ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ದೇಶದಲ್ಲೇ ಯಲಹಂಕ ಪ್ರಥಮ

KannadaprabhaNewsNetwork |  
Published : Oct 06, 2024, 01:16 AM IST
ಯಲಹಂಕದ ಮೈಲಪ್ಪನಹಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷಕ್ಕೆ ನೋಂದಣಿಯಲ್ಲಿ ಪ್ರಮುಖ ಪಾತ್ರವಹಿಸಿದ ಬಿಜೆಪಿ ಕಾರ್ಯಕರ್ತರು, ಮುಖಂಡರನ್ನು ಶಾಸಕ ಎಸ್‌.ಆರ್‌.ವಿಶ್ವನಾಥ್‌ ಅವರು ಅಭಿನಂದಿಸಿದರು. | Kannada Prabha

ಸಾರಾಂಶ

ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ದೇಶದಲ್ಲೇ ಯಲಹಂಕ ಕ್ಷೇತ್ರಕ್ಕೆ ಪ್ರಥಮ ಸ್ಥಾನ ದೊರೆತಿದ್ದು, ಶಾಸಕ ಎಸ್‌.ಆರ್‌. ವಿಶ್ವನಾಥ್ ಕ್ಷೇತ್ರದಲ್ಲಿರುವ ಕೇಸರಿ ವನದಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಿದ್ದರು.

ಕನ್ನಡಪ್ರಭ ವಾರ್ತೆ ಯಲಹಂಕ

ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ದೇಶದಲ್ಲೇ ಯಲಹಂಕ ಕ್ಷೇತ್ರಕ್ಕೆ ಪ್ರಥಮ ಸ್ಥಾನ ದೊರೆತಿರುವ ಹಿನ್ನೆಲೆಯಲ್ಲಿ ಯಲಹಂಕ ಶಾಸಕ ಎಸ್‌.ಆರ್‌. ವಿಶ್ವನಾಥ್ ಕ್ಷೇತ್ರದ ಮೈಲಪ್ಪನಹಳ್ಳಿಯಲ್ಲಿರುವ ಕೇಸರಿ ವನದಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಿ, ಕ್ಷೇತ್ರದ ಬಿಜೆಪಿ ಕಾರ್ಯಕರ್ತರು, ಮುಖಂಡರಿಗೆ ಅಭಿನಂದನೆ ಸಲ್ಲಿಸಿದರು. ಇದೇ ವೇಳೆ ಯಲಹಂಕ ಗ್ರಾಮಾಂತರ ಮತ್ತು ನಗರ ಮಂಡಲಗಳಿಗೆ ನೂತನ ಪದಾಧಿಕಾರಿಗಳನ್ನು ಘೋಷಣೆ ಮಾಡಿದರು.

ಬಳಿಕ ಮಾತನಾಡಿದ ಅವರು, ಯಲಹಂಕ ಕ್ಷೇತ್ರ ದೇಶದಲ್ಲೇ ಅತೀ ಹೆಚ್ಚು ಸದಸ್ಯತ್ವ ನೋಂದಣಿ ಮಾಡಿಸುವ ಮೂಲಕ ಮೊದಲ ಸ್ಥಾನದ ಗಳಿಸಿದ್ದು, ಗುರುವಾರದವರೆಗೆ 1 ಲಕ್ಷ 78 ಸಾವಿರ ಸದಸ್ಯರನ್ನು ಯಲಹಂಕ ಕ್ಷೇತ್ರದ ಕಾರ್ಯಕರ್ತರು, ಮುಖಂಡರು ಮಾಡಿಸಿದ್ದಾರೆ. ಅಭಿಯಾನದ ಅವಧಿ ಪೂರ್ಣಗೊಳ್ಳುವವರೆಗೂ ಸದಸ್ಯತ್ವ ಅಭಿಯಾನ ಭರದಿಂದ ಸಾಗಲಿದೆ ಎಂದು ಹೇಳಿದರು.

