ಕನ್ನಡಪ್ರಭ ವಾರ್ತೆ ಯಲ್ಲಾಪುರ
ಇದಕ್ಕೂ ಮುನ್ನ ನಡೆದ ಸಭಾ ಕಾರ್ಯಕ್ರಮದಲ್ಲಿ ಹಿರಿಯ ಮದ್ದಲೆವಾದಕ ಶಂಕರ ಭಾಗ್ವತ ಅವರನ್ನು ಸನ್ಮಾನಿಸಲಾಯಿತು. ಶಿವರಾಮ ಭಾಗ್ವತ ಮಣ್ಕುಳಿ ಅಭಿನಂದನಾ ನುಡಿಗಳನ್ನಾಡಿದರು.
ಹಿರಿಯ ವೈದಿಕರಾದ ರಾಮಕೃಷ್ಣ ಭಟ್ಟ, ಗಣಪತಿ ಭಟ್ಟ, ನಾರಾಯಣ ಭಟ್ಟ ಮೊಟ್ಟೆಗದ್ದೆ, ಆನಗೋಡ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎನ್.ಕೆ. ಭಟ್ಟ ಅಗ್ಗಾಶಿಕುಂಬ್ರಿ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಆರ್.ಎಸ್. ಭಟ್ಟ, ವಿಶ್ವದರ್ಶನ ಶಿಕ್ಷಣ ಸಮೂಹದ ಅಧ್ಯಕ್ಷ ಹರಿಪ್ರಕಾಶ ಕೋಣೆಮನೆ, ಎಲ್.ಎಸ್.ಎಂ.ಪಿ. ಸೊಸೈಟಿ ಅಧ್ಯಕ್ಷ ನಾಗರಾಜ ಕವಡಿಕೆರೆ, ಉಪಾಧ್ಯಕ್ಷ ಟಿ.ಆರ್. ಹೆಗಡೆ, ನಿರ್ದೇಶಕ ಎಂ.ಎನ್. ಭಟ್ಟ, ದೇವಸ್ಥಾನದ ಆಡಳಿತ ಮಂಡಳಿಯ ಗೋಪಾಲಕೃಷ್ಣ ಭಟ್ಟ, ಟಿಎಂಎಸ್ ಮಾಜಿ ನಿರ್ದೇಶಕ ವೆಂಕಟರಮಣ ಭಟ್ಟ ಕಿರಕುಂಭತ್ತಿ ಹಾಗೂ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.ವೇದಾ ಭಟ್ಟ ಪ್ರಾರ್ಥಿಸಿದರು. ಎನ್.ಎಸ್. ಭಟ್ಟ ಸ್ವಾಗತಿಸಿದರು. ನರಸಿಂಹ ಭಟ್ಟ ಕುಂಕಿಮನೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಂಜುನಾಥ ಜೋಶಿ ನಿರ್ವಹಿಸಿ, ವಂದಿಸಿದರು.
ಹಿಮ್ಮೇಳದಲ್ಲಿ ಭಾಗವತರಾಗಿ ಕೇಶವ ಹೆಗಡೆ ಕೊಳಗಿ, ಅನಂತ ಹೆಗಡೆ ದಂತಳಿಗೆ, ಶಶಾಂಕ ಬೋಡೆ, ಮಂಜುನಾಥ ಭಟ್ಟ ದೇವದಮನೆ, ಮದ್ದಲೆವಾದಕರಾಗಿ ಶಂಕರ ಭಾಗ್ವತ ಯಲ್ಲಾಪುರ, ಅನಿರುದ್ಧ ಹೆಗಡೆ ವರ್ಗಾಸರ, ಚಂಡೆವಾದಕರಾಗಿ ಪ್ರಶಾಂತ ಹೆಗಡೆ ಕೈಗಡಿ ಭಾಗವಹಿಸಿದ್ದರು.