ಕನ್ನಡಪ್ರಭ ವಾರ್ತೆ ಮಂಗಳೂರು
ಅಡ್ಯಾರ್ ಗಾರ್ಡನ್‌ನಲ್ಲಿ ಭಾನುವಾರ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ‘ದಶಮ ಸಂಭ್ರಮ’ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.
ಯಕ್ಷಧ್ರುವ ಪಟ್ಲ ಫೌಂಡೇಶನ್ ಗೌರವಾಧ್ಯಕ್ಷ, ಹೇರಂಭ ಇಂಡಸ್ಟ್ರಿಸ್ ಸಿಎಂಡಿ ಡಾ. ಕನ್ಯಾನ ಸದಾಶಿವ ಶೆಟ್ಟಿ ಮಾತನಾಡಿ, ಯಕ್ಷಗಾನ ನಮ್ಮ ತುಳುನಾಡಿನ ಶ್ರೇಷ್ಠ ಕಲೆ. ಇಲ್ಲಿ ಹುಟ್ಟಿರುವುದೇ ನಮ್ಮ ಭಾಗ್ಯ. ಪರಿಪೂರ್ಣವಾದ ಕಲೆಯನ್ನು ಬೇರೆ ಯಾವ ಪ್ರದೇಶದಲ್ಲೂ ನಾನು ನೋಡಿಲ್ಲ ಎಂದರು.15 ಕೋಟಿ ರು.ಗೂ ಅಧಿಕ ಸಂಗ್ರಹ: ದಶಮಾನೋತ್ಸವ ಸಂಭ್ರಮದ ಅಧ್ಯಕ್ಷ ಬರೋಡಾ ಶಶಿಧರ್ ಶೆಟ್ಟಿ ಮಾತನಾಡಿ, ನಾವು ದಶಮಾನೋತ್ಸವ ಸಂಭ್ರಮಕ್ಕೆ 10 ಕೋಟಿ ರು. ಒಟ್ಟುಗೂಡಿಸುವ ಉದ್ದೇಶ ಹೊಂದಿದ್ದೆವು, ಆದರೆ ನಿರೀಕ್ಷೆಗೂ ಮೀರಿ 15 ಕೋಟಿ ರು.ಗೂ ಹೆಚ್ಚು ಸಂಗ್ರಹವಾಗಿದೆ. ನಮ್ಮದು ಸಾವಿರದ ಕನಸು, ಪಟ್ಲ ಫೌಂಡೇಶನ್ ನ ಮುಂದಿನ ಎಲ್ಲ ಕಾರ್ಯಕ್ರಮಗಳು ನಿರ್ವಿಘ್ನವಾಗಿ ನೆರವೇರಲಿ ಎಂದರು.ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ್ ಆಳ್ವ, ಉದಯ ಕುಮಾರ್ ಶೆಟ್ಟಿ ಮುನಿಯಾಲ್, ಉದ್ಯಮಿ ಕಟೀಲು ದಿವಾಕರ್ ರಾವ್, ಸಂಜೀವಿನಿ ಆಸ್ಪತ್ರೆ ಮುಖ್ಯಸ್ಥ ಡಾ.ಸುರೇಶ್ ರಾವ್ ಕಟೀಲು, ಫೌಂಡೇಶನ್ ಮಹಾದಾನಿ ಎಂ.ಎಲ್. ಸಾಮಗ ಉಡುಪಿ, ನಿಟ್ಟೆ ಯುನಿವರ್ಸಿಟಿಯ ಸತೀಶ್ ಭಂಡಾರಿ, ಕನ್ಯಾನ ರಘುರಾಮ ಶೆಟ್ಟಿ, ಸಿಎ ಸುಭಾಶ್ಚಂದ್ರ ಬೆಹರಿನ್, ಶ್ಯಾಮ್ ಪ್ರಸಾದ್, ಪಳ್ಳಿ ಕಿಶನ್ ಹೆಗ್ಡೆ, ಸಿಎ ಸುರೇಂದ್ರ ಶೆಟ್ಟಿ, ಪೆರ್ಮುದೆ ಅಶೋಕ್ ಶೆಟ್ಟಿ, ಪ್ರೊಫೆಸರ್ ಡಾ.