ಯಾದಗಿರಿ: ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸಿದ್ಧತೆ

KannadaprabhaNewsNetwork |  
Published : Aug 22, 2025, 01:00 AM IST
ಯಾದಗಿರಿ ಜಿಲ್ಲಾಧಿಕಾರಿ ಹರ್ಷಲ್ ಭೋಯರ್‌ ಅವರು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ನಡೆಸಿದರು. | Kannada Prabha

ಸಾರಾಂಶ

Yadgir: District administration prepares to deal with flood situation

- ಕೃಷ್ಣಾ, ಭೀಮಾ ಪ್ರವಾಹ ಪರಿಸ್ಥಿತಿ ನಿಭಾಯಿಸಲು ಕ್ರಮ ಕೈಗೊಳ್ಳಲು ಡಿಸಿ ಹರ್ಷಲ್‌ ಸೂಚನೆ

----

ಕನ್ನಡಪ್ರಭ ವಾರ್ತೆ ಯಾದಗಿರಿ

ಕೃಷ್ಣಾ ಹಾಗೂ ಭೀಮಾ ನದಿ ತೀರದ ವ್ಯಾಪ್ತಿಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ವಹಿಸಲು ಜಿಲ್ಲಾಡಳಿತ ಸರ್ವ ರೀತಿಯಲ್ಲೂ ಸನ್ನದ್ಧಗೊಂಡಿದೆ ಎಂದು ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ತಿಳಿಸಿದರು.

ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ನಡೆಸಿದ ಅವರು. ಈ ನದಿಗಳ ಪಾತ್ರದ ಜನರಲ್ಲಿ ಪ್ರವಾಹದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಸೂಕ್ತ ಜಾಗೃತಿ ಮೂಡಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಾರ್ಯಾಲಯ ಹಾಗೂ ತಾಲೂಕು ವ್ಯಾಪ್ತಿಯಲ್ಲಿ ಸಹಾಯವಾಣಿ ಸ್ಥಾಪಿಸಲಾಗಿದ್ದು, ನದಿ ಪಾತ್ರದ ಹಾಗೂ ಜಿಲ್ಲೆಯ ನಾಗರಿಕರಿಗೆ ಸಮಸ್ಯೆ ಬಂದಲ್ಲಿ ಸಂಪರ್ಕಿಸುವಂತೆ ಅವರು ಸೂಚಿಸಿದರು. ಜಿಲ್ಲೆಯಲ್ಲಿ ಜಾನುವಾರುಗಳಿಗೆ ತೊಂದರೆಯಾಗದಂತೆ ನಿಗಾ ವಹಿಸಬೇಕು. ಪ್ರವಾಹ ಪರಿಸ್ಥಿತಿ ನಿಭಾಯಿಸಲು ಸಕಲ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿ, ಯಾವುದೇ ಸಂದರ್ಭದಲ್ಲಿ ಅನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡದಿರಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕೃಷ್ಣಾ ಮತ್ತು ಭೀಮಾ ನದಿ ಪಾತ್ರದಲ್ಲಿ ಸೂಕ್ತ ಮುಂಜಾಗೃತಾ ಕ್ರಮ ಕೈಗೊಳ್ಳಲು ನೇಮಕ ಮಾಡಲಾದ ನೋಡಲ್ ಅಧಿಕಾರಿಗಳು ಕಡ್ಡಾಯವಾಗಿ ನಿಮಗೆ ವಹಿಸಲಾದ ಗ್ರಾಮಗಳಿಗೆ ಭೇಟಿ ನೀಡಿ ಸಾರ್ವಜನಿಕರಿಗೆ ಅರಿವು ಮೂಡಿಸಲು ಸೂಚಿಸಿದರು.

