ಉತ್ತರ ಕರ್ನಾಟಕ ಅಭಿವೃದ್ಧಿಗೆ ಯಡಿಯೂರಪ್ಪ ಕೊಡುಗೆ ಅಪಾರ

KannadaprabhaNewsNetwork |  
Published : Jan 01, 2024, 01:15 AM IST
31ಫೋಟೋ 1: ಆಲಮಟ್ಟಿಯಲ್ಲಿ ಭಾನುವಾರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸುದ್ದಿಗೋಷ್ಟಿಯಲ್ಲಿ ಮಾತನಾಡುತ್ತಿರುವುದು. | Kannada Prabha

ಸಾರಾಂಶ

ಉತ್ತರ ಕರ್ನಾಟಕ ಅಭಿವೃದ್ಧಿಗೆ ನಮ್ಮ ತಂದೆ ಯಡಿಯೂರಪ್ಪ ಹಾಗೂ ಬಿಜೆಪಿಯ ಕೊಡುಗೆ ಅಪಾರ ಎಂದರು ಕಾಂಗ್ರೆಸ್ ಸರ್ಕಾರ ಕೇವಲ ಶಂಕುಸ್ಥಾಪನೆ ಮಾಡುತ್ತದೆ ಆದರೆ ಆ ಕೆಲಸ ಪೂರ್ಣಗೊಳಿಸುವುದಿಲ್ಲ.

ಕನ್ನಡಪ್ರಭ ವಾರ್ತೆ ಆಲಮಟ್ಟಿ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಭರ್ಜರಿ ಗೆಲುವು ಸಾಧಿಸಲಿದೆ. ಎಲ್ಲ 28 ಕ್ಷೇತ್ರದಲ್ಲೂ ಗೆಲುವಿನ ಯಶಸ್ವಿಗಾಗಿ ಈಗಿನಿಂದಲೇ ತಮ್ಮ ಬಿಜೆಪಿ ಪಕ್ಷ ಅಗತ್ಯ ಕಾರ್ಯತಂತ್ರ ರೂಪಿಸುತ್ತಿದ್ದು, ಆ ಗುರಿ ತಲುಪುವ ಆಚಲ ವಿಶ್ವಾಸ ಇದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನುಡಿದರು.

ಭಾನುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಅಭಿವೃದ್ಧಿಗೆ ನಮ್ಮ ತಂದೆ ಯಡಿಯೂರಪ್ಪ ಹಾಗೂ ಬಿಜೆಪಿಯ ಕೊಡುಗೆ ಅಪಾರ ಎಂದರು ಕಾಂಗ್ರೆಸ್ ಸರ್ಕಾರ ಕೇವಲ ಶಂಕುಸ್ಥಾಪನೆ ಮಾಡುತ್ತದೆ ಆದರೆ ಆ ಕೆಲಸ ಪೂರ್ಣಗೊಳಿಸುವುದಿಲ್ಲ. ಬಿಜೆಪಿಯವರು ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಜತೆಗೆ ಅದನ್ನು ಪೂರ್ಣಗೊಳಿಸಿ ಉದ್ಘಾಟನೆಯನ್ನು ಮಾಡುತ್ತದೆ, ಉತ್ತರ ಕರ್ನಾಟಕದ ಕೃಷ್ಣಾ ಮೇಲ್ದಂಡೆ ಯೋಜನೆ, ಬಸವಕಲ್ಯಾಣ ಅಭಿವೃದ್ಧಿ, ಬೆಳಗಾವಿಯಲ್ಲಿ ಸುವರ್ಣ ಸೌಧ ನಿರ್ಮಾಣ ಸೇರಿದಂತೆ ಪ್ರತಿಯೊಂದಕ್ಕೂ ಯಡಿಯೂರಪ್ಪನವರು ವಿಶೇಷ ಕಾಳಜಿ ವಹಿಸಿ ಅಭಿವೃದ್ಧಿ ಮಾಡಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಎ.ಎಸ್. ಪಾಟೀಲ (ನಡಹಳ್ಳಿ), ಮುರಗೇಶ ನಿರಾಣಿ, ಮುಖಂಡ ಶಿವಾನಂದ ಅವಟಿ, ಚಂದ್ರಶೇಖರ ಬೆಳ್ಳುಬ್ಬಿ, ಡಾ ಸಂಗಮೇಶ ಗೂಗಿಹಾಳ, ಡಾ ಸಂತೋಷ ಬಸರಕೋಡ, ಚಂದ್ರಸೇನ ದೇಸಾಯಿ, ಬಸವರಾಜ ದಂಡೀನ ಮತ್ತೀತರರು ಇದ್ದರು.ದಿನಗೂಲಿಗಳ ಕಾಯಂಗೆ ಮನವಿ: ಕಳೆದ 23 ವರ್ಷಗಳಿಂದ ಆಲಮಟ್ಟಿಯ ವಿವಿಧ ಉದ್ಯಾನಗಳಲ್ಲಿ ದಿನಗೂಲಿಗಳಾಗಿ ಕಡಿಮೆ ವೇತನದಲ್ಲಿ ದುಡಿಯುವ ಕಾರ್ಮಿಕರನ್ನು ಕಾಯಂ ಮಾಡಿಕೊಳ್ಳಲು ತಾವು ಪ್ರಯತ್ನಿಸಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಅರಣ್ಯ ದಿನಗೂಲಿಗಳು ಭಾನುವಾರ ಮನವಿ ಸಲ್ಲಿಸಿದರು. ವರ್ಷಕ್ಕೆ 10 ಲಕ್ಷ ಪ್ರವಾಸಿಗರು ಆಲಮಟ್ಟಿಗೆ ಭೇಟಿ ನೀಡುತ್ತಿದ್ದು, ಉದ್ಯಾನ ನಿರ್ವಹಣೆಗೆ ಕಾರ್ಮಿಕರ ಅಗತ್ಯವಿದೆ. ಹೀಗಾಗಿ ಈಗಾಗಲೇ ದುಡಿಯುತ್ತಿರುವ ಕಾರ್ಮಿಕರನ್ನು ಕಾಯಂಗೊಳಿಸಬೇಕು ಎಂದು ಮನವಿ ಮಾಡಿದರು. ಸೇವಾ ಭದ್ರತೆ ಹಾಗೂ ಸರ್ಕಾರಿ ಸೌಲಭ್ಯ ಒದಗಿಸಲು ಮನವಿ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿ ರಾಂ ಜಿ ವಿರೋಧಕ್ಕೆ ರೈತರಿಗೆ ಸಿಎಂ ಕರೆ
ನೀವೂ ಸಿಎಂ ಆಗಬೇಕು : ಡಿಕೆಗೆ ಪೂಜಾರಿ ಹಾರೈಕೆ