ಜಗದ್ಗುರು ಶ್ರೀ ಭಾರತೀ ತೀರ್ಥ, ಶ್ರೀ ವಿಧುಶೇಖರ ಭಾರತೀ ಸ್ವಾಮಿ ಭೇಟಿ
ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠಕ್ಕೆ ಮೈಸೂರು ಮಹಾರಾಜ ಹಾಗೂ ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ಶ್ರೀ ಶಾರದಾಂಬೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ಗುರುವಾರ ಶ್ರೀ ಮಠಕ್ಕೆ ಆಗಮಿಸಿ ಶ್ರೀ ಶಾರದಾದೇವಿ ದೇವಾಲಯಕ್ಕೆ ತೆರಳಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ನಂತರ ಶ್ರೀ ಶಂಕರಾಚಾರ್ಯ ದೇವಾಲಯ, ಶ್ರೀ ತೋರಣಗಣಪತಿ,ಶ್ರೀ ವಿದ್ಯಾಶಂಕರ ದೇವಾಲಯ,ಶ್ರೀ ಸುಬ್ರಮಣ್ಯ,ಶ್ರೀ ಜನಾರ್ದನ ಸ್ವಾಮಿ ದೇವಾಲಯಗಳಿಗೆ ಭೇಟಿ ನೀಡಿ ದರ್ಶನ ಪಡೆದರು.ಶ್ರೀ ಮಠದದಲ್ಲಿನ ಶ್ರೀ ಗುರುಭವನಕ್ಕೆ ತೆರಳಿ ಜಗದ್ಗುರು ಶ್ರೀ ಭಾರತೀ ತೀರ್ಥ ಮಹಾಸ್ವಾಮಿ ಹಾಗೂ ಶ್ರೀ ವಿಧುಶೇಖರ ಭಾರತೀ ಸ್ವಾಮಿ ಭೇಟಿ ಮಾಡಿ ಆಶೀರ್ವಾದ ಪಡೆದರು. ಶುಕ್ರವಾರವೂ ಶೃಂಗೇರಿಯಲ್ಲಿಯೇ ವಾಸ್ತವ್ಯ ಹೂಡಿ ಶ್ರೀ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿ ನಂತರ ತೆರಳಿದರು. ಮೈಸೂರು ಸಂಸ್ಥಾನ ಹಿಂದಿನಿಂದಲೂ ಶೃಂಗೇರಿ ಪೀಠದೊಂದಿಗೆ ಅವಿನಾಭಾವ ಸಂಬಂಧಹೊಂದಿದೆ.
20 ಶ್ರೀ ಚಿತ್ರ 2-