ಭಾರಿ ಮಳೆಯಿಂದ ಹಾನಿಯಾದ ಜಮೀನುಗಳಿಗೆ ಭೇಟಿ ನೀಡಿ ಜಂಟಿ ಸಮೀಕ್ಷೆ ವರದಿಯನ್ನು ಸಲ್ಲಿಸಲು ಕೃಷಿ, ತೋಟಗಾರಿಕೆ, ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯಲ್ಲಿ ಸುರಿದ ಮಳೆಯಿಂದ ಹಾನಿಯಾಗಿರುವ ಮನೆಗಳ ಜಂಟಿ ಸಮೀಕ್ಷೆ ಕೈಗೊಂಡು ವರದಿ ಸಲ್ಲಿಸುವಂತೆ, ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

====ಬಾಕ್ಸ್‌=====

ಪ್ರವಾಹ ಪರಿಸ್ಥಿತಿಯಲ್ಲಿ ಮುಂಜಾಗ್ರತೆ ಅಗತ್ಯ

ಅಗ್ನಿಶಾಮಕ ಇಲಾಖೆ ಅಧಿಕಾರಿ/ಸಿಬ್ಬಂದಿ ಸನ್ನದ್ಧರಿದ್ದು, ಅವಶ್ಯವಿದ್ದಲ್ಲಿ ಅವರ ಸಹಾಯ ಪಡೆಯಲು ಸೂಚಿಸಿದರು. ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಡಳಿತ ಸಂಪೂರ್ಣ ಸನ್ನದ್ಧವಾಗಿದ್ದು, ಜನ ಜಾನುವಾರುಗಳಿಗೆ ಯಾವುದೇ ರೀತಿ ತೊಂದರೆಯಾಗದಂತೆ ಸೂಕ್ತ ರಕ್ಷಣೆ ನೀಡಲಾಗುವುದು ಎಂದು ತಿಳಿಸಿದರು.

ಎಲ್ಲ ಜಿಲ್ಲಾಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ರಜೆ ಮೇಲೆ ತೆರಳದಂತೆ ಹಾಗೂ ಕೇಂದ್ರಸ್ಥಾನ ಬಿಟ್ಟು ಹೋಗದಂತೆ ಸೂಚಿಸಿದರು. ಮಳೆಯಿಂದ ಶಾಲಾ, ಕಾಲೇಜು, ಅಂಗನವಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರ, ವಿದ್ಯುತ್ ಸರಬರಾಜು ಕಡಿತ ಈ ಎಲ್ಲಾ ಅಂಶಗಳ ಕುರಿತು ಪರಿಶೀಲಿಸಿ ವರದಿ ಸಲ್ಲಿಸಲು ಸೂಚಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ, ಅಪರ ಜಿಲ್ಲಾಧಿಕಾರಿ ರಮೇಶ ಕೋಲಾರ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

-

ಕೋಟ್‌-1ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಡಳಿತ ಸಂಪೂರ್ಣ ಸನ್ನದ್ಧವಾಗಿದ್ದು, ಜನ ಜಾನುವಾರುಗಳಿಗೆ ಯಾವುದೇ ರೀತಿ ತೊಂದರೆಯಾಗದಂತೆ ಸೂಕ್ತ ರಕ್ಷಣೆ ನೀಡಲಾಗುವುದು. ಎಲ್ಲ ಜಿಲ್ಲಾಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ರಜೆ ಮೇಲೆ ತೆರಳದಂತೆ ಹಾಗೂ ಕೇಂದ್ರಸ್ಥಾನ ಬಿಟ್ಟು ಹೋಗಬಾರದು. : ಹರ್ಷಲ್‌ ಭೋಯರ್‌, ಜಿಲ್ಲಾಧಿಕಾರಿಗಳು, ಯಾದಗಿರಿ. (21ವೈಡಿಆರ್4)

-

21ವೈಡಿಆರ್‌3 : ಯಾದಗಿರಿ ಜಿಲ್ಲಾಧಿಕಾರಿ ಹರ್ಷಲ್ ಭೋಯರ್‌ ಅವರು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ ನಡೆಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೇಂದ್ರದಿಂದ ಯಲ್ಲಮ್ಮನಗುಡ್ಡಕ್ಕೆ ₹118 ಅನುದಾನ
ಮಡಿಕೇರಿಯ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ಸಹಪಠ್ಯ ಸ್ಪರ್ಧಾ ಕಾರ್ಯಕ್ರಮ