ಯಲಹಂಕ ಗ್ರಾಮಾಂತರ ಮತ್ತು ನಗರ ಮಂಡಲಗಳಿಗೆ ಹೊಸ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಯಲಹಂಕ ನಗರ ಮಂಡಲ ಅಧ್ಯಕ್ಷರಾಗಿ ಎಂ.ಸತೀಶ್ ಎರಡನೇ ಬಾರಿಗೆ ಪುನರಾಯ್ಕೆಯಾಗಿದ್ದಾರೆ, ಉಳಿದಂತೆ ಪ್ರಧಾನ ಕಾರ್ಯದರ್ಶಿಗಳಾಗಿ ಪವನ್ ಕುಮಾರ್ ಮತ್ತು ಈಶ್ವರ್ ಅವರನ್ನು ಆಯ್ಕೆ ಮಾಡಲಾಗಿದೆ. ಯಲಹಂಕ ಗ್ರಾಮಾಂತರ ಮಂಡಲ ಅಧ್ಯಕ್ಷರಾಗಿ ದಾಸನಪುರ ಹೋಬಳಿಯ ರಾಮಮೂರ್ತಿ ಅವರನ್ನು ಆಯ್ಕೆ ಮಾಡಲಾಗಿದೆ, ಪ್ರಧಾನ ಕಾರ್ಯದರ್ಶಿಗಳಾಗಿ ಅದ್ದೆವಿಶ್ವನಾಥಪುರ ಮಂಜುನಾಥ್ ಮತ್ತು ಸೋಮು(ಪುನರಾಯ್ಕೆ) ಅವರನ್ನು ಆಯ್ಕೆ ಮಾಡಲಾಗಿದೆ. ಉಳಿದ ಪದಾಧಿಕಾರಿಗಳ ಆಯ್ಕೆಯನ್ನು ಶೀಘ್ರದಲ್ಲೇ ಮಾಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್, ಹಿರಿಯ ಬಿಜೆಪಿ ಮುಖಂಡರಾದ ದಿಬ್ಬೂರು ಜಯಣ್ಣ, ಎಸ್.ಎನ್.ರಾಜಣ್ಣ, ಎಚ್.ಬಿ.ಹನುಮಯ್ಯ, ಚೊಕ್ಕನಹಳ್ಳಿ ವೆಂಕಟೇಶ್, ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಸತೀಶ್ ಕಡತನಮಲೆ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಜಿ.ಜೆ.ಮೂರ್ತಿ, ಯಲಹಂಕ ಗ್ರಾಮಾಂತರ ಮಂಡಲ ರೈತ ಮೋರ್ಚಾ ಅಧ್ಯಕ್ಷ ಎಚ್.ಸಿ.ರಾಜೇಶ್, ಪ್ರಧಾನ ಕಾರ್ಯದರ್ಶಿ ಪಿ.ಕೆ.ರಾಜಣ್ಣ, ಯಲಹಂಕ ಕ್ಷೇತ್ರ ಬಿಜೆಪಿ ನೂತನ ಪದಾಧಿಕಾರಿಗಳಾದ ಎಂ.ಸತೀಶ್, ರಾಮಮೂರ್ತಿ, ಅದ್ದೆವಿಶ್ವನಾಥಪುರ ಮಂಜುನಾಥ್, ಪವನ್ ಕುಮಾರ್, ಈಶ್ವರ್, ಸೋಮು, ಸಿಂಗನಾಯಕನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಸ್.ಜಿ.ಪ್ರಶಾಂತ್ ರೆಡ್ಡಿ, ಬಿಜೆಪಿ ಮುಖಂಡರಾದ ಡಾ। ಉದ್ದಂಡಯ್ಯ, ಕೃಷ್ಣಯ್ಯ, ವಿ.ವಿ.ರಾಮಮೂರ್ತಿ, ಎ.ಸಿ.ಮುನಿಕೃಷ್ಣಪ್ಪ, ಮುರಾರಿ ರಾಮು, ವೆಂಕಟೇಶ್ ಇದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