ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಶ್ರೀಚಾಮರಾಜೇಶ್ವರಸ್ವಾಮಿ ರಥೋತ್ಸವದ ಅಂಗವಾಗಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು, ರಂಗವಾಹಿಸಿ ಸಂಸ್ಥೆ ಸಹಯೋಗದಲ್ಲಿ ನಡೆದ ಮೋಹಿನಿ ಭಸ್ಮಾಸುರ ಯಕ್ಷಗಾನ ಪ್ರದರ್ಶನ ಸಾಕಷ್ಟು ಸಂಖ್ಯೆಯಲ್ಲಿ ಸೇರಿದ್ದ ಪೇಕ್ಷಕರ ಮನ ಸೆಳೆಯುವಲ್ಲಿ ಯಶಸ್ವಿಯಾಯಿತು.
ಕನ್ನಡಪ್ರಭವಾರ್ತೆ, ಚಾಮರಾಜನಗರ
ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಶ್ರೀಚಾಮರಾಜೇಶ್ವರಸ್ವಾಮಿ ರಥೋತ್ಸವದ ಅಂಗವಾಗಿ ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು, ರಂಗವಾಹಿಸಿ ಸಂಸ್ಥೆ ಸಹಯೋಗದಲ್ಲಿ ನಡೆದ ಮೋಹಿನಿ ಭಸ್ಮಾಸುರ ಯಕ್ಷಗಾನ ಪ್ರದರ್ಶನ ಸಾಕಷ್ಟು ಸಂಖ್ಯೆಯಲ್ಲಿ ಸೇರಿದ್ದ ಪೇಕ್ಷಕರ ಮನ ಸೆಳೆಯುವಲ್ಲಿ ಯಶಸ್ವಿಯಾಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಿಎಸ್‌ವಿ ಪ್ರತಿಷ್ಠಾನದ ವೆಂಕಟನಾಗಪ್ಪ ಶೆಟ್ಟಿ ಮಾತನಾಡಿ, ಯಕ್ಷಗಾನ ಕಲೆಯು ರಾಜ್ಯದ ಜನಪ್ರಿಯ ಜಾನಪದ ಕಲಾ ಪ್ರಕಾರವಾಗಿದ್ದು , ಕರಾವಳಿ ಪ್ರದೇಶಗಳಲ್ಲಿ ಬಹಳ ಪ್ರಸಿದ್ಧಿ ಹೊಂದಿದೆ. ಇದು ಪುರಾಣ ಮತ್ತು ಇತಿಹಾಸಗಳನ್ನು ಆಧರಿಸಿದ ಕಥೆಗಳನ್ನು ಪ್ರದರ್ಶಿಸುತ್ತದೆ. ಇದು ಕರ್ನಾಟಕದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾಗಿದೆ. ಶತ ಶತಮಾನಗಳಿಂದಲೂ ಕರಾವಳಿ ಜನರ ಜೀವನದಲ್ಲಿ ಹಾಸು ಹೊಕ್ಕಾಗಿದೆ ಎಂದರು.ಕರ್ನಾಟಕ ಯಕ್ಷಗಾನ ಅಕಾಡಮಿ ಮಾಜಿ ಸದಸ್ಯ ಶ್ರೀನಿವಾಸ ಸಾಸ್ತಾನ್ ಮಾತನಾಡಿ, ಕರ್ನಾಟಕವು ಜಾನಪದ ಕಲೆಗಳ ಕಣಜವಾಗಿದ್ದು, ನಮ್ಮ ಯಕ್ಷಗಾನ ಪ್ರದರ್ಶನ ಸನಾತನ ಕಲೆಯಾಗಿದೆ. ನಮ್ಮ ರಾಜ್ಯದ ಜಾನಪದ ಕಲೆಗಳನ್ನು ಪ್ರದರ್ಶನ ಮಾಡುವುದರ ಮೂಲಕ ಮುಂದುವರಿಸಿಕೊಂಡು ಹೋಗಬೇಕು. ಆಗ ಮಾತ್ರ ಜಾನಪದ ಕಲೆಗಳು ಉಳಿಯುತ್ತವೆ. ಚಾಮರಾಜನಗರ ಗಡಿ ಜಿಲ್ಲೆಯಲ್ಲಿ ಯಕ್ಷಗಾನ ಪ್ರದರ್ಶನ ನಡೆಯಲು ಅವಕಾಶ ಮಾಡಿಕೊಟ್ಟಿರುವುದು ನಿಜಕ್ಕೂ ಅಭಿನಂದನೀಯ ಎಂದರು.ರಂಗವಾಹಿನಿ ಸಂಸ್ಥೆ ಅಧ್ಯಕ್ಷ ಸಿ.ಎಂ.ನರಸಿಂಹಮೂರ್ತಿ ಮಾತನಾಡಿ, ಕಲಾವಿದರಿಗೆ ಕೇವಲ ಬೆನ್ನು ತಟ್ಟಿದರೆ ಹೊಟ್ಟೆ ತುಂಬುವುದಿಲ್ಲ. ಆ ಕಲಾವಿದರಿಗೆ ವೇದಿಕೆಗಳನ್ನು ನಿರ್ಮಿಸಿ ಪ್ರೋತ್ಸಾಹ ಮಾಡಿದರೆ ಮಾತ್ರ ಕಲೆ ಮತ್ತು ಕಲಾವಿದ ಉಳಿಯುತ್ತಾನೆ ಎಂದರು. ಅಶ್ವಿನಿ ಡಯಾಗ್ನೋಸ್ಟಿಕ್ ನ ವೈದ್ಯ ದಂಪತಿಗಳಾದ ಡಾ.ರಮೇಶ್ಉಡುಪ ಮತ್ತು ಡಾ.ಶಶಿಕಲಾ ಚಂಡೆ ಬಾರಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಆರ್.ನಂಜುಂಡಯ್ಯ, ಕರ್ನಾಟಕ ಸೇನಾ ಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ, ಚಾಮರಾಜೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ರಾಮಕೃಷ್ಣ ಭಾರಧ್ವಜ, ಜಿಲ್ಲಾ ಹೋಟೆಲ್ ಮಾಲೀಕರ ಸಂಘದ ಖಜಾಂಚಿ ವಿಜಯಕುಲಾಲ್, ಕಲೆ ನಟರಾಜು ಇತರರು ಹಾಜರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.