ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ‘ಯಕ್ಷಮಂಗಳ ಪ್ರಶಸ್ತಿ’ ಪ್ರದಾನ
ಮಂಗಳೂರು ವಿವಿಯ ಡಾ.ಯು.ಆರ್ ರಾವ್ ಸಭಾಂಗಣದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ವತಿಯಿಂದ ಡಾ.ಬನಾರಿ, ಪ್ರೊ.ಸಾಮಗ, ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಅವರಿಗೆ 2024-25ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿ ಹಾಗೂ ಅಶೋಕ ಹಾಸ್ಯಗಾರ ಅವರ ದಶರೂಪಕಗಳ ದಶಾವತಾರ ಕೃತಿಗೆ ಕೃತಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.
ಯಕ್ಷಗಾನ ಗುರು ದೀವಿತ್ ಕೋಟ್ಯಾನ್ ಹಾಗೂ ಯಕ್ಷಮಂಗಳ ವಿದ್ಯಾರ್ಥಿನಿ ಕಾವ್ಯ ಹಂದೆ ಪ್ರಶಸ್ತಿ ಪತ್ರ ವಾಚಿಸಿದರು.ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇಶಕ ಡಾ.ಧನಂಜಯ ಕುಂಬ್ಳೆ ಸ್ವಾಗತಿಸಿದರು. ಕೇಂದ್ರದ ಸಂಶೋಧನಾ ಅಧಿಕಾರಿ ಡಾ.ಸತೀಶ್ ಕೊಣಾಜೆ ವಂದಿಸಿದರು. ಯಕ್ಷಮಂಗಳ ವಿದ್ಯಾರ್ಥಿನಿ ಸಾಯಿಸುಮ ನಾವಡ ನಿರೂಪಿಸಿದರು.ಯಕ್ಷ ನಿರೂಪಣೆ ಮತ್ತು ಗಣಪತಿ ಕೌತುಕಇಡೀ ಕಾರ್ಯಕ್ರಮವನ್ನು ಕಲಾವಿದೆ ಸಾಯಿಸುಮ ನಾವಡ ಯಕ್ಷಗಾನದ ಅರ್ಥಗಾರಿಕೆ ಶೈಲಿಯಲ್ಲಿ ನಿರೂಪಣೆ ನಡೆಸಿದ್ದು ವಿಶೇಷ ಗಮನ ಸೆಳೆಯಿತು. ಕಾರ್ಯಕ್ರಮದ ಉದ್ದಕ್ಕೂ ನಡುನಡುವೆ ಯಕ್ಷಗಾನದ ಹಾಡುಗಳನ್ನು, ದೀವಿತ್ ಶ್ರೀಧರ ಕೋಟ್ಯಾನ್ ರಚಿಸಿದ ಅಭಿನಂದನಾ ಗೀತೆಯನ್ನು ಗಾಯಕ ಮನ್ವಿತ್ ಇರಾ ಹಾಡಿದರು. ಹಿಮ್ಮೇಳದಲ್ಲಿ ಕೌಶಿಕ್ ಪುತ್ತಿಗೆ, ಸ್ಕಂದ ಕೊನ್ನಾರ್ ಮತ್ತು ಹರಿಶ್ಚಂದ್ರ ನಾಯ್ಕ ಸಹಕರಿಸಿದ್ದರು.ಯಕ್ಷಮಂಗಳ ತಂಡಗಳಾದ ವಿದ್ಯಾರ್ಥಿಗಳಾದ ಶ್ರೇಯಸ್, ಮಹೇಶ್ ಶೆಟ್ಟಿ, ಸುವರ್ಣ ಅವರಿಂದ ಪೂರ್ವರಂಗದ ಭಾಗವಾದ ಗಣಪತಿ ಕೌತುಕ ಪ್ರಸ್ತುತಪಡಿಸಲಾಯಿತು.ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರರು ಅನಾರೋಗ್ಯ ನಿಮಿತ್ತ ಕಾರ್ಯಕ್ರಮದಲ್ಲಿ ಭಾಗವಹಿಸಿರಲಿಲ್ಲ.