ಯಕ್ಷಗಾನ, ಶಿಕ್ಷಣಕ್ಕೆ ಕಟೀಲು ದೇವಳ ಕೊಡುಗೆ ಅನನ್ಯ: ಅಬ್ದುಲ್ ನಜೀರ್

KannadaprabhaNewsNetwork |  
Published : Nov 09, 2025, 03:30 AM IST
ಕಟೀಲು  ವಿದ್ಯಾಸಂಸ್ಥೆಗಳಸಂಯೋಜನೆಯಲ್ಲಿ ನಡೆದ ನುಡಿಹಬ್ಬದಲ್ಲಿ  ಎಸ್. ಅಬ್ದುಲ್ ನಜೀರ್ ಭಾಗವಹಿಸಿ ಮಾತನಾಡಿದರು. | Kannada Prabha

ಸಾರಾಂಶ

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಮೂಹ ವಿದ್ಯಾಸಂಸ್ಥೆಗಳ ಸಂಯೋಜನೆಯಲ್ಲಿ ನಡೆದ ನುಡಿಹಬ್ಬದಲ್ಲಿ ಸುಪ್ರಿಂಕೋರ್ಟ್‌ ನಿವೃತ್ತ ನ್ಯಾಯಾಧೀಶ, ಆಂಧ್ರಪ್ರದೇಶದ ರಾಜ್ಯಪಾಲ ಎಸ್. ಅಬ್ದುಲ್ ನಜೀರ್ ಭಾಗವಹಿಸಿದ್ದರು.

ಕನ್ನಡಪ್ರಭ ವಾರ್ತೆ ಮೂಲ್ಕಿಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನವು ಯಕ್ಷಗಾನ ಮತ್ತು ಶಿಕ್ಷಣ ಕ್ಷೇತ್ರಕ್ಕೆ ನೀಡುತ್ತಿರುವ ಕೊಡುಗೆ ಅನುಪಮವಾದುದು. ಹತ್ತು ವರುಷಗಳ ವರೆಗೆ ಯಕ್ಷಗಾನ ಸೇವೆ ನೋಂದಣಿ ಆಗಿರುವುದು, ವಾರ್ಷಿಕ ಹತ್ತು ಕೋಟಿ ರುಪಾಯಿಗಳನ್ನು ಖರ್ಚು ಮಾಡುತ್ತಿರುವುದು ಅಭಿನಂದನೀಯ ಎಂದು ಸುಪ್ರಿಂಕೋರ್ಟ್‌ ನಿವೃತ್ತ ನ್ಯಾಯಾಧೀಶ, ಆಂಧ್ರಪ್ರದೇಶದ ರಾಜ್ಯಪಾಲ ಎಸ್. ಅಬ್ದುಲ್ ನಜೀರ್ ಹೇಳಿದರು.ಅವರು ಶನಿವಾರ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಮೂಹ ವಿದ್ಯಾಸಂಸ್ಥೆಗಳ ಸಂಯೋಜನೆಯಲ್ಲಿ ನಡೆದ ನುಡಿಹಬ್ಬದಲ್ಲಿ ಮಾತನಾಡಿದರು.ಕಟೀಲು ದೇವಸ್ಥಾನಕ್ಕೆ ಬಂದರೆ ನಮ್ಮ ಮನೆಗೆ ಬಂದ ಅನುಭವವಾಗುತ್ತದೆ. ಬಾಲ್ಯದಲ್ಲಿ ಕಟೀಲಿಗೆ ಸಾಕಷ್ಟು ಬಾರಿ ಭೇಟಿ ನೀಡಿದ್ದೇನೆ. ಇಲ್ಲಿನ ಯಕ್ಷಗಾನ ಮೇಳಗಳ ಆಟ ನೋಡಿದ್ದೇನೆ. ದೇವಿ ಮಹಾತ್ಮೆ ಪ್ರಸಂಗ ಪ್ರಸಿದ್ಧವಾದುದು. ಇದನ್ನೂ ನೋಡಿದ್ದೇನೆ ಎಂದರು.

ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡುತ್ತಿರುವ ಕಟೀಲಿನ ಪ್ರಕೃತಿ ಹರಿಯುವ ನಂದಿನಿಯಂತೆ ಪರಿಶುದ್ಧವಾಗಿದೆ. ವಿವಿಧ ಕಲಾಪ್ರಕಾರಗಳು ಕರ್ನಾಟಕದ ಸಾಂಸ್ಕೃತಿಕತೆಯನ್ನು ಹೆಚ್ಚಿಸಿವೆ ಎಂದು ಅವರು ಹೇಳಿದರು.ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ, ರಾಜ್ಯಪಾಲರಾದ ಎಸ್. ಅಬ್ದುಲ್ ನಜೀರ್ ಅಬ್ದಲ್ ಕಲಾಂ ಅವರಂತೆ, ಸರಳ ವ್ಯಕ್ತಿತ್ವದ ಮಹಾ ಸಾಧಕರಾಗಿದ್ದು, ಅಪ್ರತಿಮ ರಾಷ್ಟ್ರಭಕ್ತರಾಗಿದ್ದಾರೆ ಎಂದರು.ನುಡಿಹಬ್ಬ ಸಮ್ಮೇಳನಾಧ್ಯಕ್ಷ ಡಾ. ಕಬ್ಬಿನಾಲೆ ವಸಂತ ಭಾರದ್ವಾಜ, ದೇವಳದ ಆಡಳಿತ ಮಂಡಳಿಯ ಕಿಶೋರ್‌ಕುಮಾರ್ ಶೆಟ್ಟಿ ಕೊಡೆತ್ತೂರುಗುತ್ತು, ದೇವಳದ ಅರ್ಚಕ ಶ್ರೀಹರಿನಾರಾಯಣದಾಸ ಆಸ್ರಣ್ಣ ವೇದಿಕೆಯಲ್ಲಿದ್ದರು.ಅರ್ಚಕ ಕಮಲಾದೇವಿಪ್ರಸಾದ ಆಸ್ರಣ್ಣ ಸ್ವಾಗತಿಸಿದರು. ಉಪನ್ಯಾಸಕಿ ಶೈಲಜಾ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೋಗಿಲು ನಿರಾಶ್ರಿತರಿಗೆ 5ರ ನಂತರ ವಸತಿ ಭಾಗ್ಯ
ಹೊಸ ವರ್ಷಕ್ಕೆ ಶೇ.40 ಮದ್ಯ ಮಾರಾಟ ಹೆಚ್ಚಳ!