ಮನು ರಾವ್, ಕೆರೆಕಟ್ಟೆ ಉದಯ ಶೆಟ್ಟಿ, ಪ್ರೀತಮ್ ಶೆಟ್ಟಿ, ಕೇಂದ್ರೀಯ ಸಮಿತಿ ಸಂಘಟನಾ ಕಾರ್ಯದರ್ಶಿ ಬಾಳ ಜಗನ್ನಾಥ ಶೆಟ್ಟಿ, ಪ್ರದೀಪ್ ಆಳ್ವ, ಕದ್ರಿ, ಕರುಣಾಕರ ರೈ ದೇರ್ಲ, ಚೆಲ್ಲಡ್ಕ ರಾಧಾಕೃಷ್ಣ ಶೆಟ್ಟಿ, ಸರಪಾಡಿ ಅಶೋಕ್ ಶೆಟ್ಟಿ, ದುರ್ಗಾಪ್ರಸಾದ್, ನಾಗಭೂಷಣ್, ಸವಣೂರು ಸೀತಾರಾಮ್ ರೈ, ಲಯನ್ ತಾರಾನಾಥ್ ಶೆಟ್ಟಿ ಬೋಳಾರ್, ಮಹಿಳಾ ಘಟಕದ ಅಧ್ಯಕ್ಷೆ ಪೂರ್ಣಿಮಾ ಯತೀಶ್ ರೈ ಮತ್ತಿತರರು ಇದ್ದರು. ಕುಣಿತ ಭಜನಾ ಸ್ಪರ್ಧೆಯನ್ನು ಒಡಿಯೂರು ಕ್ಷೇತ್ರದ ಮಾತಾನಂದಮಯಿ ಉದ್ಘಾಟಿಸಿದರು. ಯಕ್ಷಗಾನ ಕ್ಷೇತ್ರದ ಸಾಧಕಿ ಆರ್ಷಿಯ ತನು ವಿಟ್ಲರನ್ನು ಅತಿಥಿಗಳು ಸನ್ಮಾನಿಸಿದರು. ಕದ್ರಿ ನವನೀತ್ ಶೆಟ್ಟಿ, ಪೃಥ್ವಿ ಕಾರಿಂಜ ನಿರೂಪಿಸಿದರು. ರವಿಚಂದ್ರ ಶೆಟ್ಟಿ ವಂದಿಸಿದರು. ದಶಮ ಸಂಭ್ರಮ ಅಂಗವಾಗಿ ಎಂಟು ತಂಡಗಳಿಂದ ತೆಂಕು ಮತ್ತು ಬಡಗು ತಿಟ್ಟಿನ ಯುವ ಕಲಾವಿದರಿಂದ ಯಕ್ಷಗಾನ ಸ್ಪರ್ಧೆ ನಡೆಯಿತು. ವೈದ್ಯಕೀಯ, ಆರ್ಥಿಕ ನೆರವು, ಉಚಿತ ವೈದ್ಯಕೀಯ ತಪಾಸಣೆ, ಕಣ್ಣಿನ ತಪಾಸಣೆ, ಕನ್ನಡಕ ಹಾಗೂ ಔಷಧ ವಿತರಣೆ ನೆರವೇರಿತು. ಯಕ್ಷಗಾನ, ನಾಟಕ ರಂಗಭೂಮಿ, ಕಂಬಳ ಮತ್ತು ದೈವಾರಾಧನೆ ಕ್ಷೇತ್ರದ ಕಲಾವಿದರಿಗೆ ಅಪಘಾತ ವಿಮಾ ಯೋಜನೆ ನೋಂದಣಿ ಮಾಡಲಾಯಿತು.
ಇನ್ನಷ್ಟು ಸಮಾಜಮುಖಿ ಸೇವೆ: ಪಟ್ಲ ಸತೀಶ್ ಶೆಟ್ಟಿ
---------------ಐಕಳ ಹರೀಶ್ ಶೆಟ್ಟಿ ದಂಪತಿಗೆ ಮಹಾಪೋಷಕ ಪ್ರಶಸ್ತಿ ಪ್ರದಾನ
2025ನೇ ಸಾಲಿನ ಯಕ್ಷಧ್ರುವ ಮಹಾಪೋಷಕ ಪ್ರಶಸ್ತಿಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ-ಚಂದ್ರಿಕಾ ಹರೀಶ್ ಶೆಟ್ಟಿ ದಂಪತಿಗಳಿಗೆ ಪ್ರದಾನ ಮಾಡಲಾಯಿತು.
ಕಲಾ ಗೌರವ ಪ್ರಶಸ್ತಿ ಪ್ರದಾನ: ಯಕ್ಷಧ್ರುವ ಪಟ್ಲ ಫೌಂಡೇಶನ್ ಕಲಾ ಗೌರವ-2025 ಅನ್ನು ಅಲಂಗಾರು ದೇವಸ್ಥಾನದ ಪ್ರಧಾನ ಅರ್ಚಕ ವೇದಮೂರ್ತಿ ಈಶ್ವರ ಭಟ್, ಮಂಗಳೂರು ವಿವಿ ಮಾಜಿ ಕುಲಪತಿ ಪ್ರೊ. ಬಿ.ಎ. ವಿವೇಕ್ ರೈ, ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್, ನಿವೃತ್ತ ಯೋಧ ಕರ್ನಲ್ ನಿಟ್ಟೆಗುತ್ತು ಶರತ್ ಭಂಡಾರಿ, ರಂಗಮನೆ ಸಾಂಸ್ಕೃತಿಕ ಕಲಾಕೇಂದ್ರ ಸುಳ್ಯ ಇದರ ಜೀವನ್ ರಾಮ್ ಸುಳ್ಯ ಅವರಿಗೆ ಪ್ರದಾನ ಮಾಡಲಾಯಿತು.