ಯಳಂದೂರು ವಕೀಲರ ಸಂಘ ಕಿಡಿ

KannadaprabhaNewsNetwork |  
Published : Nov 04, 2026, 01:00 AM IST
 ಮನವಿ | Kannada Prabha

ಸಾರಾಂಶ

ರಾಜ್ಯಾದ್ಯಂತ ವಕೀಲರ ಮೇಲೆ ಆಗುತ್ತಿರುವ ದೌರ್ಜನ್ಯವನ್ನು ಖಂಡಿಸಿ ಯಳಂದೂರು ವಕೀಲರ ಸಂಘದಿಂದ ಮಂಗಳವಾರ ಪ್ರತಿಭಟನೆ ನಡೆಯಿತು.

ಯಳಂದೂರು: ರಾಜ್ಯಾದ್ಯಂತ ವಕೀಲರ ಮೇಲೆ ಆಗುತ್ತಿರುವ ದೌರ್ಜನ್ಯವನ್ನು ಖಂಡಿಸಿ ಯಳಂದೂರು ವಕೀಲರ ಸಂಘದಿಂದ ಮಂಗಳವಾರ ಪ್ರತಿಭಟನೆ ನಡೆಯಿತು.

ಪಟ್ಟಣದ ನ್ಯಾಯಾಲಯದ ಆವರಣದಲ್ಲಿರುವ ವಕೀಲರ ಸಂಘದಲ್ಲಿ ಉಪಾಧ್ಯಕ್ಷ ಎಂ.ಮುತ್ತುರಾಜು ಅಧ್ಯಕ್ಷತೆಯಲ್ಲಿ ಸರ್ವಸದಸ್ಯರ ಸಭೆ ನಡೆಯಿತು. ಈ ವೇಳೆ ಕರ್ನಾಟಕ ವಕೀಲರ ಪರಿಷತ್ತಿನ ಸೂಚನೆ ಮೇರೆಗೆ ರಾಜ್ಯದ ಎಲ್ಲಾ ವಕೀಲರ ಸಂಘಗಳು ಆಯಾಯ ನ್ಯಾಯಾಲಯದ ಗೇಟ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದು, ಅದರಂತೆ ಯಳಂದೂರು ವಕೀಲರು ಸಂಘವು ಸಹ ಸರ್ವಾನುಮತದಿಂದ ವಕೀಲರ ಮೇಲಿನ ಕೊಲೆ, ಹಲ್ಲೆ, ದೌರ್ಜನ್ಯಗಳ ವಿರುದ್ಧ ಪ್ರತಿಭಟಿಸುವುದು ಸೂಕ್ತವೆಂದು ತೀರ್ಮಾನಿಸಲಾಯಿತು.

ಬಳಿಕ ಯಳಂದೂರು ತಹಸೀಲ್ದಾರ್ ಕಚೇರಿಗೆ ತೆರಳಿದ ಎಲ್ಲಾ ವಕೀಲರು, ತಹಸೀಲ್ದಾರ್ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರವನ್ನು ಸಲ್ಲಿಸಿ, ರಾಜ್ಯದಲ್ಲಿ ವಕೀಲರ ಮೇಲೆ ನಿರಂತರವಾಗಿ ಕೊಲೆ, ಹಲ್ಲೆ, ದೌರ್ಜನ್ಯಗಳಂತಹ ಅಮಾನುಷ ಕೃತ್ಯಗಳು ನಡೆಯುತ್ತಿದ್ದು, ವಕೀಲರಿಗೆ ಯಾವುದೇ ರೀತಿಯ ರಕ್ಷಣೆ ಇಲ್ಲದಂತಾಗಿದೆ. ರಾಜ್ಯಪಾಲರು ಮಧ್ಯಪ್ರವೇಶಿಸಿ ವಕೀಲರ ರಕ್ಷಣೆಗೆ ಗಂಭೀರವಾದ ಕಾಯ್ದೆಯನ್ನು ರೂಪಿಸಿ, ಜಾರಿಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕೆಂದು ಒತ್ತಾಯಿಸಿದರು.

ವಕೀಲರ ಸಂಘದ ಉಪಾಧ್ಯಕ್ಷ ಎಂ.ಮುತ್ತುರಾಜು, ಕಾರ್ಯದರ್ಶಿ ಜಿ.ಎನ್.ಸಂಪತ್, ಜಂಟಿ ಕಾರ್ಯದರ್ಶಿ ಗೌಡಹಳ್ಳಿ ಮಹೇಶ್, ವಕೀಲರಾದ ಸಿ.ಆರ್.ನಾಗರಾಜು, ಸಿ.ಸಿದ್ದರಾಜು, ಕೆ.ಬಿ.ಶಶಿಧರ್, ಎಂ.ರವೀಶ್, ಸಿ.ಎಂ.ಮಹದೇವಸ್ವಾಮಿ, ಪಿ.ನಾಗರಾಜು, ಹೊನ್ನೂರು ನಾಗರಾಜು, ಅಶ್ವಿನ್ ಕುಮಾರ್, ರಾಜಣ್ಣ, ಕಾಂತರಾಜು, ವೈ.ಸಿ.ಕುಮಾರ್, ಪರಶಿವಮೂರ್ತಿ, ನಂಜುಂಡಸ್ವಾಮಿ, ಶ್ರೀನಿವಾಸಮೂರ್ತಿ, ಮನು, ಚಂದನಾ, ಉಮಾ, ಮಹೇಶ್ವರಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಿತ್ತೂರ ಚೆನ್ನಮ್ಮ, ಭುವನೇಶ್ವರಿದೇವಿ ಭಾವಚಿತ್ರದ ಮೆರವಣಿಗೆ
ಫೋಟೋಗಳನ್ನು ಆಧರಿಸಿ ಮಹಿಳೆಯ ಆದಾಯ ನಿರ್ಧರಿಸಲಾಗದು: ಕೋರ್ಟ್‌