ಫೆ.26ರಂದು ಆಯೋಜಿಸಲು ತೀರ್ಮಾನಿಸಲಾಗಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಭೀಮರಾಯನ ಗುಡಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದು, ಕನ್ನಡ ನಾಡಿನ ಪ್ರಮುಖ ಪ್ರಾತಿನಿಧಿಕ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಯೊಂದು ಚಟುವಟಿಕೆಗಳಿಗೆ ಶಿಕ್ಷಣ ಇಲಾಖೆ ಪ್ರೋತ್ಸಾಹ, ಸಹಕಾರ ಅಗತ್ಯವಿದೆ ಎಂದರು.ಕನ್ನಡ ಸಾಹಿತ್ಯ ಸಮ್ಮೇಳನ ಭೀಮರಾಯನಗುಡಿಯಲ್ಲಿ ಹಮ್ಮಿಕೊಂಡಿರುವುದರಿಂದ ಭೀಮರಾಯನಗುಡಿ ಮತ್ತು ಸಗರ ಕ್ಲಸ್ಟರ್ ವಲಯದ ವ್ಯಾಪ್ತಿಗೆ ಬರುವ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ಮುಖ್ಯ ಗುರುಗಳು, ಪ್ರಾಂಶುಪಾಲರು ಮತ್ತು ಅಧ್ಯಾಪಕರ ಸಮ್ಮೇಳನದ ಪ್ರತಿಯೊಂದು ಕಾರ್ಯಕ್ರಮಗಳಲ್ಲಿ ತಮ್ಮ ವಿದ್ಯಾರ್ಥಿಗಳೊಂದಿಗೆ ಪಾಲ್ಗೊಂಡು ಸಮ್ಮೇಳನದ ಯಶಸ್ವಿಗೆ ಶ್ರಮಿಸುವಂತೆ ತಿಳಿಸಿದರು.
ಭೀಮರಾಯನಗುಡಿಯ ವಲಯ ಕಸಾಪ ಅಧ್ಯಕ್ಷ ಶರಣಬಸವ ಪೊಲೀಸ್ ಬಿರಾದಾರ್ ಮಾತನಾಡಿದರು. ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ದೇವಿಂದ್ರಪ್ಪ ಮಡಿವಾಳಕರ್, ಉಪಪ್ರಾಂಶುಪಾಲ ಮಲ್ಲಿಕಾರ್ಜುನ ಬೇಲೆರಿ, ನಾಗನಟಿಗಿ ಕ್ಲಸ್ಟರ್ ಅಧಿಕಾರಿ ಧರ್ಮರಾಜ, ಮಲ್ಲಾರಡ್ಡಿ ಪಾಟೀಲ್ ಹೋತಪೇಟ್, ಸಾಯಬಣ್ಣ ಪುರ್ಲೆ, ತಿಪ್ಪಣ್ಣ ಕ್ಯಾತನಾಳ, ರಾಘವೇಂದ್ರ ಹಾರಣಗೇರಾ, ಸೋನಾಬಾಯಿ ಇತರರಿದ್ದರು.